ಬಿಜೆಪಿಯಲ್ಲಿ ಜೆಡಿಎಸ್ ವಿಲೀನ ? ಜೆಡಿಎಸ್ ಹೇಳಿದ್ದೇನು ?!
ಕರ್ನಾಟಕದಲ್ಲಿ ಬಿಜೆಪಿ - ಜೆಡಿಎಸ್‌ನ ನಡುವೆ ಚುನಾವಣೆ ಪೂರ್ವದಲ್ಲಿ ಮೈತ್ರಿಯಾಗಿದೆ. ಆದರೆ ಕರ್ನಾಟಕದಲ್ಲಿ ಈ ಎರಡೂ ಪಕ್ಷಗಳ ನಡುವೆ ಬಿರುಕು ಮೂಡುತ್ತಿದ್ದೆ ಎನ್ನುವ ವಿಷಯ ಗಂಭೀರವಾಗಿ ಚರ್ಚೆ ನಡೆಯುತ್ತಿದೆ. ಇದೇ ಸಂದರ್ಭದಲ್ಲಿ ಜೆಡಿಎಸ್ ಪಕ್ಷವು ಮುಂದಿನ ದಿನಗಳಲ್ಲಿ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎನ್ನುವ ವಿಚಾರವೂ ಹೆಚ್ಚು ಚರ್ಚೆಯಾಗುತ್ತಿದೆ. ಇದೀಗ ಈ ವಿಚಾರವಾಗಿ ಜೆಡಿಎಸ್ ಪಕ್ಷವು ಸ್ಪಷ್ಟನೆ ನೀಡಿದೆ. ಆದರೆ ಜೆಡಿಎಸ್‌ನ ಸ್ಪಷ್ಟನೆಯ ಹೊರತಾಗಿಯೂ ಈ ವಿಚಾರ ಚರ್ಚೆಯಲ್ಲಿದೆ. ಇದೇನು ಎನ್ನುವ ವಿವರ ಇಲ್ಲಿದೆ.
ರಾಜ್ಯದಲ್ಲಿ ಬಿಜೆಪಿಯು ಜೆಡಿಎಸ್ ಪಕ್ಷದೊಂದಿಗೆ ಸಮನ್ವಯತೆ ಸಾಧಿಸುತ್ತಿಲ್ಲ. ಎರಡೂ ಪಕ್ಷಗಳ ನಡುವೆ ಹೊಂದಾಣಿಕೆ ಕೊರತೆ ಇದೆ. ಬಿಜೆಪಿ ನಡೆಸಿರುವ ಜನಾಕ್ರೋಶ ಯಾತ್ರೆ ಹಾಗೂ ಪ್ರತಿಭಟನೆಗಳಿಗೆ ಜೆಡಿಎಸ್‌ಗೆ ಆಹ್ವಾನ ನೀಡುತ್ತಿಲ್ಲ ಎನ್ನುವುದು ಸೇರಿದಂತೆ ವಿವಿಧ ಚರ್ಚೆಗಳ ನಡುವೆ ಬಿಜೆಪಿಯೊಂದಿಗೆ ಜೆಡಿಎಸ್ ಪಕ್ಷವು ವಿಲೀನವಾಗಲಿದೆ ಎನ್ನುವ ಗಂಭೀರ ಚರ್ಚೆ ನಡೆದಿದೆ. ಇದೀಗ ಈ ಚರ್ಚೆಗೆ ಸಂಬಂಧಿಸಿದಂತೆ ಜೆಡಿಎಸ್ ಮುಖಂಡ ಹಾಗೂ ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ರಿಯಾಕ್ಟ್ ಮಾಡಿದ್ದಾರೆ. ಬಿಜೆಪಿಯೊಂದಿಗೆ ಜೆಡಿಎಸ್ ವಿಲೀನವಾಗಲಿದೆ ಎನ್ನುವುದಕ್ಕೆ ಸಂಬಂಧಿಸಿದಂತೆ ಅವರು ಹೇಳಿದ್ದೇನು ಎನ್ನುವ ವಿವರ ಇಲ್ಲಿದೆ.

ಜೆಡಿಎಸ್ ಪಕ್ಷವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದು ಕೇಂದ್ರ ಬಿಜೆಪಿ ನಾಯಕರ ಸಮ್ಮುಖದಲ್ಲಿ ಅಂದಿನಿಂದ ರಾಜ್ಯ ಬಿಜೆಪಿ ಹಾಗೂ ಜೆಡಿಎಸ್ ನಾಯಕರ ನಡುವೆ ಹೇಳಿಕೊಳ್ಳುವಂತಹ ಹೊಂದಾಣಿಕೆ ಇಲ್ಲ ಅಂತಲೇ ಹೇಳಲಾಗುತ್ತಿದೆ. ಇದರ ನಡುವೆ ಜೆಡಿಎಸ್ ಸಂಪೂರ್ಣವಾಗಿ ಬಿಜೆಪಿಯೊಂದಿಗೆ ವಿಲೀನವಾಗಲಿದೆ ಎನ್ನುವ ವಿಷಯವು ಗಂಭೀರವಾಗಿ ಚರ್ಚೆಯಾಗುತ್ತಿದೆ. ಆದರೆ ಈ ವಿಷಯಕ್ಕೆ ಜೆಡಿಎಸ್ ಅಚ್ಚರಿಯ ಹೇಳಿಕೆಯನ್ನೇ ಕೊಟ್ಟಿದೆ.
"ನಾವು ಬಿಜೆಪಿಯೊಂದಿಗೆ ಹೊಂದಾಣಿಕೆ ಮಾಡಿಕೊಂಡಿದ್ದೇವೆ. ಆದರೆ ಯಾವುದೇ ಕಾರಣಕ್ಕೂ ಜೆಡಿಎಸ್ ಪಕ್ಷವನ್ನು ಬಿಜೆಪಿಯೊಂದಿಗೆ ವಿಲೀನ ಮಾಡುವುದಿಲ್ಲ" ಎಂದು ನಿಖಿಲ್ ಕುಮಾರಸ್ವಾಮಿ ಅವರು ಹೇಳಿದ್ದಾರೆ. "ಜೆಡಿಎಸ್‌ಗೆ ಚುನಾವಣೆಗಳಲ್ಲಿ ನಮ್ಮ ವೋಟ್ ಶೇರಿಂಗ್ ಪ್ರಮಾಣವು ಹೆಚ್ಚಳವಾಗುತ್ತಿದೆ. ಪ್ರಾದೇಶಿಕ ಪಕ್ಷವಾಗಿ ನಾವು ಮುಂದುವರಿಯಲಿದ್ದೇವೆ. ನಮ್ಮೊಂದಿಗೆ ನಮ್ಮ ಪಕ್ಷದ ಕಾರ್ಯಕರ್ತರು ಇದ್ದಾರೆ" ಎಂದು ಅವರು ಹೇಳಿದ್ದಾರೆ.
ಮರ್ಜ್ ಆಗುವ ಪ್ರಶ್ನೆಯೇ ಇಲ್ಲ: ನಾವು ಬಿಜೆಪಿಯೊಂದಿಗೆ ಮರ್ಜ್ ಆಗುವ ಪ್ರಶ್ನೆಯೇ ಇಲ್ಲ. ನಾವು ಸ್ವತಂತ್ರವಾಗಿ ಇರಲಿದ್ದೇವೆ. ಮೈತ್ರಿ ಎರಡೂ ಪಕ್ಷಗಳ ನಡುವೆ ಚುನಾವಣೆ ಸಂದರ್ಭದಲ್ಲಿ ಮಾತ್ರ ಆಗಿದೆ. ಒಟ್ಟಾರೆಯಾಗಿ ಮರ್ಜ್ ಮಾಡಿಕೊಳ್ಳುವುದಿಲ್ಲ. ಇನ್ನು ಕರ್ನಾಟಕದಲ್ಲಿ ಶಾಸಕರ ಸಂಖ್ಯೆ 19ಕ್ಕೆ ಇಳಿಕೆಯಾಗುವುದಕ್ಕೆ ಬೇರೆ ಬೇರೆ ಕಾರಣಗಳು ಇವೆ. ಆದರೆ, ಮುಂದಿನ ದಿನಗಳಲ್ಲಿ ಇಲ್ಲವೇ ಯಾವಾಗಲೂ ನಾವು ಮೈತ್ರಿ ಮಾಡಿಕೊಳ್ಳಲ್ಲ ಅಂದಿದ್ದಾರೆ. ನಮ್ಮ ಪಕ್ಷವನ್ನು ಕಟ್ಟಿ, ಬೆಳೆಸಿರುವ ಸಾವಿರಾರು ಜನ ಕಾರ್ಯಕರ್ತರಿದ್ದಾರೆ. ನಾವು ಕರ್ನಾಟಕದ ಹಾಗೂ ದೇಶದ ಹಿತಕ್ಕಾಗಿ ಮೈತ್ರಿ ಮಾಡಿಕೊಂಡಿದ್ದೇವೆ. ಇದರಲ್ಲಿ ವಿಲೀನವಾಗುವ ಯಾವುದೇ ಉದ್ದೇಶವೂ ನಮ್ಮ ಮುಂದೆ ಇಲ್ಲ ಅಂತ ಹೇಳಿದ್ದಾರೆ.











Click it and Unblock the Notifications