ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕಾಂಗ್ರೆಸ್-ಜೆಡಿಎಸ್‌ ಮೈತ್ರಿ, ಜೆಡಿಎಸ್‌ಗೆ ಸಭಾಪತಿ ಹುದ್ದೆ!

By Gururaj
|
Google Oneindia Kannada News

ಬೆಂಗಳೂರು, ಮೇ 23 : ಕಾಂಗ್ರೆಸ್-ಜೆಡಿಎಸ್ ಮೈತ್ರಿ ವಿಧಾನಪರಿಷತ್ತಿನಲ್ಲಿಯೂ ಮುಂದುವರೆಯುವ ಸಾಧ್ಯತೆ ಇದೆ. ವಿಧಾನಪರಿಷತ್ ಸಭಾಪತಿ ಸ್ಥಾನವನ್ನು ಜೆಡಿಎಸ್ ಪಡೆಯಲಿದೆ. ಈಗಾಗಲೇ ವಿಧಾನಸಭೆ ಸ್ಪೀಕರ್ ಸ್ಥಾನವನ್ನು ಕಾಂಗ್ರೆಸ್‌ಗೆ ಬಿಟ್ಟುಕೊಡಲಾಗಿದೆ.

ಸದ್ಯ ವಿಧಾನಪರಿಷತ್ ಸಭಾಪತಿಯಾಗಿರುವ ಡಿ.ಎಚ್.ಶಂಕರಮೂರ್ತಿ ಅವರು ಜೂನ್ 21ರಂದು ನಿವೃತ್ತರಾಗಲಿದ್ದಾರೆ. ಈಗಾಗಲೇ ಪರಿಷತ್ ಚುನಾವಣೆಗೆ ದಿನಾಂಕ ನಿಗದಿಯಾಗಿದೆ. ಸಭಾಪತಿ ಸ್ಥಾನದ ಬಗ್ಗೆ ಶೀಘ್ರವೇ ಮಾತುಕತೆ ನಡೆಯುವ ಸಾಧ್ಯತೆ ಇದೆ.

ವಿಧಾನಪರಿಷತ್ತಿನ 11 ಸ್ಥಾನಗಳ ಚುನಾವಣೆ ದಿನಾಂಕ ಘೋಷಣೆವಿಧಾನಪರಿಷತ್ತಿನ 11 ಸ್ಥಾನಗಳ ಚುನಾವಣೆ ದಿನಾಂಕ ಘೋಷಣೆ

'ವಿಧಾನಸಭೆಯ ಸ್ಪೀಕರ್ ಸ್ಥಾನ ಬಿಟ್ಟುಕೊಡಲು ನಾವು ಒಪ್ಪಿಗೆ ನೀಡಿದ್ದೇವೆ. ಪರಿಷತ್‌ನಲ್ಲಿ ನಮ್ಮ ಪಕ್ಷದ ಹಿರಿಯ ನಾಯಕರಿದ್ದಾರೆ. ಅದ್ದರಿಂದ, ಸಭಾಪತಿ ಸ್ಥಾನ ಬಿಟ್ಟುಕೊಡಲು ಕೇಳಿದ್ದೇವೆ' ಎಂದು ವಿಧಾನಪರಿಷತ್‌ನ ಹಿರಿಯ ಜೆಡಿಎಸ್ ನಾಯಕರು ಹೇಳಿದ್ದಾರೆ.

JDS may get Legislative Council Chairman post

ಕಾಂಗ್ರೆಸ್-ಜೆಡಿಎಸ್ ಸರ್ಕಾರ ಅಸ್ತಿತ್ವಕ್ಕೆ ಬಂದ ಬಳಿಕ ಎಚ್.ಡಿ.ದೇವೇಗೌಡರು ವಿಧಾನ ಪರಿಷತ್ ಸಭಾಪತಿ ಸ್ಥಾನದ ಕುರಿತು ಚರ್ಚೆ ನಡೆಸಲಿದ್ದಾರೆ. ಕಾಂಗ್ರೆಸ್ ಜೆಡಿಎಸ್‌ ಪ್ರಸ್ತಾವನೆಗೆ ಒಪ್ಪಿಗೆ ನೀಡಲಿದೆಯೇ? ಎಂದು ಕಾದು ನೋಡಬೇಕು.

ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 8ರಂದು ಚುನಾವಣೆ!ವಿಧಾನ ಪರಿಷತ್‌ನ ಆರು ಸ್ಥಾನಗಳಿಗೆ ಜೂನ್ 8ರಂದು ಚುನಾವಣೆ!

ಕಾಂಗ್ರೆಸ್-ಜೆಡಿಎಸ್ ಮೈತ್ರಿ ಸರ್ಕಾರ ಅಸ್ತಿತ್ವಕ್ಕೆ ಬಂದಿದ್ದು, ಜೆಡಿಎಸ್ ಕಾಂಗ್ರೆಸ್ ಪಕ್ಷಕ್ಕೆ ಸ್ಪೀಕರ್ ಸ್ಥಾನ ಬಿಟ್ಟುಕೊಟ್ಟಿದೆ. ಕೆ.ಆರ್.ರಮೇಶ್ ಕುಮಾರ್ ಅವರು ವಿಧಾನಸಭೆ ಸ್ಪೀಕರ್ ಆಗಲಿದ್ದಾರೆ.

English summary
Legislative Council Chairman D.H. Shankaramurthy retiring from the Council on June 21, 2018. Congress-Janata Dal (Secular) alliance is likely to continue in Council. JD(S) may get post of chairman.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X