YSV Datta : ತೆನೆ ಇಳಿಸಿ, ಕೈ ಹಿಡಿಯಲು ಮುಂದಾದ ವೈ ಎಸ್ ವಿ ದತ್ತ
ಬೆಂಗಳೂರು,ಡಿಸೆಂಬರ್14: ಜೆಡಿಎಸ್ ಪಕ್ಷವನ್ನ ತೊರೆದ ಮಾಜಿ ಶಾಸಕ ವೈ ಎಸ್ ವಿ ದತ್ತ. ಶೀಘ್ರದಲ್ಲೇ ಅಧಿಕೃತವಾಗಿ ಕಾಂಗ್ರೆಸ್ ಪಕ್ಷವನ್ನ ಸೇರುತ್ತೇನೆ ಎಂದು ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ.
ಈ ಕುರಿತು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಭೇಟಿ ಬಳಿಕ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ನನಗೆ ಈಗ 70 ವರ್ಷವಾಗಿದೆ. 2023 ನನ್ನ ಕೊನೆಯ ಚುನಾವಣೆ. ಕಡೂರು ಕ್ಷೇತ್ರದ ಜನತೆಯ ನಿರ್ಧಾರಕ್ಕೆ ನನ್ನ ರಾಜಕೀಯ ನಿವೃತ್ತಿ ವಿಚಾರವನ್ನು ಬಿಟ್ಟಿದ್ದೇನೆ.ಕಾರ್ಯಕರ್ತರಿಗೆ ಬೇರೆ ಕಡೆ ವ್ಯವಸ್ಥೆ ಆಗಬೇಕು, ನನ್ನ ನಂಬಿಕೊಂಡ ಬೆಂಬಲಿಗರು, ಕಾರ್ಯಕರ್ತರ ಭವಿಷ್ಯ ವಿಚಾರ ಮಾಡಬೇಕು ಎಂದರು.
ನಾನ್ನ ಮತ್ತು ದೇವೇಗೌಡರ ರಾಜಕೀಯ 50 ವರ್ಷ ಸುದೀರ್ಘವಾದುದ್ದು. ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ನಾನು ದೇವೇಗೌಡರು ಇರುವವರೆಗೂ ಅವರ ಜೊತೆ ಇರುತ್ತೇನೆ ಎಂದು ಹೇಳಿದ್ದೆ. ಆದರೆ ಕಾರ್ಯಕರ್ತರು ಕಾಂಗ್ರೆಸ್ ಸೇರ್ಪಡೆಯಾಗುವ ಬಗ್ಗೆ ಒತ್ತಾಯಿಸಿದ್ದಾರೆ. ನನ್ನ ನಂಬಿ ಬಂದವರು ಅತಂತ್ರ ಆಗಬಾರದು. ಅವರಿಗೆ ನೆಲೆಕೊಡಿಸಲು ಕಾಂಗ್ರೆಸ್ ಸೇರ್ಪಡೆಯಾಗುತ್ತಿದ್ದೇನೆ. ನಾನು ದೇವೇಗೌಡರಿಗೆ ಈ ವಿಚಾರ ಹೇಳಲು ಹೋಗಿ ವಾಪಸ್ ಬಂದಿದ್ದೇನೆ. ನಮ್ಮ ಕ್ಷೇತ್ರದ ಕೋಮುವಾದಿಗಳ ಜೊತೆ ಸೆಣಸಬೇಕು ಅಂದ್ರೆ ಕಾಂಗ್ರೆಸ್ ಸೇರಬೇಕು ಎಂಬುದು ನಮ್ಮ ಕಾರ್ಯಕರ್ತರು ಮತ್ತು ಕ್ಷೇತ್ರದ ಜನರ ಒತ್ತಾಯವಾಗಿದೆ ಎಂದು ಹೇಳಿದರು.

ದೇವೇಗೌಡರ ಜೊತೆ ನಾನು 20 ವರ್ಷಗಳಿಂದ ಇದ್ದೇನೆ. ನನಗೂ ಅವರಿಗೆ ತಂದೆ ಮಗನ ಸಂಬಂಧ. ತಂದೆ ಸಮಾನರಾದ ದೇವೇಗೌಡರಿಗೆ ಈ ವಿಚಾರ ಹೇಳದೆ ಒದ್ದಾಡುತ್ತಿದ್ದೇನೆ. ನಾನು ಯಾವುದೇ ಷರತ್ತು ಹಾಕದೆ ಕಾಂಗ್ರೆಸ್ ಸೇರ್ಪಡೆಯಾಗಲು ನಿರ್ಧರಿಸಿದ್ದೇನೆ. ನಾನು ಹತ್ತಾರು ಭಾರೀ ಈ ವಿಚಾರ ಹೇಳಲು ದೇವೇಗೌಡರನ್ನು ಭೇಟಿಯಾಗಿದ್ದೆ, ಆದ್ರೆ ಅದು ಸಾಧ್ಯವಾಗಿಲ್ಲ. ನನ್ನ ಎಂಎಲ್‌ಸಿ ಮಾಡಿದ್ದು ದೇವೇಗೌಡರು ಮತ್ತು ಕುಮಾರಸ್ವಾಮಿ ಅವರು. ಅವರ ಋಣ ನನ್ನ ಮೇಲೆ ಇದೆ. ಅದಕ್ಕಾಗಿ ನಾನು ತಳಮಟ್ಟದಿಂದ ಪಕ್ಷವನ್ನು ಕಟ್ಟಿ ಬೆಳೆಸಿದ್ದೇನೆ. ಜೆಡಿಎಸ್‌ನಿಂದ ಶಾಸಕ ಆಗುವವರೆಗೂ ಪಕ್ಷ ಕಟ್ಟಿದ್ದೇನೆ ಎಂದು ಹೇಳಿದರು.
ಮಲ್ಲಿಕಾರ್ಜುನ್ ಖರ್ಗೆಯರವನ್ನು ಭೇಟಿಯಾಗಿದ್ದಿರಾ ಎಂಬ ವಿಚಾರವಾಗಿ ಮಾತನಾಡಿ, ನಾನು ಖರ್ಗೆಯವರನ್ನ ಭೇಟಿಯಾಗಿಲ್ಲ, ಸಿದ್ದರಾಮಯ್ಯ ಅವರನ್ನ ಹಲವು ಬಾರೀ ಭೇಟಿಯಾಗಿದ್ದೇನೆ. ಬೇರೆ ಬೇರೆ ಸಂದರ್ಭದಲ್ಲಿ ಸಿದ್ದರಾಮಯ್ಯ ಮತ್ತು ನಾನು ಒಂದೇ ವೇದಿಕೆಯನ್ನ ಹಂಚಿಕೊಂಡಿದ್ದೇವೆ. ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್ ಅವರನ್ನು ಭೇಟಿಯಾಗಿದ್ದೇನೆ. ಈಗಾಗಲೇ ಅವರಿಗೆ ಕ್ಷೇತ್ರದ ಬಗ್ಗೆ ತಿಳಿಸಿದ್ದೇನೆ. ಇನ್ನೂ ಕಾಂಗ್ರೆಸ್ ಸೇರ್ಪಡೆ ವಿಚಾರವಾಗಿ ದಿನಾಂಕ ನಿಗದಿಯಾಗಿಲ್ಲ ಎಂದರು.












Click it and Unblock the Notifications