Prajwal Revanna Case: ಪ್ರಜ್ವಲ್ ರೇವಣ್ಣ ಆಗಮನಕ್ಕೆ ಮುಹೂರ್ತ ಫಿಕ್ಸ್‌ ?

ಬೆಂಗಳೂರು, ಮೇ 15: ಹಾಸನ ಪೆನ್‌ಡ್ರೈವ್‌ ಪ್ರಕರಣದಲ್ಲಿ ಸಂಸದ ಪ್ರಜ್ವಲ್‌ ರೇವಣ್ಣ ಅವರ ಪ್ರಕರಣ ರಾಜ್ಯ ರಾಜಕೀಯದಲ್ಲಿ ದೊಡ್ಡ ಬಿರುಗಾಳಿಯನ್ನ ಎಬ್ಬಿಸಿದೆ. ಹಾಸನ ಜೆಡಿಎಸ್‌ ಸಂಸದ ಹಾಗೂ ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡರ ಮೊಮ್ಮಗ ಪ್ರಜ್ವಲ್ ರೇವಣ್ಣ ನಾಳೆ ಬೆಂಗಳೂರಿಗೆ ಮರಳುವ ಸಾಧ್ಯತೆಯಿದೆ.

ಪ್ರಜ್ವಲ್‌ ರೇವಣ್ಣ ಅವರ ವಿರುದ್ಧ ಲೈಂಗಿಕ ದೌರ್ಜನ್ಯ ಕೇಸ್ ದಾಖಲಾಗುತ್ತಿದ್ದಂತೆ ದೇಶದಿಂದಲೇ ಪರಾರಿಯಾಗಿಯಾರುವ ಪ್ರಜ್ವಲ್, ಜರ್ಮನಿ‌ ತಲುಪಿದ್ದರು. ಅಲ್ಲಿಂದ ಯಾವ ದೇಶಕ್ಕೆ ಹೋದರು? ಈಗ ಎಲ್ಲಿದ್ದಾರೆ ಎನ್ನುವುದೇ ಗೊತ್ತಿಲ್ಲ. ಇನ್ನೂ ರಾಜ್ಯ ಸರ್ಕಾರ ಈ ಪ್ರಕರಣವನ್ನ ಎಸ್‌ ಐಟಿ ಗೆ ನೀಡಿದ್ದು, ಬರೋಬ್ಬರಿ 19 ದಿನವಾದರೂ ಪ್ರಜ್ವಲ್ ರೇವಣ್ಣ ಎಲ್ಲಿದ್ದಾರೆ? ಯಾವಾಗ ದೇಶಕ್ಕೆ ವಾಪಸ್ ಬರುತ್ತಾರೆ ಎನ್ನುವ ಬಗ್ಗೆಯೂ ಮಾಹಿತಿ ಇಲ್ಲ. ಇದೀಗ ಪ್ರಜ್ವಲ್‌ ರೇವಣ್ಣ ಅವರು ವಾಪಸ್‌ ದೇಶಕ್ಕೆ ಬರುತ್ತಿರುವ ಕುರಿತು ಮಾಹಿತಿ ಸಿಕ್ಕಿದೆ.

JDS Leader On The Run In Sex Tapes Case Back Tonight Ticket Sparks Buzz

ಸಂಸದ ಪ್ರಜ್ವಲ್‌ ರೇವಣ್ಣ, ಇಂದು (ಮೇ 15) ಜರ್ಮನಿಯಿಂದ ಬೆಂಗಳೂರಿಗೆ ಆಗಮಿಸುತ್ತಾರೆ ಎನ್ನುವ ಸುದ್ದಿ ಇತ್ತು. ಇದಕ್ಕೆ ಪೂರಕವೆಂಬಂತೆ ಪಜ್ವಲ್​ ಫ್ಲೈಟ್​ ಟಿಕೆಟ್​ ಸಹ ಬುಕ್ ಮಾಡಿದ್ದರು. ಈ ಮಾಹಿತಿ ತಿಳಿಯುತ್ತಿದ್ದಂತೆಯೇ ಎಸ್​ಐಟಿ ಅಧಿಕಾರಿಗಳು ಪ್ರಜ್ವಲ್​ಗಾಗಿ ಬೆಂಗಳೂರಿನ ಕೆಂಪೇಗೌಡ ವಿಮಾನ ನಿಲ್ದಾಣದಲ್ಲಿ ಕಾಯುತ್ತಿದ್ದಾರೆ. ನಾಳೆ ರಾತ್ರಿ ಬೆಂಗಳೂರು ಅಂತರಾಷ್ಟ್ರೀಯ ವಿಮಾನ ನಿಲ್ದಾಣಕ್ಕೆ ಪ್ರಜ್ವಲ್ ರೇವಣ್ಣ ಬರೋ ಸಾಧ್ಯತೆ ಇದೆ ಎನ್ನಲಾಗಿದೆ.

ಮೇ 16 ನೇ ತಾರೀಖು ಅಂದರೆ ನಾಳೆ ರಾತ್ರಿಗೆ ಪ್ರಜ್ವಲ್ ರೇವಣ್ಣ ರಿಟರ್ನ್ ಟಿಕೆಟ್ ಬುಕ್ ಆಗಿದ್ದು, ಸೀಟ್ ಕೂಡ ಕನ್ಫರ್ಮ್ ಆಗಿರೋ ಮಾಹಿತಿ ಲಭ್ಯವಾಗಿದೆ. ಏಪ್ರಿಲ್ 27ರ ಮುಂಜಾನೆ ಮೂರು ಗಂಟೆಗೆ ಬೆಂಗಳೂರಿನ ಕೆಂಪೇಗೌಡ ಅಂತರಾಷ್ಟ್ರೀಯ ವಿಮಾನ ನಿಲ್ದಾಣದ ಮೂಲಕ ವಿದೇಶಕ್ಕೆ ತೆರಳಿದ್ದರು. ಲುಫ್ತಾನ್ಸಾ ಏರ್‌ಲೈನ್ಸ್‌ಗೆ ಸೇರಿದ LH 755 ವಿಮಾನದಲ್ಲಿ ಜರ್ಮನಿಯ ಫ್ರಾಂಕ್ ಫರ್ಟ್‌ಗೆ ಪ್ರಜ್ವಲ್ ರೇವಣ್ಣ‌ ಹಾರಿದ್ದರು.

ನಾಳೆ ಮಧ್ಯರಾತ್ರಿ 12.30ಕ್ಕೆ ಲ್ಯಾಂಡ್ ಆಗಲಿರುವ ಲುಫ್ತಾನ್ಸಾ ಏರ್‌ಲೈನ್ಸ್ ವಿಮಾನದಲ್ಲಿ ಬೆಂಗಳೂರು ಟಿಕೆಟ್ ಬುಕ್‌ ಆಗಿದ್ದು, ಟಿಕೆಟ್ ನಲ್ಲಿ ಪ್ರಜ್ವಲ್ ರೇವಣ್ಣ ಬ್ಯುಸಿನೆಸ್ ಕ್ಲಾಸ್ ಪ್ರಯಾಣಿಕ ಎಂದು ನಮೂದಿಸಲಾಗಿದೆ.
ಪ್ರಜ್ವಲ್‌ ರೇವಣ್ಣ ಅವರು ಮೇ 1ರಂದು ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದ್ದು, ''ನಾನು ವಿಚಾರಣೆಗೆ ಹಾಜರಾಗಲು ಬೆಂಗಳೂರಿನಲ್ಲಿ ಇಲ್ಲದ ಕಾರಣ ನನ್ನ ವಕೀಲರ ಮೂಲಕ ಸಿಐಡಿ ಬೆಂಗಳೂರಿಗೆ ತಿಳಿಸಿದ್ದೇನೆ, ಶೀಘ್ರದಲ್ಲೇ ಸತ್ಯಕ್ಕೆ ಜಯ ಸಿಗಲಿದೆ'' ಎಂದು ಹೇಳಿದ್ದರು.

ಇನ್ನೂ ಕಳೆದ ಕೆಲವು ವಾರಗಳಲ್ಲಿ ಪ್ರಜ್ವಲ್ ರೇವಣ್ಣ ಹೆಸರಿನಲ್ಲಿ ಸಾಕಷ್ಟು ಬುಕ್ ಆಗಿರುವುದನ್ನು ಗಮನಿಸಬಹುದಾಗಿದೆ. ಈ ಪ್ರಕರಣ ಹೈ ಪ್ರೊಫೈಲ್ ಪ್ರಕರಣದ ತನಿಖೆ ನಡೆಸುತ್ತಿರುವ ಕರ್ನಾಟಕ ಪೊಲೀಸರ ವಿಶೇಷ ತನಿಖಾ ತಂಡ (ಎಸ್‌ಐಟಿ) ವಿಮಾನ ನಿಲ್ದಾಣದ ಅಧಿಕಾರಿಗಳಿಗೆ ಒಂದು ಕಣ್ಣಿಡಲು ಎಚ್ಚರಿಕೆ ನೀಡಿದೆ. ರೇವಣ್ಣ ಪತ್ತೆಗೆ ಲುಕೌಟ್ ನೋಟಿಸ್ ಹಾಗೂ ಬ್ಲೂ ಕಾರ್ನರ್ ನೋಟಿಸ್ ಜಾರಿ ಮಾಡಲಾಗಿದ್ದು, ವಿಮಾನ ನಿಲ್ದಾಣದಲ್ಲಿ ಎಸ್‌ ಐ ಟಿ ಅಧಿಕಾರಿಗಳು ಕಾಯುತ್ತಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+