ಉಪ ಚುನಾವಣೆ ಪ್ರಚಾರದಲ್ಲಿ ಹುಮ್ಮಸ್ಸು ಕಳೆದುಕೊಂಡಿತೇ ಜೆಡಿಎಸ್?
ಬೆಂಗಳೂರು, ಅಕ್ಟೋಬರ್ 26: ರಾಜ್ಯ ಸಮ್ಮಿಶ್ರ ಸರ್ಕಾರದ ನೇತೃತ್ವವಹಿಸಿರುವ ಜೆಡಿಎಸ್ ಐದು ಕ್ಷೇತ್ರಗಳ ಉಪ ಚುನಾವಣೆಗಳಲ್ಲಿ ಗೆಲ್ಲುವ ಉತ್ಸಾಹ ತೋರುತ್ತಿದ್ದರೂ ಪಕ್ಷದ ಮುಖಂಡರು ಮಾತ್ರ ಯಾವುದೇ ಕ್ಷೇತ್ರದಲ್ಲಿ ಇಲ್ಲಿಯವರೆಗೆ ಗಂಭೀರ ಪ್ರಚಾರದಲ್ಲಿ ತೊಡಗಿಲ್ಲ ಎನ್ನುವುದು ಅಭ್ಯರ್ಥಿಗಳಲ್ಲೇ ಒಳಗೊಳಗೆ ಆತಂಕವನ್ನುಂಟು ಮಾಡುತ್ತಿದೆ.
ಮಾಜಿ ಪ್ರಧಾನಿ ಎಚ್‌ಡಿ ದೇವೇಗೌಡ, ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ, ಜೆಡಿಎಸ್ ರಾಜ್ಯಾಧ್ಯಕ್ಷ ಎಚ್ ವಿಶ್ವನಾಥ್ ಸೇರಿದಂತೆ ಪಕ್ಷದ ಎಲ್ಲಾ ಮುಂಚೂಣಿ ಮುಖಂಡರು ಹಾಗೂ ಜೆಡಿಎಸ್ ನ ಸಚಿವರು ರಾಜ್ಯದ ಐದು ಕ್ಷೇತ್ರಗಳ ಪೈಕಿ ಪೂರ್ಣ ಪ್ರಮಾಣದ ಪ್ರಚಾರ ಕಾರ್ಯದಲ್ಲಿ ತೊಡಗಿಲ್ಲ.
ಈ ಹಿನ್ನೆಲೆಯಲ್ಲಿ ದೇವೇಗೌಡ ಹಾಗೂ ಕುಮಾರಸ್ವಾಮಿಯವರ ವರ್ಚಸ್ಸನ್ನೇ ನಂಬಿಕೊಂಡಿರುವ ಅಭ್ಯರ್ಥಿಗಳಿಗೆ ಫಲಿತಾಂಶ ಏನಾಗುತ್ತದೆ ಎಂಬ ಚಿಂತೆ ಕಾಡುತ್ತಿದೆ.
ಮೂಲಗಳ ಪ್ರಕಾರ ಸಿಎಂ ಕುಮಾರಸ್ವಾಮಿ ಅಕ್ಟೋಬರ್ 29ರಿಂದ ರಾಮನಗರ, ಮಂಡ್ಯ ಹಾಗೂ ಶಿವಮೊಗ್ಗ ಕ್ಷೇತ್ರದಲ್ಲಿ ಪ್ರಚಾರ ನಡೆಸಲಿದ್ದಾರೆ. ಆದರೆ ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡ ಲಂಡನ್‌ಗೆ ತೆರಳಿರುವುದರಿಂದ ಉಪ ಚುನಾವಣೆಯ ಪ್ರಚಾರ ಕಾರ್ಯದಲ್ಲಿ ಅವರು ಪಾಳ್ಗೊಳ್ಳುವುದು ಅನುಮಾನ ಎನ್ನಲಾಗುತ್ತಿದೆ.
ಇನ್ನು ಅನಾರೋಗ್ಯದಿಂದ ಬಳಲುತ್ತಿರುವ ಪಕ್ಷದ ಅಧ್ಯಕ್ಷ ಎಚ್ ವಿಶ್ವನಾಥ್ ಸೋಮವಾರದಿಂದ ಒಂದೆರೆಡು ದಿನಗಳ ಕಾಲ ಶಿವಮೊಗ್ಗ ಮತ್ತು ಮಂಡ್ಯ ಜಿಲ್ಲೆಯಲ್ಲಿ ಪ್ರಚಾರ ಕೈಗೊಳ್ಳುರಾದರೂ ನಾರೋಗ್ಯದ ಕಾರಣದಿಂದ ಸಂಪೂರ್ಣ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳುವುದು ಅನುಮಾನವಾಗಿದೆ.
ಈ ಹಿನ್ನೆಲೆಯಲ್ಲಿ ಪಕ್ಷದ ಮುಂಚೂಣಿ ನಾಯಕರ ಪೈಕಿ ಸಿಎಂ ಕುಮಾರಸ್ವಾಮಿ ಮಾತ್ರ ಮೂರು ಕ್ಷೇತ್ರಗಳಲ್ಲಿ ಪ್ರಚಾರ ನಡೆಸಲಿದ್ದು ಇನ್ನುಳಿದ ಯಾವುದೇ ನಾಯಕರು ಪ್ರಚಾರದಲ್ಲಿ ತೊಡಗಿಸಿಕೊಳ್ಳುವ ಲಕ್ಷಣಗಳು ಕಾಣುತ್ತಿಲ್ಲ.
ರಾಜ್ಯ ಸಮ್ಮಿಶ್ರ ಸರ್ಕಾರದ 26 ಸಚಿವರ ಪೈಕಿ ಸಿಎಂ ಕುಮಾರಸ್ವಾಮಿ ಸೇರಿ 11 ಜನ ಸಂಪುಟದ ಸದಸ್ಯರಾಗಿದ್ದರೂ ಕೂಡ ಉಪ ಚುನಾವಣೆಯ ಪ್ರಚಾರದಲ್ಲಿ ಜೆಡಿಎಸ್ ನ ಯಾವುದೇ ಸಚಿವರು ಸಂಪೂರ್ಣವಾಗಿ ತೊಡಗಿಸಿಕೊಂಡಿಲ್ಲ.
ಪಕ್ಷದ ಆಂತರಿಕ ಹಾಗೂ ಕುಟುಂಬದ ಆತಂರಿಕ ಕ್ಷಮತೆ ಕಾರಣದಿಂದ ಜೆಡಿಎಸ್ ನಾಯಕರು ಪೂರ್ಣಪ್ರಮಾಣದ ಪ್ರಚಾರ ಕಾರ್ಯದಲ್ಲಿ ತೊಡಗಿಸಿಕೊಳ್ಳಲು ಸಾಧ್ಯವಾಗುತ್ತಿಲ್ಲ ಎನ್ನಲಾಗುತ್ತಿದೆ.

ಸಚಿವ ಎಚ್‌ಡಿ ರೇವಣ್ಣ ಅಸಮಾಧಾನ
ಲೋಕೋಪಯೋಗಿ ಸಚಿವ ಎಚ್‌ಡಿ ರೇವಣ್ಣ ಕೂಡ ಈವರೆಗೆ ಪ್ರಚಾರ ಕಾರ್ಯದಲ್ಲಿ ಭಾಗಿಯಾಗದಿರುವುದು ಹಲವು ಸಂಶಯಗಳಿಗೆ ಕಾರಣವಾಗಿದೆ. ಸಚಿವ ರೇವಣ್ಣ ಪತ್ನಿ ಭವಾನಿ ಪುತ್ರ ಪ್ರಜ್ವಲ್ ಕೂಡ ಮಂಡ್ಯ ಲೋಕಸಭಾ ಕ್ಷೇತ್ರದ ಟಿಕೆಟ್ ಆಕಾಂಕ್ಷಿಗಳಾಗಿದ್ದರು. ಆದರೆ ಪಕ್ಷದ ವರಿಷ್ಠ ದೇವೇಗೌಡರು ರೇವಣ್ಣ ಪತ್ನಿ ಅಥವಾ ಪುತ್ರನಿಗೆ ಟಿಕೆಟ್ ನೀಡಲು ನಿರಾಕರಿಸಿ ಕೇವಲ ಸಿಎಂ ಕುಮಾರಸ್ವಾಮಿ ಪತ್ನಿ ಅನಿತಾ ಕುಮಾರಸ್ವಾಮಿಯನ್ನು ರಾಮನಗರದಿಂದ ಕಣಕ್ಕಿಳಿಸುವ ನಿರ್ಧಾರ ಕೈಗೊಂಡಿದ್ದರು.

ಉಪ ಚುನಾವಣೆ ಪ್ರಚಾರಕ್ಕೆ ದಳದ ಕಲಿಗಳ ಹಿಂದೇಟು
ಮುಖ್ಯಮಂತ್ರಿ ಎಚ್‌ಡಿ ಕುಮಾರಸ್ವಾಮಿ ನೇತೃತ್ವದ ಸಮ್ಮಿಶ್ರ ಸರ್ಕಾರದಲ್ಲಿ ಬಹುಮುಖ್ಯ ಪಾತ್ರ ವಹಿಸಿರುವ ಜೆಡಿಎಸ್ ರಾಮನಗರ, ಮಂಡ್ಯ ಹಾಗೂ ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ತಮ್ಮ ಅಭ್ಯರ್ಥಿಯನ್ನು ಕಣಕ್ಕಿಳಿಸಿದೆ. ಆದರೆ ಯಾವುದೇ ನಾಯಕರು ಈ ಕ್ಷಣದವರೆಗೆ ಪ್ರಚಾರದಲ್ಲಿ ಕಾಣುತ್ತಿಲ್ಲ. ಮೈತ್ರಿ ಸರ್ಕಾರ ಬಹುಮುಖ್ಯ ಜವಾಬ್ದಾರಿ ಹೊಂದಿರುವ ಕುಮಾರಸ್ವಾಮಿ ಕೂಡ ಪಕ್ಷದ ಅಭ್ಯರ್ಥಿಗಳ ಪರವಾಗಿ ಇಲ್ಲಿವರೆಗೆ ಪ್ರಚಾರ ನಡೆಸಿಲ್ಲ, ಸಚಿವ ಸಂಪುಟದ ಯಾವುದೇ ಸಹೋದ್ಯೋಗಿಗಳು ಕೂಡ ಪ್ರಚಾರಕ್ಕೆ ಕಾರ್ಯಕ್ಕೆ ಬಂದಿಲ್ಲ ಹೀಗಾಗಿ ಜೆಡಿಎಸ್ ಚುನಾವಣೆಯಲ್ಲಿ ಆಸಕ್ತಿ ಕಳೆದುಕೊಂಡಿದೆಯೇ ಎನ್ನುವ ಅನುಮಾನ ಕಾಡುತ್ತಿದೆ.

ದೇವೇಗೌಡರು ವಿದೇಶದಲ್ಲಿ, ಅಭ್ಯರ್ಥಿಗಳು ಚಿಂತೆಯಲ್ಲಿ
ಜೆಡಿಎಸ್‌ನ ಟ್ರಂಪ್ ಕಾರ್ಡ್ ಎಂದು ಹೇಳಲಾಗುವ ಪಕ್ಷದ ವರಿಷ್ಠ ಎಚ್‌ಡಿ ದೇವೇಗೌಡರು ವಾರಗಳ ಕಾಲ ಲಂಡನ್ ಪ್ರವಾಸಕ್ಕೆ ತೆರಳಿದ್ದಾರೆ. ಉಪ ಚುನಾವಣೆ ಮುಗಿದ ಬಳಿಕವಷ್ಟೇ ಅವರು ವಿದೇಶದಿಂದ ವಾಪಸ್ ಆಗಲಿದ್ದಾರೆ. ಒಂದೆಡೆ ಅವರು ವಿದೇಶದಲ್ಲಿದ್ದರೆ ಇನ್ನೊಂದೆಡೆ ಪಕ್ಷದ ಅಭಯ್ರ್ತೀಗಳು ಚಿಂತೆಯಲ್ಲಿ ಮುಳುಗಿದ್ದಾರೆ.
ಕಾರಣವೇನೆಂದರೆ ಹಳೆ ಮೈಸೂರು ಹಾಗೂ ಮಧ್ಯ ಕರ್ನಾಟಕದ ಶಿವಮೊಗ್ಗ ಕ್ಷೇತ್ರದಲ್ಲಿ ದೇವೇಗೌಡರ ಪ್ರಭಾವ ಅತಿ ಮುಖ್ಯವಾಗಿದ್ದು, ದೊಡ್ಡ ಗೌಡರಿದ್ದರೆ ಗೆಲುವು ಸಲೀಸು ಎಂಬ ವಿಶ್ವಾಸದಲ್ಲಿದ್ದರು.

ಜೆಡಿಎಸ್‌ಎ ಬಿಜೆಪಿ ಪ್ರತಿಸ್ಪರ್ಧಿ, ಆಂತರಿಕವಾಗಿ ಕಾಂಗ್ರೆಸ್ ನಿಜವಾದ ಸ್ಪರ್ಧಿಗಳು
ಜೆಡಿಎಸ್ ಸ್ಪರ್ಧಿಸಿರುವ ರಾಮನಗರ ವಿಧಾನಸಭೆ ಹಾಗೂ ಮಂಡ್ಯ ಮತ್ತು ಶಿವಮೊಗ್ಗ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಪಕ್ಷಕ್ಕೆ ಬಿಜೆಪಿ ಪ್ರತಿಸ್ಪರ್ಧಿ ಎಂದು ಮೇಲ್ನೋಟಕ್ಕೆ ಗೊತ್ತಾಗುತ್ತದೆ ಆದರೆ ಮೈತ್ರಿ ಪಕ್ಷವಾದ ಕಾಂಗ್ರೆಸ್ ಕೂಡ ಮೈತ್ರಿ ಪಕ್ಷಕ್ಕೆ ಬೆಂಬಲ ನೀಡಿದರೆ ಮಾತ್ರ ಈ ಮೂರು ಕ್ಷೇತ್ರದಲ್ಲಿ ಗೆಲುವು ಸುಲಭ ಎನ್ನುವುದನ್ನು ಜೆಡಿಎಸ್ ಒಪ್ಪಿಕೊಳ್ಳುತ್ತದೆ.
ಸಧ್ಯದ ಪರಿಸ್ಥಿತಿಯಲ್ಲಿ ಜೆಡಿಎಸ್ ಸ್ಪರ್ಧಿಸಿರುವ ಮೂರೂ ಕ್ಷೇತ್ರದಲ್ಲಿ ಕಾಂಗ್ರೆಸ್ ಮುಖಂಡರು ಜೆಡಿಎಸ್ ಅಭ್ಯರ್ಥಿಗಳ ಪರವಾಗಿ ಕೆಲಸ ಮಾಡುತ್ತಿಲ್ಲ, ಹೀಗಾಗಿ ತನ್ನ ಪ್ರತಿಸ್ಪರ್ಧಿ ಬಿಜೆಪಿಗಿಂತಲೂ ಹೆಚ್ಚಾಗಿ ಆಂತರಿಕವಾಗಿ ಕಾಂಗ್ರೆಸ್‌ನಲ್ಲಿ ಯಾವ ನಾಯಯಕರು ಕೈಕೊಡುತ್ತಾರೋ ಎಂಬ ಆತಂಕ ಎದುರಾಗಿದೆ.
-
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
Good Friday: ಗುಡ್ ಫ್ರೈಡೇ - ಈಸ್ಟರ್ ರಜೆ ಸ್ಪೆಷಲ್: ಬೆಂಗಳೂರು – ಮಡಗಾಂವ್ ನಡುವೆ ವಿಶೇಷ ರೈಲು ಸೇವೆ ಆರಂಭ -
Viral Video: ಹುಡುಗಿ ಪ್ರೀತಿಗೆ ಒಪ್ಪಿಕೊಂಡಳು ಆದ್ರೆ ರಿಂಗೇ ಮಿಸ್ ಆಯ್ತು: MI ಮ್ಯಾಚ್ನಲ್ಲೊಂದು ಸ್ವಾರಸ್ಯಕರ ಘಟನೆ -
Bagalkote: ಮನೆಗೆ ಯಾರನ್ನೂ ಸೇರಿಸದ ವೀರಣ್ಣ ಚರಂತಿಮಠ ಶಾಸಕರಾಗಲೂ ಲಾಯಕ್ಕಾ?: ಸಿದ್ದರಾಮಯ್ಯ -
Price Hike: ಏಪ್ರಿಲ್ 1ರಿಂದ ಜನಸಾಮಾನ್ಯರಿಗೆ ಬೆಲೆ ಏರಿಕೆ ಶಾಕ್: ವಿದ್ಯುತ್, ನೀರು, ಟೋಲ್ ದರ ಸೇರಿ ಏನೆಲ್ಲ ದುಬಾರಿ? -
ಮಾರ್ಚ್ 31ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ












Click it and Unblock the Notifications