ಕುಮಾರಸ್ವಾಮಿ ಕರೆದರೂ ಹಾಸನಾಂಭ ದರ್ಶನಕ್ಕೆ ಬರದ ಜೆಡಿಎಸ್‌ ಶಾಸಕ: ದಟ್ಟಗೊಂಡ ಆಪರೇಷನ್‌ ಹಸ್ತದ ಆತಂಕ

ಹಾಸನ, ನವೆಂಬರ್‌ 08: ರಾಜ್ಯ ರಾಜಕಾರಣದಲ್ಲಿ 2024 ರ ಲೋಕಸಭಾ ಚುನಾವಣೆಗೆ ಭರ್ಜರಿಯಾಗಿ ಕಾಂಗ್ರೆಸ್‌ ತಯಾರಿ ನಡೆಸಿದೆ. ಹೈಕಮಾಂಡ್‌ 20 ಕ್ಷೇತ್ರಗಳನ್ನ ಗೆಲ್ಲಲ್ಲು ಟಾರ್ಗೆಟ್‌ ನೀಡಿದ್ದು, ಡಿ ಕೆ ಶಿವಕುಮಾರ್‌ ಜೆಡಿಎಸ್‌ ಶಾಸಕರಿಗೆ ಗಾಳ ಹಾಕುತ್ತಿದ್ದಾರೆ ಎಂಬ ಮಾತುಗಳು ರಾಜಕೀಯ ವಲಯದಲ್ಲಿ ದಟ್ಟವಾಗಿ ಕೇಳಿ ಬರುತ್ತಿದೆ.

ಹೌದು, ಲೋಕಸಭಾ ಚುನಾವನೆ ಹಿನ್ನಲೆ ಬಿಜೆಪಿ ಜೊತೆಗೆ ಜೆಡಿಎಸ್‌ ಮೈತ್ರಿಯಾದ ಹಿನ್ನೆಲೆ ಹಲವು ಜೆಡಿಎಸ್‌ ಶಾಸಕರು ಬಹಿರಂಗವಾಗಿ ಅಸಮಾಧಾನ ವ್ಯಕ್ತಪಸಿಡಿಸಿದ್ದಾರೆ. ಹೀಗಾಗಿ ಕಾಂಗ್ರೆಸ್‌ ಆಪರೇಷನ್‌ ಗೆ ಜೆಡಿಎಸ್‌ ಶಾಸಕರು ಒಳಗಾಗುತ್ತಾರೋ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ಹಾಸನಾಂಭ ದರ್ಶನಕ್ಕೆ ಎಲ್ಲಾ ಜೆಡಿಎಸ್‌ ನಾಯಕರನ ಕರೆದುಕೊಂಡು ಹೋಗಿದ್ದಾರೆ. ಆದರೆ, 19 ಶಾಸಕರ ಪೈಕಿ ಮೈತ್ರಿ ವಿಚಾರದಲ್ಲಿ ಅಸಮಾಧಾನ ವ್ಯಕ್ತಪಡಿಸಿದ್ದ ಗುರ್ಮಿಟ್ಕಲ್ ಶಾಸಕ ಶರಣಗೌಡ ಕಂದಕೂರ್ ಗೈರಾಗಿದ್ದು, ಹಲವು ಅನುಮಾನಗಳಿಗೆ ಕಾರಣವಾಗಿದೆ.

jds-mlas-to-join-hd-kumaraswamy

ಈಗಾಗಲೇ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯಗಳಿಸಿ ಸರ್ಕಾರ ರಚಿಸಿರುವ ಕಾಂಗ್ರೆಸ್‌ ಗೆ, ಲೋಕಸಭಾ ಚುನಾವಣೆಯಲ್ಲಿ ಸೋಲಿನ ರುಚಿ ತೋರಿಸಬೇಕು ಎಂದು ಬಿಜೆಪಿ ಹಾಗೂ ಜೆಡಿಎಸ್‌ ಮೈತ್ರಿಯಾಗಿದೆ. ಇತ್ತ ಹಳೇ ಮೈಸೂರು ಭಾಗದಲ್ಲಿ ಜೆಡಿಎಸ್‌ ಪ್ರಾಬಲ್ಯ ಹೆಚ್ಚಾಗಿತ್ತು, ಆ ಭಾಗದ ಜೆಡಿಎಸ್‌ ಶಾಸಕರನ್ನ ಸೆಳೆಯುವ ನಿಟ್ಟಿನಲ್ಲಿ ಕೆಪಿಸಿಸಿ ಅಧ್ಯಕ್ಷ ಹಾಗೂ ಉಪಮುಖ್ಯಮಂತ್ರಿ ಡಿ ಕೆ ಶಿವಕುಮಾರ್‌ ಮಾಸ್ಟರ್‌ ಪ್ಲಾನ್‌ ನಡೆಸಿದ್ದಾರೆ ಎನ್ನಲಾಗಿದೆ.

ಅಲ್ಲದೇ ಆಪರೇಷನ್‌ ಹಸ್ತದ ಕುರಿತು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ವಾಗ್ದಾಳಿ ನಡೆಸಿದ್ದು, 135 ಶಾಸಕರನ್ನ ಹೊಂದಿದ್ದರು ಸಹ ನಮ್ಮ 13 ಜನ ಶಾಸಕರನ್ನ ಸೆಳೆಯಲು ಕಾಂಗ್ರೆಸ್‌ ಪ್ರಯತ್ನಿಸುತ್ತಿದೆ ಎಂದು ಹೇಳಿದ್ರು. ಅಲ್ಲದೇ 19 ಶಾಸಕರನ್ನ ಹಿಡಿದಿಟ್ಟುಕೊಳ್ಳುವ ಅನಿವಾರ್ಯತೆ ಜೆಡಿಎಸ್‌ ನಾಯಕರಿಗೆ ಸೃಷ್ಟಿಯಾಗಿದ್ದು, ಶಾಸಕರ ಜೊತೆಗೆ ಮಾಜಿ ಮುಖ್ಯಮಂತ್ರಿ ಹಾಗೂ ಜೆಡಿಎಸ್‌ ರಾಜ್ಯಾಧ್ಯಕ್ಷ ಹೆಚ್‌ ಡಿ ಕುಮಾರಸ್ವಾಮಿ ಅವರು ತಮ್ಮ ಶಾಸಕರೊಂದಿ ಹಾಸನದ ಹಾಸನಾಂಭೆ ದೇವಿಯ ದರ್ಶನ ಪಡೆದು ರೆಸಾರ್ಟ್‌ ರಾಜಕೀಯಕ್ಕೆ ಮುಂದಾಗಿದ್ದಾರೆ.

ಇನ್ನೂ ಹೈಕಮಾಂಡ್‌ ಕೊಟ್ಟ ಟಾರ್ಗೆಟ್‌ ನಂತೆ ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಅವರ ಸಹೋದರ, ಸಂಸದ ಡಿಕೆ ಸುರೇಶ್ ಅವರು ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಹೆಚ್ಚು ಸ್ಥಾನವನ್ನ ಗೆಲ್ಲಲ್ಲು ಬಿಜೆಪಿ ಮತ್ತು ಜೆಡಿಎಸ್ ಶಾಸಕರನ್ನು ಸಂಪರ್ಕಿಸುತ್ತಿದ್ದಾರೆ ಎಂಬ ಊಹಾಪೋಹಗಳು ಕೇಳಿಬರುತ್ತಿವೆ. ಇದರ ಬೆನ್ನಲ್ಲೇ ಜೆಡಿಎಸ್ ಶಾಸಕರು ಒಗ್ಗಟ್ಟು ಪ್ರದರ್ಶಿಸಿದ್ದಾರೆ. ಈಗಾಗಲೇ ಜೆಡಿಎಸ್ ಶಾಸಕಾಂಗ ಪಕ್ಷದ ನಾಯಕ ಹೆಚ್​​ಡಿ ಕುಮಾರಸ್ವಾಮಿ ಮಂಗಳವಾರ ರಾತ್ರಿ ಎಲ್ಲಾ ಶಾಸಕರೊಂದಿಗೆ ಪ್ರತ್ಯೇಕ ಸಭೆ ನಡೆಸಿ ಅವರ ವೈಯಕ್ತಿಕ ಸಮಸ್ಯೆಗಳು ಹಾಗೂ ಮೈತ್ರಿ ಕುರಿತು ಚರ್ಚೆ ನಡೆಸಿದ್ದಾರೆ.

ಜೆಡಿಎಸ್‌ ಶಾಸಕರ 19 ಶಾಸಕರ ಪೈಕಿ ಶರಣಗೌಡ ಕಂದಕೂರ್ ಗೈರಾಗಿದ್ದು, ಈ ಬಗ್ಗೆ ಅವರ ಜೊತೆಗೆ ಮಾತನಾಡಿ ಸಮಸ್ಯೆ ಬಗೆಹರಿಸುವುದಾಗಿ ಮಾಜಿ ಸಿಎಂ ಹೆಚ್‌ ಡಿ ಕುಮಾರಸ್ವಾಮಿ ಹೇಳಿದ್ದಾರೆ. ಕೆಲವು ಜೆಡಿಎಸ್ ಶಾಸಕರು ಕಾಂಗ್ರೆಸ್ ಸೇರಬಹುದು ಎಂದು ಕೆಲವು ತಪ್ಪು ಮಾಹಿತಿಗಳು ಸುತ್ತುತ್ತಿವೆ, ಅದನ್ನು ಸ್ಪಷ್ಟಪಡಿಸಲು ಮತ್ತು ವಿವಿಧ ವಿಷಯಗಳ ಬಗ್ಗೆ ನಾವು ಸಭೆ ನಡೆಸಿದ್ದೇವೆ. ಕಂದಕೂರ್ ಅವರು ನಮಗೆ ಕುಟುಂಬದವರಿದ್ದಂತೆ, ಅವರೊಂದಿಗೆ ಮಾತನಾಡುತ್ತೇನೆ. ಏನೇ ಸಮಸ್ಯೆಗಳಿದ್ದರೂ ಬಗೆಹರಿಸುತ್ತೇನೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+