ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಪಕ್ಷದ ಶಾಸಕರು, ಮುಖಂಡರಿಗೆ ಜೆಡಿಎಸ್‌ ಕಟ್ಟನಿಟ್ಟಿನ ಆದೇಶ

|
Google Oneindia Kannada News

ಬೆಂಗಳೂರು, ಮೇ 25: ಜೆಡಿಎಸ್ ಶಾಸಕರು ಮತ್ತು ಮುಖಂಡರಿಗೆ ಪಕ್ಷವು ಕಟ್ಟುನಿಟ್ಟಿನ ಆದೇಶವನ್ನು ಜಾರಿಗೊಳಿಸಿದ್ದು, ಇನ್ನು ಮುಂದೆ ಜೆಡಿಎಸ್‌ನ ಯಾರೂ ಮಾಧ್ಯಮದವರಿಗೆ ಯಾವುದೇ ಹೇಳಿಕೆ ನೀಡಬಾರದೆಂದು ಹೇಳಲಾಗಿದೆ.

ಜೆಡಿಎಸ್‌ನ ಕಾರ್ಯಾಧ್ಯಕ್ಷರಾದ ಎಂ.ಎಸ್.ನಾರಾಯಣರಾವ್ ಅವರು ಈ ಹೇಳಿಕೆ ಹೊರಡಿಸಿದ್ದು, ಯಾವ ಜೆಡಿಎಸ್ನ ಶಾಸಕರಾಗಲಿ, ಮುಖಂಡರಾಗಲಿ ಇನ್ನು ಮುಂದೆ ಮಾಧ್ಯಮ ಚರ್ಚೆಗಳಲ್ಲಿ ಭಾಗವಹಿಸಬಾರದು, ಹೇಳಿಕೆ ನೀಡಬಾರದು ಎಂದು ಆದೇಶದಲ್ಲಿ ಹೇಳಲಾಗಿದೆ.

JDS MLAs, leaders can not speak to media: JDS order

ಇಂದು ನಡೆದ ಜೆಡಿಎಸ್ ಶಾಸಕಾಂಗ ಸಭೆಯಲ್ಲಿ ರಾಷ್ಟ್ರೀಯ ಮತ್ತು ರಾಜ್ಯ ಅಧ್ಯಕ್ಷರು ಈ ನಿರ್ಣಯ ತೆಗೆದುಕೊಂಡಿದ್ದಾರೆ ಎಂದು ಆದೇಶದಲ್ಲಿ ತಿಳಿಸಲಾಗಿದೆ. ಟಿವಿ ಮಾಧ್ಯಮಗಳಿಗಷ್ಟೆ ಅಲ್ಲದೆ, ಪತ್ರಿಕೆಗಳಿಗೂ ಯಾವುದೇ ಹೇಳಿಕೆಗಳನ್ನು ನೀಡಬಾರದು ಎಂದು ಆದೇಶ ಹೊರಡಿಸಲಾಗಿದೆ.

ಆಘಾತಕಾರಿ ಸೋಲು: ರಾಜೀನಾಮೆಗೆ ಮಮತಾ ಬ್ಯಾನರ್ಜಿ ನಿರ್ಧಾರ ಆಘಾತಕಾರಿ ಸೋಲು: ರಾಜೀನಾಮೆಗೆ ಮಮತಾ ಬ್ಯಾನರ್ಜಿ ನಿರ್ಧಾರ

ಲೋಕಸಭೆ ಚುನಾವಣೆ ಪ್ರಾರಂಭವಾದಾಗಿನಿಂದಲೂ ಕುಮಾರಸ್ವಾಮಿ ಅವರು ಮಾಧ್ಯಮಗಳ ಮೇಲೆ ಗರಂ ಆಗಿದ್ದರು. ಮಂಡ್ಯದಲ್ಲಿ ನಿಖಿಲ್ ಗಿಂತಲೂ ಸುಮಲತಾ ಅವರಿಗೆ ಹೆಚ್ಚು ಅನುಕೂಲಕರವಾಗಿ ಮಾಧ್ಯಮಗಳಲ್ಲಿ ವರದಿ ಪ್ರಸಾರವಾಯಿತು ಎಂಬುದು ಕುಮಾರಸ್ವಾಮಿ ಅವರ ಸಿಟ್ಟಾಗಿತ್ತು. ಆದ್ದರಿಂದ ಅವರು ಮಾಧ್ಯಮಗಳ ಮೇಲೆ ಸಿಟ್ಟು ಸಹಿತ ಹೊರಹಾಕಿದ್ದರು.

ಸರ್ಕಾರ ಸುಭದ್ರವಾಗಿದೆ, ಮುಂದೆಯೂ ಇರುತ್ತದೆ: ಪರಮೇಶ್ವರ್ಸರ್ಕಾರ ಸುಭದ್ರವಾಗಿದೆ, ಮುಂದೆಯೂ ಇರುತ್ತದೆ: ಪರಮೇಶ್ವರ್

ಸ್ವತಃ ಕುಮಾರಸ್ವಾಮಿ ಅವರು ಸಹ ನಿನ್ನೆ ನಡೆದ ಜಂಟಿ ಸುದ್ದಿಗೋಷ್ಠಿಯಲ್ಲಿ ಮಾಧ್ಯಮಗಳ ಜೊತೆ ಮಾತನಾಡಲಿಲ್ಲ. ಕೊನೆಗೆ ಇಂದು ಜೆಡಿಎಸ್ ಪಕ್ಷದ ವತಿಯಿಂದಲೇ ಅಧಿಕೃತ ಆದೇಶವನ್ನು ಹೊರಡಿಸಿದ್ದಾರೆ.

English summary
JDS party orderd to JDS MLAs and leaders to did not participate in tv debates and did not give any statements to TV or news paper.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X