ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪರಿಷತ್ ಚುನಾವಣೆ; ಜೆಡಿಎಸ್‌ ಶಾಸಕನಿಂದ ಬಿಜೆಪಿ ಅಭ್ಯರ್ಥಿಗೆ ಮತ!

|
Google Oneindia Kannada News

ಬೆಂಗಳೂರು, ಫೆಬ್ರವರಿ 17 : ಒಂದು ಸ್ಥಾನಕ್ಕೆ ನಡೆಯುತ್ತಿರುವ ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಜೆಡಿಎಸ್ ಶಾಸಕರೊಬ್ಬರು ಬಿಜೆಪಿ ಅಭ್ಯರ್ಥಿಗೆ ಮತದಾನ ಮಾಡಿದರು. ಮತದಾನ ಇನ್ನೂ ನಡೆಯುತ್ತಿದ್ದು, ಸಂಜೆ ಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.

ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಮತದಾನ ಮಾಡಬಾರದು ಎಂದು ಜೆಡಿಎಸ್ ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನವನ್ನು ಕೈಗೊಳ್ಳಲಾಗಿತ್ತು. ಆದ್ದರಿಂದ, ಶಾಸಕರು ಚುನಾವಣೆಯಿಂದ ದೂರ ಉಳಿದಿದ್ದಾರೆ. ಆದರೆ, ಒಬ್ಬರು ಶಾಸಕರು ಮತದಾನ ಮಾಡಿದ್ದಾರೆ.

ಪಕ್ಷದ ನಿಯಮ ಮೀರಿದ ಶಾಸಕ ಜಿ.ಟಿ.ದೇವೇಗೌಡ: ಕುಮಾರಸ್ವಾಮಿ ಆಕ್ರೋಶಪಕ್ಷದ ನಿಯಮ ಮೀರಿದ ಶಾಸಕ ಜಿ.ಟಿ.ದೇವೇಗೌಡ: ಕುಮಾರಸ್ವಾಮಿ ಆಕ್ರೋಶ

ರಿಜ್ವಾನ್ ಅರ್ಷದ್ ರಾಜೀನಾಮೆಯಿಂದ ತೆರವಾದ ವಿಧಾನ ಪರಿಷತ್ತಿನ ಒಂದು ಸ್ಥಾನಕ್ಕೆ ಇಂದು ಚುನಾವಣೆ ನಡೆಯುತ್ತಿದೆ. ಬಿಜೆಪಿಯಿಂದ ಉಪ ಮುಖ್ಯಮಂತ್ರಿ, ಸಾರಿಗೆ ಸಚಿವ ಲಕ್ಷ್ಮಣ ಸವದಿ ಕಣದಲ್ಲಿದ್ದಾರೆ. ನಾಮಪತ್ರ ಸಲ್ಲಿಸಿದ್ದ ಇಬ್ಬರು ಅಭ್ಯರ್ಥಿಗಳು ವಾಪಸ್ ಪಡೆದಿದ್ದಾರೆ.

ಅಚ್ಚರಿ ಬೆಳವಣಿಗೆ; ದೇವೇಗೌಡ ಭೇಟಿಯಾದ ಶ್ರೀರಾಮುಲುಅಚ್ಚರಿ ಬೆಳವಣಿಗೆ; ದೇವೇಗೌಡ ಭೇಟಿಯಾದ ಶ್ರೀರಾಮುಲು

ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದ ಜೆಡಿಎಸ್ ಶಾಸಕ ಜಿ. ಟಿ. ದೇವೇಗೌಡ ಪಕ್ಷದ ಚಟುವಟಿಕೆಗಳಿಂದ ದೂರ ಉಳಿದಿದ್ದಾರೆ. ಅವರು ವಿಧಾನ ಪರಿಷತ್ ಉಪ ಚುನಾವಣೆಯಲ್ಲಿ ಬಿಜೆಪಿಯ ಲಕ್ಷ್ಮಣ ಸವದಿಗೆ ಮತ ಹಾಕಿದ್ದಾರೆ. ಈ ಕುರಿತು ಅವರು ಹೇಳಿಕೆನ್ನು ನೀಡಿದ್ದಾರೆ.

ಹುಣಸೂರು ಬಿಜೆಪಿ ಅಭ್ಯರ್ಥಿಗೆ ಬೆಂಬಲ: ದೇವೇಗೌಡ ಸ್ಪಷ್ಟನೆಹುಣಸೂರು ಬಿಜೆಪಿ ಅಭ್ಯರ್ಥಿಗೆ ಬೆಂಬಲ: ದೇವೇಗೌಡ ಸ್ಪಷ್ಟನೆ

ಜಿ. ಟಿ. ದೇವೇಗೌಡ ಹೇಳಿದ್ದೇನು?

ಜಿ. ಟಿ. ದೇವೇಗೌಡ ಹೇಳಿದ್ದೇನು?

ಮಾಧ್ಯಮಗಳ ಜೊತೆ ಮಾತನಾಡಿದ ಜಿ. ಟಿ. ದೇವೇಗೌಡರು, "ನಾನು ಜೆಡಿಎಸ್ ಪಕ್ಷದ ಶಾಸಕ, ಚಾಮುಂಡೇಶ್ವರಿ ಕ್ಷೇತ್ರದ ಜನ ನನ್ನನ್ನು ಗೆಲ್ಲಿಸಿದ್ದಾರೆ ಅವರು ಓಟ್ ಹಾಕಿ ಅಥವಾ ಹಾಕಬೇಡಿ ಅಂತ ಯಾವ ನಿರ್ದೇಶನವನ್ನೂ ನನಗೆ ಕೊಟ್ಟಿಲ್ಲ ನನ್ನ ಬಳಿ ಯಾರೂನೂ ಮಾತಾಡಿಲ್ಲ" ಎಂದು ಹೇಳಿದರು.

ನಮ್ಮ ಮತ ವ್ಯರ್ಥ ಆಗಬಾರದು

ನಮ್ಮ ಮತ ವ್ಯರ್ಥ ಆಗಬಾರದು

"ಚುನಾವಣೆ ಇದ್ದಿದ್ದರಿಂದ ನಾನು ಸೀದಾ ವಿಧಾನಸೌಧಕ್ಕೆ ಬಂದೆ. ಒಬ್ಬ ಅಭ್ಯರ್ಥಿ ನಾಮಪತ್ರ ವಾಪಾಸ್ ತೆಗೆದುಕೊಂಡಿದ್ದಾರೆ ಶಾಸಕರಾಗಿ ನಮ್ಮ ಮತ ವ್ಯರ್ಥ ಆಗಬಾರದು. ಲಕ್ಷ್ಮಣ ಸವದಿ ಈ ರಾಜ್ಯದ ಉಪಮುಖ್ಯಮಂತ್ರಿ ಅವರಿಗೆ ಓಟ್ ಹಾಕೋದು ನಮ್ಮ ಕರ್ತವ್ಯ. ಅದನ್ನು ಮಾಡಿದ್ದೀನಿ" ಎಂದು ಜಿ. ಟಿ. ದೇವೇಗೌಡರು ಹೇಳಿಕೆ ನೀಡಿದರು.

ಎಚ್. ಡಿ. ಕುಮಾರಸ್ವಾಮಿ ವಾಗ್ದಾಳಿ

ಎಚ್. ಡಿ. ಕುಮಾರಸ್ವಾಮಿ ವಾಗ್ದಾಳಿ

ಮಾಧ್ಯಮಗಳ ಜೊತೆ ಮಾತನಾಡಿದ್ದ ಎಚ್. ಡಿ. ಕುಮಾರಸ್ವಾಮಿ, "ಮಾಜಿ ಸಚಿವ ಜಿ. ಟಿ. ದೇವೇಗೌಡ ನಮ್ಮ‌ಪಕ್ಷದಲ್ಲಿ ಇದ್ದಾರಾ?. ಅವರು ಬೇಕಾದಂತೆ ಈಗಾಗಲೇ ಹೇಳಿಕೆಗಳನ್ನು ಕೊಟ್ಟಿದ್ದಾರೆ. ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡಬಾರದು ಎಂದು ಶಾಸಕಾಂಗ ಪಕ್ಷದ ಸಭೆಯಲ್ಲಿ ತೀರ್ಮಾನ ಮಾಡಿದ್ದೇವೆ" ಎಂದು ಹೇಳಿದ್ದಾರೆ.

ಜಿ. ಟಿ. ದೇವೇಗೌಡರಿಗೆ ಬಿಟ್ಟಿದ್ದು

ಜಿ. ಟಿ. ದೇವೇಗೌಡರಿಗೆ ಬಿಟ್ಟಿದ್ದು

"ಶಾಸಕಾಂಗ ಪಕ್ಷದ ಸಭೆಯ ತೀರ್ಮಾನಕ್ಕೆ ಗೌರವ ಕೊಡಬೇಕು ಎಂಬುದು ಜಿ. ಟಿ. ದೇವೇಗೌಡರಿಗೆ ಬಿಟ್ಟಿದ್ದು. ವಿಧಾನ ಪರಿಷತ್ ಚುನಾವಣೆಯಲ್ಲಿ ಮತದಾನ ಮಾಡುವುದು ವ್ಯರ್ಥ ಎಂದು ಕಾಂಗ್ರೆಸ್ ನಾಯಕರೂ ನಿರ್ಧಾರ ಮಾಡಿದ್ದಾರೆ. ಹಾಗಾಗಿ ನಾವೂ ಸಹ ಮತದಾನದಲ್ಲಿ ಪಾಲ್ಗೊಳ್ಳದೇ ಇರುವ ಬಗ್ಗೆ ತೀರ್ಮಾನಿಸಿದ್ದೇವೆ" ಎಂದು ಕುಮಾರಸ್ವಾಮಿ ಹೇಳಿದರು.

English summary
JD(S) MLA G.T. Devegowda voted for BJP candidate Lakshman Savadi in legislative council by election.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X