ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಶಾಲೆಗಳ ಬಗ್ಗೆ ಶಿಕ್ಷಣ ಸಚಿವರಿಗೆ ಜೆಡಿಎಸ್ ಪತ್ರ

|
Google Oneindia Kannada News

ಬೆಂಗಳೂರು, ಅ.30 : ಅನಧಿಕೃತ ಶಾಲೆಗಳ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಮುಂದಾಗಿರುವ ರಾಜ್ಯ ಸರ್ಕಾರ ಮತ್ತು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಕಿಮ್ಮನೆ ರತ್ನಾಕರ್ ವಿರುದ್ಧ ಜೆಡಿಎಸ್ ವಾಗ್ದಾಳಿ ನಡೆಸಿದೆ. ಸಚಿವರಿಗೆ ಶಿಕ್ಷಣ ಇಲಾಖೆಯ ಪರಿಕಲ್ಪನೆ ಇಲ್ಲ ಎಂದು ಜೆಡಿಎಸ್ ವಕ್ತಾರ ರಮೇಶ್ ಬಾಬು ಆರೋಪಿಸಿದ್ದಾರೆ.

ಬೆಂಗಳೂರಿನ ಖಾಸಗಿ ಶಾಲೆಗಳಲ್ಲಿ ನಡೆದ ಅಪ್ರಾಪ್ತ ಮಕ್ಕಳ ಮೇಲಿನ ಲೈಂಗಿಕ ದೌರ್ಜನ್ಯದ ವಿರುದ್ಧ ಸೂಕ್ತ ಕ್ರಮಕೈಗೊಳ್ಳುವುದು ಹಾಗೂ ಇಂತಹ ಘಟನೆಗಳು ಮರುಕಳಿಸದಂತೆ ಎಚ್ಚರಿಕೆ ವಹಿಸುವುದು ರಾಜ್ಯ ಸರ್ಕಾರದ ಕೆಲಸವಾಗಿರುತ್ತದೆ. ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳು ಸಿಬ್ಬಂದಿಗಳನ್ನು ನೇಮಕ ಮಾಡಿಕೊಳ್ಳುವಾಗ ಅತ್ಯಂತ ಎಚ್ಚರಿಕೆಯನ್ನು ವಹಿಸಬೇಕಾಗಿರುತ್ತದೆ ಎಂದು ಅವರು ಹೇಳಿದ್ದಾರೆ.

education minister Kimmane Ratnakar

ಏಪ್ರಿಲ್ ಮತ್ತು ಮೇ ತಿಂಗಳಿನಲ್ಲಿ ಶೈಕ್ಷಣಿಕ ವರ್ಷ ಪ್ರಾರಂಭವಾಗುತ್ತದೆ. ಆಗ ಮಕ್ಕಳನ್ನು ಶಾಲೆಗೆ ಸೇರಿಸುವ ಮೊದಲು ಅನಧಿಕೃತ ಶಾಲೆಗಳನ್ನು ತಡೆಯಲು ಮತ್ತು ಇಂತಹ ಶಾಲೆಗಳಿಗೆ ಮಕ್ಕಳನ್ನು ಸೇರಿಸದಂತೆ ತಡೆಯುವ ಪ್ರಯತ್ನವನ್ನು ಸರ್ಕಾರ ಮಾಡಬೇಕಾಗುತ್ತದೆ. [ಅನಧಿಕೃತ ಶಾಲೆಗಳ ವಿರುದ್ಧ ಕ್ರಿಮಿನಲ್ ಕೇಸ್]

ಆದರೆ, ಶೈಕ್ಷಣಿಕ ವರ್ಷದ ಮಧ್ಯಭಾಗದಲ್ಲಿ ಶಾಲೆಗಳನ್ನು ಮುಚ್ಚುವ ಅಥವಾ ನಡೆಸದಂತೆ ತಡೆಯುವ ಯಾವುದೇ ಪ್ರಯತ್ನ ಮಕ್ಕಳ ಭವಿಷ್ಯಕ್ಕೆ ತೊಂದರೆಯನ್ನು ಉಂಟು ಮಾಡುತ್ತದೆ. ಇಲ್ಲಿಯವರೆಗೆ ರಾಜ್ಯ ಸರ್ಕಾರ ಅನಧಿಕೃತ ಶಾಲೆಗಳನ್ನು ತಡೆಯುವಂತಹ ಯಾವುದೇ ಆದೇಶಗಳನ್ನು ಜಾರಿಗೊಳಿಸಿಲ್ಲ ಎಂದು ಪತ್ರಿಕಾ ಪ್ರಕಟಣೆಯಲ್ಲಿ ರಮೇಶ್ ಬಾಬು ಆರೋಪಿಸಿದ್ದಾರೆ.

ನೋಂದಾದಯಿತ ಶಿಕ್ಷಣ ಸಂಸ್ಥೆಗಳು ಶೈಕ್ಷಣಿಕ ವರ್ಷದಲ್ಲಿ ನಿಗದಿತ ಸಮಯದಲ್ಲಿ ಅರ್ಜಿ ಸಲ್ಲಿಸಿ ಪ್ರಾರಂಭಿಸಬೇಕಾದ ಶಾಲೆಗಳಿಗೆ ಅನುಮೋದನೆಯನ್ನು ಪಡೆಯಬೇಕಾಗಿರುತ್ತದೆ. ಅನುಮೋದನೆ ಪಡೆದಿರುವ ಶಾಲೆಗಳಿಗೆ ನವೀಕರಣವನ್ನು ಅವಶ್ಯಕವಿದ್ದಲ್ಲಿ ಪಡೆಯಬೇಕಾಗಿರುತ್ತದೆ.

ಅನುಮೋದನೆಯಿಲ್ಲದ ಶಾಲೆಗಳಲ್ಲಿ ಮಕ್ಕಳ ಹಿತದೃಷ್ಠಿಯಿಂದ ಮಕ್ಕಳಿಗೆ ಪರೀಕ್ಷೆ ಬರೆಯಲು ಅವಕಾಶ ನೀಡುವ ಕಾಯ್ದೆಯನ್ನು ರಾಜ್ಯ ಸರ್ಕಾರ ಜಾರಿಗೆ ತಂದಿದೆ. ಅಲ್ಲದೇ ನಿಗದಿತ ಸಮಯದಲ್ಲಿ ಅನುಮೋದನೆ ನೀಡುವಂತಹ ಯಾವುದೇ ಕಾಲಮಿತಿಯನ್ನು ರಾಜ್ಯ ಸರ್ಕಾರ ಅಳವಡಿಸಿರುವುದಿಲ್ಲ ಎಂದು ರಮೇಶ್ ಬಾಬು ದೂರಿದ್ದಾರೆ.

ಒಂದು ಘಟನೆಯನ್ನು ಆಧಾರವಾಗಿಟ್ಟುಕೊಂಡು ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಮೇಲೆ ಕ್ರಿಮಿನಲ್ ಪ್ರಕರಣ ಹೂಡುವುದಾಗಿ ಶಿಕ್ಷಣ ಸಚಿವರು ನೀಡಿರುವ ಹೇಳಿಕೆ ಅವರ ಅಜ್ಞಾನವನ್ನು ತೋರಿಸುತ್ತದೆ. ರಾಜ್ಯದ ಬಹುತೇಕ ಪ್ರಾಥಮಿಕ ಶಿಕ್ಷಣದ ವಿದ್ಯಾರ್ಥಿಗಳು ಖಾಸಗಿ ಶಾಲೆಗಳಲ್ಲಿ ವ್ಯಾಸಂಗ ಮಾಡುತ್ತಿದ್ದಾರೆ. ಇದರ ಮಾಹಿತಿಯನ್ನು ಪಡೆದು, ಸಚಿವರು ಜವಾಬ್ದಾರಿಯಿಂದ ಹೇಳಿಕೆಗಳನ್ನು ನೀಡಬೇಕು ಎಂದು ಸಲಹೆ ನೀಡಿದ್ದಾರೆ.

ರಾಜ್ಯ ಸರ್ಕಾರ ಹಾಗೂ ಶಿಕ್ಷಣ ಸಚಿವರು ಶಿಕ್ಷಣ ವ್ಯವಸ್ಥೆಯಲ್ಲಿನ ವೈಫಲ್ಯಗಳನ್ನು ತಡೆದು, ಖಾಸಗಿ ಶಾಲೆಗಳ ಮೇಲೆ ಕ್ರಿಮಿನಲ್ ಪ್ರಕರಣ ದಾಖಲಿಸುವಂತಹ ಪ್ರಯತ್ನವನ್ನು ಕೈಬಿಟ್ಟು, ನಡೆದಿರುವ ಘಟನೆಗಳನ್ನು ಆಧಾರವಾಗಿಟ್ಟುಕೊಂಡು, ಖಾಸಗಿ ಶಿಕ್ಷಣ ಸಂಸ್ಥೆಗಳೊಂದಿಗೆ ಸಮನ್ವಯತೆಯನ್ನು ಸಾಧಿಸಿ ಇಂತಹ ಪ್ರಕರಣಗಳು ಮರುಕಳಿಸದಂತೆ ಪ್ರಾಮಾಣಿಕ ಪ್ರಯತ್ನವನ್ನು ಮಾಡಬೇಕು ಎಂದು ರಮೇಶ್ ಬಾಬು ಒತ್ತಾಯಿಸಿದ್ದಾರೆ.

English summary
The Janata Dal (Secular) open letter to Karnataka Primary and secondary education minister Kimmane Ratnakar on the issue of criminal case against the illegal school.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X