ದಳಪತಿಗಳಿಗೆ ಕಾಡುತ್ತಿದ್ಯಾ ಆಪರೇಷನ್ ಗುಮ್ಮ! ಜೆಡಿಎಸ್ ಶಾಸಕರು ರೆಸಾರ್ಟ್ ಶಿಫ್ಟ್! ಇಲ್ಲಿದೆ ಇನ್ ಸೈಡ್ ಸ್ಟೋರಿ
ಹಾಸನ, ನವೆಂಬರ್ 08: 2024 ರ ಲೋಕಸಭಾ ಚುನಾವಣೆಗೆ ರಾಜ್ಯದಲ್ಲಿ ರಾಜಕೀಯ ಪಕ್ಷಗಳು ಭರ್ಜರಿ ತಯಾರಿ ನಡೆಸುತ್ತಿವೆ. ಇತ್ತ ಕಾಂಗ್ರೆಸ್ 20 ಕ್ಷೇತ್ರಗಳನ್ನ ಗೆಲ್ಲುವ ಟಾರ್ಗೆಟ್ ಹಾಕಿಕೊಂಡಿದ್ದು, ಅನ್ಯ ಪಕ್ಷಗಳ ಹಾಲಿ ಶಾಸಕರಿಗೆ ಗಾಳ ಹಾಕುತ್ತಿದ್ದು, ತನ್ನ ಶಾಸಕರನ್ನ ಹಿಡಿದಿಟ್ಟುಕೊಳ್ಳಲು ದಳಪತಿಗಳು ರೆಸಾರ್ಟ್ ಗೆ ಶಿಫ್ಟ್ ಆಗಿದ್ದಾರೆ.
ಹೌದು, ಲೋಕಸಭೆ ಚುನಾವಣೆಗೂ ಮುನ್ನ ರಾಜ್ಯ ರಾಜಕೀಯದಲ್ಲಿ ಆಪರೇಷನ್ ಹಸ್ತ ಶುರುವಾಗಿದೆ. ಜೆಡಿಎಸ್ ಶಾಸಕರನ್ನೇ ಟಾರ್ಗೆಟ್ ಮಾಡಿರುವ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್, 19 ಶಾಸಕರ ಫೈಕಿ 13 ಶಾಸಕರಿಗೆ ಗಾಳ ಹಾಕಿದೆ ಎನ್ನಲಾಗಿದ್ದು, ಡಿ ಕೆ ಶಿವಕುಮಾರ್ ಆಪರೇಷನ್ ಹಸ್ತಕ್ಕೆ ಬ್ರೇಕ್ ಹಾಕಲು ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್ ರಾಜ್ಯಾಧ್ಯಕ್ಷ ಹೆಚ್ ಡಿ ಕಮಾರಸ್ವಾಮಿ ಮಾಸ್ಟರ್ ಪ್ಲಾನ್ ಮಾಡಿದ್ದು, ರೆಸಾರ್ಟ್ ರಾಜಕೀಯವನ್ನ ಶುರು ಮಾಡಿದ್ದಾರೆ.

ಹೌದು, ಮೂರು ದಿನಗಳ ಕಾಲ ಹಾಸನದ ಖಾಸಗಿ ರೆಸಾರ್ಟ್ ನಲ್ಲಿ ಮಾಜಿ ಮುಖ್ಯಮಂತ್ರಿ ಕುಮಾರಸ್ವಾಮಿ ಜೆಡಿಎಸ್ ಶಾಸಕರ ಜೊತೆಗೆ ಸಭೆಯನ್ನ ನಡೆಸಲು ಮುಂದಾಗಿದ್ದಾರೆ. ಮಂಗಳವಾರ ಹಾಸನಾಂಬೆಯ ದರ್ಶನ ಪಡೆದ ಮೇಲೆ ರೆಸಾರ್ಟ್ ಗೆ ಶಿಫ್ಟ್ ಆಗಿದ್ದಾರೆ. ಇನ್ನೂ ರೆಸಾರ್ಟ್ ನಲ್ಲಿ ಮಂಗಳವಾರ ರಾತ್ರಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಪ್ರತ್ಯೇಕವಾಗಿ ಶಾಸಕರ ಜತೆ ಚರ್ಚಿಸಿ ಅವರ ಅಭಿಪ್ರಾಯಗಳನ್ನು ಪಡೆದುಕೊಂಡಿದ್ದಾರೆ.
ಶಾಸಕರಿಗೆ ಕಾಂಗ್ರೆಸ್ ಪಕ್ಷದಿಂದ ಏನಾದರೂ ಕರೆ ಬಂದಿವೆಯೇ, ಇನ್ನೂ ಲೋಕಸಭಾ ಚುನಾವಣೆ ಹಿನ್ನಲೆ ಬಿಜೆಪಿ ಜೊತೆಗಿನ ಮೈತ್ರಿಯಿಂದ ಆಗಿರು ಸಮಸ್ಯೆಗಳ ಬಗ್ಗೆ ಹಾಗೂ ಪಕ್ಷದಲ್ಲಿನ ಅಸಮಾಧಾನ ಕುರಿತಾಗಿ ಕುಮಾರಸ್ವಾಮಿ ಶಾಸಕರ ಜೊತೆಗೆ ಚರ್ಚಿಸಿದ್ದಾರೆ ಎನ್ನಲಾಗಿದೆ.
ಇನ್ನೂ ಶಾಸಕರ ಜೊತೆಗೆ ಮುಕ್ತವಾಗಿ ಮಾತನಾಡಿರುವ ಕುಮಾರಸ್ವಾಮಿ, ಯಾರು ಸಹ ಆಪರೇಷನ್ ಹಸ್ತಕ್ಕೆ ಒಳಗಾಗಬೇಡಿ ಎಂದು ಕಿವಿ ಮಾತು ಹೇಳಿದ್ದಾರೆ. ಈ ಬಾರೀ ಚುನಾವಣೆಯಲ್ಲಿ ನಾವು ಸೋತಿರಬಹುದು ಆದರೆ, ಮುಂದಿನ ಚುನಾವಣೆಯಲ್ಲಿ ನಾವು ಗೆಲ್ಲುವತ್ತ ಗಮನ ಹರಿಸೋಣ, ಮೈತ್ರಿಯಿಂದ ನಮಗೆ ಲಾಭವಾಗಲಿದೆ ಎಂದು ಜೆಡಿಎಸ್ ಶಾಸಕರ ಜೊತೆಗೆ ಕುಮಾರಸ್ವಾಮಿ ಚರ್ಚೆ ನಡೆಸಿದ್ದಾರೆ.
ಇನ್ನೂ ಕುಮಾರಸ್ವಾಮಿ ಸೂಚನೆಯಂತೆ 19 ಶಾಸಕರ ಪೈಕಿ ಶರಣಗೌಡ ಕಂದಕೂರು ಹಾಗೂ ದೇವದುರ್ಗ ಶಾಸಕಿ ಕರೆಮ್ಮ ಅವರು ರೆಸಾರ್ಟ್ ಗೆ ಬಂದಿಲ್ಲ, ಈ ಇಬ್ಬರು ಶಾಸಕರನ್ನ ಹೊರತುಪಡಿಸಿ ಎಲ್ಲಾ ಶಾಸಕರು ರೆಸಾರ್ಟ್ ಬಂದಿದ್ದಾರೆ. ಬಿಜೆಪಿ ಜತೆಗಿನ ಮೈತ್ರಿಗೆ ಶರಣಗೌಡ ಮತ್ತು ಕರೆಮ್ಮ ಸೇರಿದಂತೆ ಕೆಲವು ಶಾಸಕರು ವಿರೋಧ ವ್ಯಕ್ತಪಡಿಸಿದ್ದರು. ಈ ಹಿನ್ನೆಲೆಯಲ್ಲಿ ಸಭೆಯು ಮಹತ್ವ ಪಡೆದುಕೊಂಡಿದ್ದು, ಕುಮಾರಸ್ವಾಮಿ ಅವರು ಭಿನ್ನಮತಕ್ಕೆ ತೆರೆ ಎಳೆಯುವ ಪ್ರಯತ್ನಕ್ಕೆ ಮುಂದಾಗಿದ್ದಾರೆ ಎಂದು ಹೇಳಲಾಗಿದೆ. ಅಲ್ಲದೇ ಈ ಸಭೆಗೆ ದೇವದುರ್ಗ ಶಾಸಕಿ ಕರೆಮ್ಮ ಅವರು ಇಂದು ರೆಸಾರ್ಟ್ ಬರುವ ನಿರೀಕ್ಷೆ ಇದೆ. ಆದರೆ, ಶರಣಗೌಡ ಕಂದಕೂರು ಅಂತರವನ್ನ ಕಾಯ್ದುಕೊಂಡಿರುವುದು ಹಲವು ಅನುಮಾನಗಳಿಗೆ ಕಾರಣವಾಗಿದೆ.
ಪ್ರತಿಯೊಬ್ಬ ಶಾಸಕರ ಜೊತೆಗೆ ಕುಮಾರಸ್ವಾಮಿ ಅವರು ಒನ್ ಟು ಇನ್ ಮಾತುಕತೆ ನಡೆಸಲಿದ್ದು, ಈ ವೇಳೆ ಕಾಂಗ್ರೆಸ್ ನಾಯಕರು ನಮ್ಮ ಶಾಸಕರನ್ನ ಪಕ್ಷಕ್ಕೆ ಸೇರ್ಪಡೆಗೊಳಿಸಲು ಸಾಕಷ್ಟು ಪ್ರಯತ್ನ ಪಡುತ್ತಿದ್ದಾರೆ. ಯಾವುದೇ ಕಾರಣಕ್ಕೂ ಈ ಕಾಂಗ್ರೆಸ್ ನಾಯಕರ ಆಮಿಷಕ್ಕೆ ಒಳಗಾಗದಂತೆ ಶಾಸಕರ ಜೊತೆಗೆ ಚರ್ಚೆ ನಡೆಸಲಿದ್ದಾರೆ. ಅಲ್ಲದೇ ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಡಿ ಕೆ ಶಿವಕುಮಾರ್ ಹಾಕಿರುವ ತಂತ್ರಕ್ಕೆ ಪ್ರತಿತಂತ್ರವನ್ನ ರೂಪಿಸುವ ನಿಟ್ಟಿನಲ್ಲಿ ಪ್ಲಾನ್ ನಡೆಸಿದ್ದು, ಡಿಕೆ ಬ್ರದರ್ಸ್ ಆಪರೇಷನ್ ಆಟಕ್ಕೆ ಬ್ರೇಕ್ ಹಾಕಲು ಹೆಚ್ಡಿಕೆ ಒಗ್ಗಟ್ಟಿನ ಪ್ರದರ್ಶನಕ್ಕೆ ಮುಂದಾಗಿದ್ದಾರೆ.












Click it and Unblock the Notifications