ಯಾರ ಜೊತೆಗೂ ಮೈತ್ರಿ ಇಲ್ಲ, ಸ್ಥಳೀಯ ಮಟ್ಟದಲ್ಲಿ ನಿಮ್ಮಿಷ್ಟ: ಎಚ್ ಡಿ ಕುಮಾರಸ್ವಾಮಿ
ಬೆಂಗಳೂರು, ಡಿ.7: ವಿಧಾನ ಪರಿಷತ್ ಚುನಾವಣೆಯಲ್ಲಿ ಯಾರ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕು ಎಂಬುದನ್ನು ಸ್ಥಳೀಯ ನಾಯಕರ ನಿರ್ಧಾರಕ್ಕೆ ಬಿಡಲಾಗಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಹೇಳಿದರು.
ರಾಜ್ಯದಲ್ಲಿ 25 ಕ್ಷೇತ್ರಗಳಿಗೆ ಡಿ.10ರಂದು ವಿಧಾನ ಪರಿಷತ್ ಚುನಾವಣೆ ನಡೆಯುತ್ತಿದ್ದು, ಜೆಡಿಎಸ್ ಯಾರನ್ನು ಬೆಂಬಲಿಸುತ್ತದೆ ಎಂಬುದು ಬಹಳ ಕುತೂಹಲ ಮೂಡಿಸಿತ್ತು. ಮಂಗಳವಾರ ಪತ್ರಿಕಾಗೋಷ್ಠಿ ನಡೆಸಿದ ಎಚ್.ಡಿ ಕುಮಾರಸ್ವಾಮಿ, ಸ್ಥಳೀಯ ಸಂಸ್ಥೆಗಳಿಂದ ವಿಧಾನ ಪರಿಷತ್‌ಗೆ ನಡೆಯುತ್ತಿರುವ ಚುನಾವಣೆಯಲ್ಲಿ ಬಿಜೆಪಿ ಸೇರಿದಂತೆ ಯಾವ ಪಕ್ಷದ ಜತೆಯೂ ಜೆಡಿಎಸ್ ಮೈತ್ರಿ ಇಲ್ಲ. ಹಾಗೆ ಒಂದು ವೇಳೆ ಇತರೆ ಪಕ್ಷಗಳು ಬೆಂಬಲ ಕೋರಿದರೆ, 2023ರ ವಿಧಾನಸಭೆ ಚುನಾವಣೆಯಲ್ಲಿ ನಿಗದಿತ ಗುರಿ ತಲುಪಲು ಅನುಕೂಲ ಆಗುವಂತೆ ಪಕ್ಷವು ಸ್ಪರ್ಧೆ ಮಾಡದಿರುವ 19 ಕ್ಷೇತ್ರಗಳಿಗೆ ಸ್ಥಳೀಯ ಮಟ್ಟದಲ್ಲಿಯೇ ನಿರ್ಧಾರ ಕೈಗೊಳ್ಳುವಂತೆ ಪಕ್ಷದ ಮತದಾರರಿಗೆ ನಿರ್ದೇಶನ ನೀಡಲಾಗಿದೆ ಎಂದು ಹೇಳಿದರು.
ಯಾರ ಜೊತೆಗೂ ಹೊಂದಾಣಿಕೆ ಇಲ್ಲ
ನಾವು ಅಭ್ಯರ್ಥಿ ಹಾಕಿರುವ ಜಾಗದಲ್ಲಿ ಯಾರ ಜೊತೆ ಹೊಂದಾಣಿಕೆ ಮಾಡಿಕೊಂಡಿಲ್ಲ. ಹಾಸನ, ಮಂಡ್ಯ, ಬೆಂಗಳೂರು ಗ್ರಾಮಾಂತರ, ಕೋಲಾರ, ಮೈಸೂರು, ತುಮಕೂರು ಕ್ಷೇತ್ರಗಳಲ್ಲಿ ಮೂರು ಪಕ್ಷಗಳು ಸ್ಪರ್ಧೆ ಮಾಡಿವೆ. ಅಲ್ಲಿ ತ್ರಿಕೋನ ಸ್ಪರ್ಧೆ ಇದೆ. ಬಿಜೆಪಿ ಅಲ್ಲೆಲ್ಲಾ ನಮ್ಮ ಪಕ್ಷದ ವಿರುದ್ಧವೂ ಹೋರಾಟ ಮಾಡುತ್ತಿದೆ. ಹೀಗಾಗಿ ಹೊಂದಾಣಿಕೆ ಪ್ರಶ್ನೆ ಎಲ್ಲಿ ಬಂತು ಎಂದು ಪ್ರಶ್ನಿಸಿದರು.

ಎಲ್ಲರಿಗೆ ಕುತೂಹಲ ಇರುವುದು ಜೆಡಿಎಸ್ ಉಳಿದ 19 ಕ್ಷೇತ್ರಗಳಲ್ಲಿ ಎನೂ ಮಾಡುತ್ತದೆ ಎಂದು. ಆದರೆ, ನಾನು ಸ್ಥಳೀಯ ಮುಖಂಡರ ಜತೆ ಚರ್ಚೆ ಮಾಡಿದ್ದೆನೆ. ಅವರಿಗೆ ಸ್ಪಷ್ಟ ಆದೇಶ ಕೊಟ್ಟಿದ್ದೇನೆ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ123 ಕ್ಷೇತ್ರಗಳನ್ನು ಗೆಲ್ಲುವುದಕ್ಕೆ ಏನು ಮಾಡಬೇಕು ಎನ್ನುವ ನಿಟ್ಟಿನಲ್ಲಿ ನಿಲುವು ತೆಗೆದುಕೊಳ್ಳುವಂತೆ ಹೇಳಿದ್ದೇನೆ.
ಸ್ಥಳೀಯವಾಗಿ ಕೆಲ ಕ್ಷೇತ್ರದಲ್ಲಿ ನಮ್ಮ ಮತದಾರರು ಕಾಂಗ್ರೆಸ್‌ಗೆ ಬೆಂಬಲ ನೀಡುತ್ತಾರೆ. ಕೆಲ ಕ್ಷೇತ್ರದಲ್ಲಿ ಬಿಜೆಪಿಗೆ ಬೆಂಬಲ ನೀಡುತ್ತಿದ್ದಾರೆ. ರಾಜ್ಯಮಟ್ಟದ ಪರಿಸ್ಥಿತಿಯೇ ಬೇರೆ. ಸ್ಥಳೀಯ ಮಟ್ಟದ ಸ್ಥಿತಿಯೇ ಬೇರೆ. ಸಿಂಧನೂರು ಜೆಡಿಎಸ್ ಶಾಸಕರು ನನ್ನ ಒಪ್ಪಿಗೆ ಪಡೆದೇ ಕಾಂಗ್ರೆಸ್ ಗೆ ಬೆಂಬಲ ಕೊಡುತ್ತಿದ್ದಾರೆ. ಬಿಜೆಪಿ ಜೊತೆ ಹೊಂದಣಿಕೆ ಮಾಡಿಕೊಂಡಿದ್ದಾರೆ. ಇಲ್ಲಿ ಯಾವ ಒಳ ಒಪ್ಪಂದ ಇಲ್ಲ ಹೊರ ಒಪ್ಪಂದ ಇಲ್ಲ.

ಪರಿಷತ್ ಚುನಾವಣೆ ಹೇಗೆ ನೆಡೆಯುತ್ತದೆ ಅಂತ ಗೊತ್ತಿದೆ. ಆರು ಕ್ಷೇತ್ರದಲ್ಲಿ ಮೂರು ಪಕ್ಷದಲ್ಲಿ ಬಾರಿ ಪೈಪೋಟಿ ಇದೆ. ಇಲ್ಲಿ ಅಸ್ತ್ರ ಯಾವುದೂ ಇರುವುದಿಲ್ಲ. ವಿಧಾನ ಪರಿಷತ್ ಚುನಾವಣೆ ಘೋಷಣೆ ಆದಾಗಿನಿಂದ ಜೆಡಿಎಸ್ ಬಗ್ಗೆ ಒಂದಲ್ಲ ಒಂದು ಊಹಾಪೋಹ ಸುದ್ದಿಗಳು ಹರಿದಾಡುತ್ತಿವೆ. ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪ ಅವರು ನಮ್ಮ ಪಕ್ಷದ ಬೆಂಬಲ ಕೇಳಿದ ಮೇಲೆ ಮತ್ತಷ್ಟು ಊಹಾಪೋಹಗಳಿಗೆ ದಾರಿ ಆಯಿತು. ಅದೆಕ್ಕೆಲ್ಲ ತೆರೆ ಎಳೆಯುವ ನಿಟ್ಟಿನಲ್ಲಿ ಪಕ್ಷವು ತನ್ನ ಮತದಾರರಿಗೆ ಇಂದು ಸ್ಪಷ್ಟ ಸಂದೇಶ ನೀಡಿದೆ ಎಂದು ಮಾಜಿ ಮುಖ್ಯಮಂತ್ರಿಗಳು ಹೇಳಿದರು.

ಈಗಲೂ ಸಹ ಯಡಿಯೂರಪ್ಪ ನಮ್ಮ ಪಕ್ಷದ ಬೆಂಬಲ ಕೇಳಿದ್ದಾರೆ. ಅವರ ಪಕ್ಷದ ಅಭ್ಯರ್ಥಿಗಳಿಗೆ ಶಕ್ತಿ ತುಂಬಲು ಬೆಂಬಲ ಕೋರಿದ್ದಾರೆ. ಅವರು ಮೊಬೈಲ್ ಕರೆ ಮಾಡಿಯೂ ಮಾತನಾಡಿದ್ದಾರೆ. ಈ ಚುನಾವಣೆಯಲ್ಲಿ ಕಾಂಗ್ರೆಸ್ ಗೆಲ್ಲುತ್ತೋ ಅಥವಾ ಬಿಜೆಪಿ ಗೆಲ್ಲುತ್ತೊ ಎನ್ನುವ ಪ್ರಶ್ನೆ ಅಲ್ಲ. ಪಕ್ಷ ಸಂಘಟನೆ ಯಾವುದೇ ತೊಂದರೆ ಆಗದಂತೆ ಸ್ಥಳೀಯ ಮಟ್ಟದಲ್ಲಿ ನಿರ್ಧಾರ ಕೈಗೊಳ್ಳಲಾಗುವುದು. 2023ಕ್ಕೆ 123 ಸ್ಥಾನ ಗೆಲ್ಲಬೇಕು ಎನ್ನುವುದು ನಮ್ಮ ಗುರಿ ಎಂದು ಹೇಳಿದರು.
-
April 2 Horoscope: ಆರೋಗ್ಯ ಮತ್ತು ಆರ್ಥಿಕ ಸ್ಥಿತಿಯ ಸಂಪೂರ್ಣ ಮಾಹಿತಿ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Cricket: ವಿಶ್ವದಾಖಲೆ ಬರೆದ ಕಿವೀಸ್ ವನಿತೆಯರು: ಭಾರತದ ದಾಖಲೆ ಅಳಿಸಿ ಹಾಕಿದ ನ್ಯೂಜಿಲೆಂಡ್ ಅಬ್ಬರ -
Karnataka Weather: ರಾಜ್ಯದಲ್ಲಿಂದು ಭಾರಿ ಮಳೆ ಮುನ್ಸೂಚನೆ; ಬೆಂಗಳೂರು ಹವಾಮಾನ ಹೇಗಿದೆ? -
ಲಕ್ಷ ಲಕ್ಷ ಸಂಬಳದ ಗೂಗಲ್ ಕೆಲಸಕ್ಕೆ ರಾಜೀನಾಮೆ ನೀಡಿದ ಬೆಂಗಳೂರು ಟೆಕ್ಕಿ; ಕಾರಣ ಇಲ್ಲಿದೆ ನೋಡಿ -
Gold Rate: ಮಾರುಕಟ್ಟೆಯಲ್ಲಿ ಇಂದಿನ ನಿಖರ ಚಿನ್ನ, ಬೆಳ್ಳಿ ಬೆಲೆ ಎಷ್ಟು? ಇಲ್ಲಿದೆ ದರ ಪಟ್ಟಿ -
Good News: ಏಪ್ರಿಲ್ 2ನೇ ವಾರದಿಂದ ಹುಬ್ಬಳ್ಳಿ-ಹೈದರಾಬಾದ್ ಮತ್ತು ಬೆಂಗಳೂರಿಗೆ ವಿಮಾನ ಸೇವೆ: ಪ್ರಹ್ಲಾದ್ ಜೋಶಿ -
SSLC ಸಮಾಜ ವಿಜ್ಞಾನ ಪರೀಕ್ಷೆ ವಿಶ್ಲೇಷಣೆ: ಪ್ರಶ್ನೆಪತ್ರಿಕೆ ಹೇಗಿತ್ತು? ವಿದ್ಯಾರ್ಥಿಗಳ ಪ್ರತಿಕ್ರಿಯೆ ಏನು? -
Karnataka weather : ರಾಜ್ಯದಲ್ಲಿಂದು ಹವಾಮಾನ ಹೇಗಿರಲಿದೆ? ಬೆಂಗಳೂರು ಸೇರಿ ಈ ಜಿಲ್ಲೆಗಳಲ್ಲಿ ಗುಡುಗು ಸಹಿತ ಮಳೆ ಎಚ್ಚರಿಕೆ -
ಬೇಸಿಗೆ ರಜೆ -ವಾರಾಂತ್ಯದ ರಶ್: ಹುಬ್ಬಳ್ಳಿ-ರಾಮೇಶ್ವರಂ ಮತ್ತು ಬೆಂಗಳೂರು-ಕಣ್ಣೂರು ವಿಶೇಷ ರೈಲು ಸಂಚಾರ -
ಉಬರ್ ಕ್ಯಾಬ್ ಬುಕ್ ಮಾಡಿದಷ್ಟೇ ಸುಲಭವಾಗಿ ತೆಂಗಿನಕಾಯಿ ಕೀಳುವವರನ್ನು ಕರೆಯಿರಿ: ಆನಂದ್ ಮಹೀಂದ್ರಾ ಹಂಚಿಕೊಂಡ Video Viral -
SSLC ಪರೀಕ್ಷೆ-1ರಲ್ಲಿ ಅಂಕ ಕಡಿಮೆಯಾಗಿದೆಯೇ? ಚಿಂತೆ ಬಿಡಿ, ಮೇ 18ರಿಂದ ನಡೆಯುವ ಪರೀಕ್ಷೆ-2ಕ್ಕೆ ಸಜ್ಜಾಗಿ












Click it and Unblock the Notifications