• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಪಕ್ಷದ ಮೇಲೆ ನಿಷ್ಠೆ, ಲೀಡರ್ ಬಗ್ಗೆ ಅಷ್ಟಕಷ್ಟೆ!

|

ಬೆಂಗಳೂರು, ನ.9 : 'ಜೆಡಿಎಸ್ ಕಟ್ಟಿದ್ದು ಕುಮಾರಸ್ವಾಮಿಯಲ್ಲ, ಪಕ್ಷ ದೇವೇಗೌಡರು ಮತ್ತು ಕಾರ್ಯಕರ್ತರ ಮೇಲೆ ನಿಂತಿದೆ. ನಾನು ಯಾವುದೇ ಕಾರಣಕ್ಕೂ ಪಕ್ಷ ಬಿಡುವುದಿಲ್ಲ' ಚಾಮರಾಜಪೇಟೆಯ ಶಾಸಕ ಜಮೀರ್ ಅಹಮದ್ ಭಾನುವಾರ ಹೇಳಿದ ಮಾತುಗಳಿವು.

ಬೆಂಗಳೂರಿನಲ್ಲಿ ಮಾತನಾಡಿದ ಜಮೀರ್ ಅಹಮದ್ ಖಾನ್, 'ನಾನು ಜೆಡಿಎಸ್ ಪಕ್ಷ ಬಿಡೋಲ್ಲ ಅದು ನನ್ನ ಪಕ್ಷ ಎಂದರು. ಆದರೆ, ನನಗೆ ಪಕ್ಷ ನೀಡುವ ಯಾವುದೇ ಹುದ್ದೆಗಳು ಬೇಡ, ಪಕ್ಷದ ಯಾವುದೇ ಕಾರ್ಯಕ್ರಮಗಳಲ್ಲಿ ಪಾಲ್ಗೊಳ್ಳುವುದಿಲ್ಲ' ಎಂದು ಘೋಷಣೆ ಮಾಡಿದರು.

"ಜೆಡಿಎಸ್ ಪಕ್ಷ ಕಟ್ಟಿದ್ದು ಮಾಜಿ ಸಿಎಂ ಕುಮಾರಸ್ವಾಮಿ ಅಲ್ಲ ಎಂದು ಹೇಳುವ ಮೂಲಕ ಕುಮಾರಸ್ವಾಮಿ ಮತ್ತು ತಮ್ಮ ನಡುವಿನ ಸಂಬಂಧ ಹಳಸಿದೆ ಎಂದು ಸುಳಿವು ಕೊಟ್ಟ ಜಮೀರ್, ಪಕ್ಷಕ್ಕೆ ದೇವೇಗೌಡರು ಮತ್ತು ಕಾರ್ಯಕರ್ತರ ಮೇಲೆ ನಿಂತಿದೆ' ಎಂದು ಗೌಡರ ಪರವಾಗಿ ಬ್ಯಾಟ್ ಬೀಸಿದರು. [ಜೆಡಿಎಸ್ ದೇವೇಗೌಡ ಕುಟುಂಬದ ಸ್ವಂತ ಬಸ್ ಇದ್ದಂತೆ]

ಪಕ್ಷದಲ್ಲಿ ನನ್ನ ಮಾತಿಗೆ ಬೆಲೆ ಇಲ್ಲ : ಅತ್ತ ಹುಬ್ಬಳ್ಳಿಯಲ್ಲಿ ಜೆಡಿಎಸ್ ಹಿರಿಯ ನಾಯಕ ಬಸವರಾಜ ಹೊರಟ್ಟಿ ಕುಮಾರಸ್ವಾಮಿ ಮತ್ತು ದೇವೇಗೌಡರು ತಮ್ಮ ಮಾತಿಗೆ ಬೆಲೆ ಕೊಡುತ್ತಿಲ್ಲ, ಚುನಾವಣೆಯಲ್ಲಿ ಟಿಕೆಟ್ ಹಂಚಿಕೆ ಮಾಡುವಾಗ ನನ್ನ ಮಾತನ್ನು ಪರಿಗಣಿಸಿಲ್ಲ ಎಂದು ಅಸಮಾಧಾನ ಹೊರಹಾಕಿದ್ದಾರೆ. [ಪಕ್ಷ ಬಿಟ್ಟು ಹೋಗುವವರು ಸಂತೋಷದಿಂದ ಹೋಗಿ]

ಹುಬ್ಬಳ್ಳಿಯ ಹೊರಟ್ಟಿ ಫಾರ್ಮ್ ಹೌಸ್‌ನಲ್ಲಿ ಉತ್ತರ ಕರ್ನಾಟಕ ಭಾಗದ ಪಕ್ಷದ ಕಾರ್ಯಕರ್ತರ ಸಭೆ ನಡೆಯುತ್ತಿದ್ದು, ಸಭೆಯಲ್ಲಿಯೇ ಅಸಮಧಾನ ಹೊರಹಾಕಿ ಹೊರಟ್ಟಿ ಅಚ್ಚರಿ ಮೂಡಿಸಿದ್ದಾರೆ. ಕರ್ನಾಟಕ ಜೆಡಿಎಸ್ ಪಕ್ಷದಲ್ಲಿ ಎಲ್ಲವೂ ಸರಿಯಿಲ್ಲ ಎಂಬುದು ಮುತ್ತೊಮ್ಮೆ ಸಾಬೀತಾಗಿದೆ.

ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Something went wrong in Karnataka JDS party. Chamarajpet MLA Zameer Ahmed Khan said he will not quit party and not need any post in party.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X
We use cookies to ensure that we give you the best experience on our website. This includes cookies from third party social media websites and ad networks. Such third party cookies may track your use on Oneindia sites for better rendering. Our partners use cookies to ensure we show you advertising that is relevant to you. If you continue without changing your settings, we'll assume that you are happy to receive all cookies on Oneindia website. However, you can change your cookie settings at any time. Learn more