ಸುಮಲತಾ ಅಂಬರೀಶ್‌ಗೆ ಮೈಸೂರು ಕ್ಷೇತ್ರದ ಟಿಕೆಟ್‌ ಆಫರ್‌!

Recommended Video

      Lok Sabha Elections 2019 : ಜೆಡಿಎಸ್ ನಿಂದ ಸುಮಲತಾಗೆ ಸಿಕ್ತು ಮೈಸೂರು - ಕೊಡಗು ಕ್ಷೇತ್ರದ ಟಿಕೆಟ್‌ ಆಫರ್‌!

      ಬೆಂಗಳೂರು, ಮಾರ್ಚ್ 08 : ಮಾಜಿ ಸಚಿವ ದಿ.ಅಂಬರೀಶ್ ಪತ್ನಿ ಸುಮಲತಾ ಅಂಬರೀಶ್‌ ಅವರಿಗೆ ಯಾವ ಪಕ್ಷದಿಂದ ಟಿಕೆಟ್ ಸಿಗಲಿದೆ? ಎಂಬುದು ಇನ್ನೂ ಅಂತಿಮಗೊಂಡಿಲ್ಲ. ಅಸಮಾಧಾನ ಬಗೆಹರಿಸಲು ಮೈಸೂರು-ಕೊಡಗು ಕ್ಷೇತ್ರದಿಂದ ಟಿಕೆಟ್‌ ನೀಡಲು ಚಿಂತನೆ ನಡೆದಿದೆ.

      ಕಾಂಗ್ರೆಸ್‌-ಜೆಡಿಎಸ್‌ ಮೈತ್ರಿ ಮಾಡಿಕೊಂಡು ಚುನಾವಣೆಯನ್ನು ಎದುರಿಸುತ್ತಿವೆ. ಜೆಡಿಎಸ್‌ ಮಂಡ್ಯ ಕ್ಷೇತ್ರವನ್ನು ಸುಮಲತಾ ಅಂಬರೀಶ್‌ಗೆ ಬಿಟ್ಟುಕೊಡಲು ಒಪ್ಪಿಗೆ ನೀಡಿಲ್ಲ. ಆದ್ದರಿಂದ, ಅವರು ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲು ಬಯಸಿದ್ದಾರೆ.

      ಸುಮಲತಾ ಅಂಬರೀಶ್ ಅವರು ಬಿಜೆಪಿ ಸೇರುವುದನ್ನು ತಪ್ಪಿಸಲು ಕಾಂಗ್ರೆಸ್-ಜೆಡಿಎಸ್‌ ತಂತ್ರ ರೂಪಿಸಿವೆ. ಆದ್ದರಿಂದ, ಮೈಸೂರು-ಕೊಡಗು ಕ್ಷೇತ್ರದಿಂದ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲು ಚಿಂತನೆ ನಡೆಸಲಾಗುತ್ತಿದೆ. ಇದಕ್ಕೆ ಎಚ್.ಡಿ.ದೇವೇಗೌಡ ಅವರು ಒಪ್ಪಿಗೆ ನೀಡಿದ್ದಾರೆ ಎಂಬುದು ಶುಕ್ರವಾರ ಸಂಜೆಯ ಸುದ್ದಿ.

      Sumalatha Ambareesh

      'ಲೋಕಸಭಾ ಚುನಾವಣೆಗೆ ಸ್ಪರ್ಧೆ ಮಾಡುವುದಾದದರೆ ಮಂಡ್ಯದಿಂ ಮಾತ್ರ' ಎಂದು ಸುಮಲತಾ ಅಂಬರೀಶ್ ಅವರು ಹಿಂದೆಯೇ ಸ್ಪಷ್ಟಪಡಿಸಿದ್ದಾರೆ. ಮೈಸೂರು-ಕೊಡಗು ಕ್ಷೇತ್ರದಿಂದ ಸ್ಪರ್ಧಿಸಲು ಅವರು ಒಪ್ಪಿಗೆ ನೀಡಲಿದ್ದಾರೆಯೇ? ಎಂದು ಕಾದು ನೋಡಬೇಕು.

      ಸಿ.ಎಚ್.ವಿಜಯ ಶಂಕರ್ ಅವರು ಮೈಸೂರು-ಕೊಡಗು ಕ್ಷೇತ್ರದಿಂದ ಕಾಂಗ್ರೆಸ್ ಟಿಕೆಟ್ ಆಂಕಾಕ್ಷಿಯಾಗಿದ್ದರು. ಸುಮಲತಾ ಅವರಿಗೆ ಕ್ಷೇತ್ರದ ಟಿಕೆಟ್ ನೀಡಿದರೆ ವಿಜಯ ಶಂಕರ್ ಅವರ ನಡೆ ಏನು? ಎಂಬುದು ಕುತೂಹಲಕ್ಕೆ ಕಾರಣವಾಗಿದೆ.

      Notifications
      Settings
      Clear Notifications
      Notifications
      Use the toggle to switch on notifications
      • Block for 8 hours
      • Block for 12 hours
      • Block for 24 hours
      • Don't block
      Gender
      Select your Gender
      • Male
      • Female
      • Others
      Age
      Select your Age Range
      • Under 18
      • 18 to 25
      • 26 to 35
      • 36 to 45
      • 45 to 55
      • 55+