ಕಾಂಗ್ರೆಸ್‌ನಿಂದ ಆಫರ್ ನಿಜ ಎಂದು ಬಾಂಬ್ ಸಿಡಿಸಿದ ಜೆಡಿಎಸ್ ಶಾಸಕ!
ಕರ್ನಾಟಕದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ, ಕೆಪಿಸಿಸಿ ಅಧ್ಯಕ್ಷರ ಬದಲಾವಣೆ ಹಾಗೂ ಬಣ ರಾಜಕೀಯದ ನಡುವೆ ಇದೀಗ ಆಪರೇಷನ್ ಹಸ್ತ ಸಹ ನಡೆದಿದೆ. ಹೌದು ಆಪರೇಷನ್ ಹಸ್ತದ ಬಗ್ಗೆ ಜೆಡಿಎಸ್ ಶಾಸಕರೇ ಮಾಹಿತಿ ಹಂಚಿಕೊಂಡಿದ್ದು, ಇದು ಜೆಡಿಎಸ್‌ಗೆ ಶಾಕ್ ಸೃಷ್ಟಿ ಮಾಡಿದೆ. ರಾಜ್ಯ ರಾಜಕೀಯದಲ್ಲಿ ಭಾರೀ ಹೈಡ್ರಾಮಾಗಳು ನಡೆಯುತ್ತಿವೆ.
ಇದರ ನಡುವೆ ಇದೀಗ ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಶಾಸಕರಿಗೂ ಗಾಳ ಹಾಕಿದೆ ಎನ್ನುವ ವಿಷಯ ಬೆಳಕಿಗೆ ಬಂದಿದ್ದು. ಈ ವಿಷಯ ರಾಜ್ಯ ರಾಜಕೀಯದಲ್ಲಿ ಭಾರೀ ಸಂಚಲವನ್ನು ಉಂಟು ಮಾಡಿದೆ. ಹಾಗಾದರೆ ಕಾಂಗ್ರೆಸ್‌ನಿಂದ ಯಾವ ಜೆಡಿಎಸ್ ಶಾಸಕರಿಗೆ ಭಾರೀ ಡಿಮ್ಯಾಂಡ್ ಹೋಗಿತ್ತು. ಇದರ ಬಗ್ಗೆ ಅವರು ಹೇಳಿದ್ದು ಏನು ಎನ್ನುವ ವಿವರ ತಿಳಿಯೋಣ..

ಕರ್ನಾಟಕ ಕಾಂಗ್ರೆಸ್‌ನಲ್ಲಿ ಮನೆಯೊಂದು ಮೂರು ಬಾಗಿಲು ಎನ್ನುವ ಪರಿಸ್ಥಿತಿ ಇದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಸಿಎಂ ಸ್ಥಾನದಿಂದ ಕೆಳಗೆ ಇಳಿಸಿ ಮತ್ತೊಬ್ಬರು ಮುಖ್ಯಮಂತ್ರಿ ಆಗಬೇಕು ಎನ್ನುವ ಬಗ್ಗೆ ಭಾರೀ ಚರ್ಚೆಗಳು ಶುರುವಾಗಿದೆ. ಅದರಲ್ಲಿ ಮುಖ್ಯವಾಗಿ ಮುಂದಿನ ಮುಖ್ಯಮಂತ್ರಿಯಾಗಬೇಕು ಎನ್ನುವ ಸಾಲಿನಲ್ಲಿ ಉಪ ಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಅವರು ಇದ್ದಾರೆ.
ಈ ಬಾರಿ ಡಿ.ಕೆ ಶಿವಕುಮಾರ್ ಅವರು ಮುಖ್ಯಮಂತ್ರಿಯಾಗುವುದಕ್ಕೆ ಈ ಹಿಂದೆಗಿಂತಲೂ ಹೆಚ್ಚು ಸರ್ಕಸ್ ಮಾಡುತ್ತಿದ್ದಾರೆ ಎನ್ನುವುದು ಗುಟ್ಟಾಗಿ ಉಳಿದಿಲ್ಲ. ಆದರೆ, ಕಾಂಗ್ರೆಸ್‌ನಲ್ಲಿ ಇಷ್ಟೆಲ್ಲ ಸರ್ಕಸ್‌ಗಳು ಇರುವಾಗಲೇ ಕಾಂಗ್ರೆಸ್ ಪಕ್ಷದಿಂದ ಜೆಡಿಎಸ್ ಪಕ್ಷದ ಶಾಸಕರನ್ನು ಸೆಳೆಯುವ ಪ್ರಯತ್ನ ನಡೆದಿದೆ ಎನ್ನುವುದು ಭಾರೀ ಇಂಟ್ರಸ್ಟಿಂಗ್ ಆಗಿದೆ.

ಹೌದು ಕರ್ನಾಟಕ ಕಾಂಗ್ರೆಸ್‌ನಲ್ಲಿ ಭಾರೀ ದೊಡ್ಡ ಸರ್ಕಸ್‌ಗಳು ನಡೆಯುತ್ತಿವೆ. ಈ ರೀತಿ ಇರುವಾಗಲೇ ಕಾಂಗ್ರೆಸ್‌ನಿಂದ ನನಗೆ ಆಫರ್ ಬಂದಿದ್ದು ನಿಜ ಅಂತ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು ಬಾಂಬ್ ಸಿಡಿಸಿದ್ದಾರೆ.
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನನ್ನೊಂದಿಗೆ ಖಾಸಗಿಯಾಗಿ ಮಾತನಾಡಿದ್ದಾರೆ ಎಂದು ಅವರು ಸ್ಪಷ್ಪಪಡಿಸಿದ್ದಾರೆ. ಇದು ರಾಜ್ಯ ರಾಜಕೀಯದಲ್ಲಿ ಭಾರೀ ಸಂಚನಕ್ಕೆ ಕಾರಣವಾಗಿದೆ. ಕಾಂಗ್ರೆಸ್‌ನಲ್ಲಿ ಮುಖ್ಯಮಂತ್ರಿ ಬದಲಾವಣೆಯ ಬಗ್ಗೆ ಚರ್ಚೆ ನಡೆಯುವಾಗಲೇ ಮುಖ್ಯಮಂತ್ರಿಯೇ ಜೆಡಿಎಸ್ ಶಾಸಕರನ್ನು ಸಂಪರ್ಕಿಸಿದ್ದಾರೆ ಎನ್ನುವುದು ಕುತೂಹಲಕ್ಕೆ ಕಾರಣವಾಗಿದೆ.
ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ 11 ಜನ ಶಾಸಕರು ?
ಇನ್ನು ಜೆಡಿಎಸ್‌ನಿಂದ ಕಾಂಗ್ರೆಸ್‌ಗೆ 11 ಜನ ಶಾಸಕರು ಬರಲಿದ್ದಾರೆ ಎನ್ನುವ ಬಗ್ಗೆ ಇತ್ತೀಚಿನ ದಿನಗಳಲ್ಲಿ ಭಾರೀ ಚರ್ಚೆ ನಡೆದಿದೆ. ಕಾಂಗ್ರೆಸ್‌ನ ಶಾಸಕರೇ ಈಚೆಗೆ ಜೆಡಿಎಸ್‌ನಿಂದ ಇಷ್ಟರಲ್ಲೇ ಕಾಂಗ್ರೆಸ್‌ಗೆ 11 ಜನ ಶಾಸಕರು ಸೇರ್ಪಡೆಯಾಗಲಿದ್ದಾರೆ ಎನ್ನುವ ಸ್ಫೋಟಕ ಮಾಹಿತಿಯನ್ನು ಹಂಚಿಕೊಂಡಿದ್ದರು.
ಇದರ ಬೆನ್ನಲ್ಲೇ ಮಂಜುನಾಥ್ ಅವರು ಕೊಟ್ಟಿರುವ ಹೇಳಿಕೆ ಹಲವು ಅನುಮಾನಗಳಿಗೂ ಕಾರಣವಾಗಿದೆ. ರಾಜ್ಯದಲ್ಲಿ ಕಾಂಗ್ರೆಸ್‌ಗೆ ಸಂಪೂರ್ಣ ಬಹುಮತ ಇದೆ. ಈಗ ಯಾವುದೇ ಹೆಚ್ಚುವರಿ ಬೆಂಬಲದ ಅವಶ್ಯಕತೆ ಇಲ್ಲ. ಆದರೂ ಕಾಂಗ್ರೆಸ್ ಪಕ್ಷ ಜೆಡಿಎಸ್ ಪಕ್ಷದ ಶಾಸಕರನ್ನು ಯಾಕೆ ಸೆಳೆಯುತ್ತಿದೆ ಎನ್ನುವುದು ಕುತೂಹಲ ಮೂಡಿಸಿದೆ.
ಜೆಡಿಎಸ್‌ಬಿಟ್ಟು ಹೋಗಲ್ಲ: ಇನ್ನು ಇದೇ ಸಂದರ್ಭದಲ್ಲಿ ಮುಳಬಾಗಿಲಿ ಜೆಡಿಎಸ್ ಶಾಸಕ ಸಮೃದ್ಧಿ ಮಂಜುನಾಥ್ ಅವರು ನಾನು ಜೆಡಿಎಸ್ ಬಿಟ್ಟು ಹೋಗುವುದಿಲ್ಲ. ಕ್ಷೇತ್ರದ ಅಭಿವೃದ್ಧಿ ಹಾಗೂ ಅನುದಾನ ವಿಚಾರವಾಗಿ ಮಾತ್ರ ಚರ್ಚೆ ಮಾಡಲಾಗಿದೆ. ನಾನು ಯಾವುದೇ ಕಾರಣಕ್ಕೂ ಜೆಡಿಎಸ್ ಬಿಟ್ಟು ಹೋಗುವ ಪ್ರಶ್ನೆಯೇ ಇಲ್ಲ ಅಂತಲೂ ಅವರು ಹೇಳಿದ್ದಾರೆ.
ಜೆಡಿಎಸ್ ಪಕ್ಷದ ಶಾಸಕರಿಗೆ ಗಾಳ: ಇನ್ನು ಜೆಡಿಎಸ್ ಪಕ್ಷದ ಶಾಸಕರಿಗೆ ಗಾಳ ಹಾಕಿರುವ ವಿಚಾರವು ರಾಜಕೀಯ ಹೈಡ್ರಾಮಾಗೆ ಕಾರಣವಾಗಿದೆ. ರಾಜ್ಯ ಕಾಂಗ್ರೆಸ್‌ನಲ್ಲಿ ಬಣ ರಾಜಕೀಯ ಜೋರಾಗಿರುವ ಸಂದರ್ಭದಲ್ಲಿಯೇ ಜೆಡಿಎಸ್ ಶಾಸಕರಿಗೂ ಗಾಳ ಹಾಕುತ್ತಿರುವುದು ಕುತೂಹಲ ಮೂಡಿಸಿದೆ.












Click it and Unblock the Notifications