Breaking; ಚನ್ನಪಟ್ಟಣದಲ್ಲಿ ಕುಮಾರಸ್ವಾಮಿಗೆ ಕಬ್ಬಿನ ಹಾರದ ಸ್ವಾಗತ

ಬೆಂಗಳೂರು, ಡಿಸೆಂಬರ್ 19; ಮಾಜಿ ಮುಖ್ಯಮಂತ್ರಿ ಎಚ್. ಡಿ. ಕುಮಾರಸ್ವಾಮಿ ನೇತೃತ್ವದಲ್ಲಿ ನಡೆಯುತ್ತಿರುವ ಪಂಚರತ್ನ ರಥಯಾತ್ರೆ ಚನ್ನಪಟ್ಟಣ ತಲುಪಿದೆ. ಸ್ವಕ್ಷೇತ್ರದಲ್ಲಿ ಕಬ್ಬಿನ ಹಾರವನ್ನು ಹಾಕಿ ಕುಮಾರಸ್ವಾಮಿ ಸ್ವಾಗತಿಸಲಾಯಿತು.

ಸೋಮವಾರ ರಾತ್ರಿ ಪಂಚರತ್ನ ರಥಯಾತ್ರೆಯು ಎಚ್. ಡಿ. ಕುಮಾರಸ್ವಾಮಿ ರವರು ಕ್ಷೇತ್ರ ಚನ್ನಪಟ್ಟಣ ತಲುಪಿತು. ಸಾತನೂರು ವೃತ್ತದಲ್ಲಿ ಕಬ್ಬಿನ ಜಲ್ಲೆ ಹಾರ ಹಾಕಿ ಜನರು ಕುಮಾರಸ್ವಾಮಿ ಬರಮಾಡಿಕೊಂಡು.

ಎಚ್. ಡಿ. ಕುಮಾರಸ್ವಾಮ ಈ ಕುರಿತು ಟ್ವೀಟ್ ಮಾಡಿದ್ದು, 'ಚನ್ನಪಟ್ಟಣದಲ್ಲಿ ಪಂಚರತ್ನ ರಥಯಾತ್ರೆಯ ವಿಶ್ವರೂಪ. ಸಾತನೂರು ವೃತ್ತದಲ್ಲಿ ಕಬ್ಬಿನ ಜಲ್ಲೆ ಹಾರ ಹಾಕಿ ನನ್ನನ್ನು ಬರಮಾಡಿಕೊಂಡ ಅಭಿಮಾನಿಗಳು. ಅಭಿಮಾನದ ಅನಂತ ಸ್ವರೂಪಕ್ಕೆ ನನ್ನ ಧನ್ಯವಾದಗಳು' ಎಂದು ಹೇಳಿದ್ದಾರೆ.

ಪಂಚರತ್ನ ರಥಯಾತ್ರೆ ಚನ್ನಪಟ್ಟಣ ತಲುಪುತ್ತಿದ್ದಂತೆ ಎಚ್. ಡಿ. ಕುಮಾರಸ್ವಾಮಿ, ನಿಖಿಲ್ ಕುಮಾರಸ್ವಾಮಿ, ಸ್ಥಳೀಯ ನಾಯಕರು ಆಖಿಲ್ ಶಾ ಖಾದ್ರಿ ದರ್ಗಾಗೆ ಭೇಟಿ ನೀಡಿ ಪ್ರಾರ್ಥನೆ ಸಲ್ಲಿಸಿದರು.

ಬಳಿಕ ಶ್ರೀ ಕೆಂಗಲ್ ಆಂಜನೇಯಸ್ವಾಮಿ ದೇವಾಲಯಕ್ಕೆ ತೆರಳಿ ಪೂಜೆ ಸಲ್ಲಿಸಿದರು. ಕಳೆದ ಮೂರು ದಿನಗಳಿಂದ ರಾಮನಗರ ಜಿಲ್ಲೆಯಲ್ಲಿ ಪಂಚರತ್ನ ರಥಯಾತ್ರೆ ನಡೆಯುತ್ತಿದ್ದು, ಇಂದು ಚನ್ನಪಟ್ಟಣವನ್ನು ತಲುಪಿದೆ.

JDS Pancharatna Yatra Reached Channapatna

ಏನಿದು ಪಂಚರತ್ನ ರಥ ಯಾತ್ರೆ?

1. ಶಿಕ್ಷಣವೇ ಆಧುನಿಕ ಶಕ್ತಿ; ಉತ್ತಮ ಗುಣಮಟ್ಟದ ಹಾಗೂ ವ್ಯವಸ್ಥಿತ ಶಿಕ್ಷಣವನ್ನು ಉಚಿತವಾಗಿ ನೀಡುವ ಯೋಜನೆ.

2. ಆರೋಗ್ಯ ಸಂಪತ್ತು; ಪ್ರತಿಯೊಂದು ಗ್ರಾಮ ಪಂಚಾಯಿತಿಯ ವ್ಯಾಪ್ತಿಯಲ್ಲಿ 24*7 ಕಾರ್ಯ ನಿರ್ವಹಣೆ ಮಾಡುವ ಸುಸಜ್ಜಿತ ಹೈ-ಟೆಕ್ ಆಸ್ಪತ್ರೆ ನಿರ್ಮಾಣ.

3. ರೈತ ಚೈತನ್ಯ; ಆಧುನಿಕ ತಂತ್ರಜ್ಞಾನದ ಕೃಷಿ ಪದ್ಧತಿ ಅಳವಡಿಕೆ, ಸರಿಯಾದ ಬೆಳೆ ಶೇಖರಣಾ ವ್ಯವಸ್ಥೆ ಹಾಗೂ ಲಾಭದಾಯಕವಾದ ಮಾರುಕಟ್ಟೆ ವ್ಯವಸ್ಥೆ.

4. ಯುವ ನವ ಮಾರ್ಗ ಹಾಗೂ ಮಹಿಳಾ ಸಬಲೀಕರಣ; ಯುವಜನತೆ ಹಾಗೂ ಮಹಿಳೆಯರಿಗೆ ಉದ್ಯೋಗ ಪಡೆಯಲು ಅಗತ್ಯ ತರಬೇತಿ ಹಾಗೂ ಮಾರ್ಗದರ್ಶನ.

5. ವಸತಿಯ ಆಸರೆ; ವಸತಿ ಇಲ್ಲದವರಿಗೆ ಸರ್ಕಾರದಿಂದಲೇ ವಸತಿ ಕಟ್ಟಿಕೊಡುವ ಯೋಜನೆ

2023ರ ವಿಧಾನಸಭೆ ಚುನಾವಣೆಯಲ್ಲಿ ಜೆಡಿಎಸ್ ಪಕ್ಷ ಅಧಿಕಾರಕ್ಕೆ ಬಂದರೆ ಜಾರಿಗೊಳಿಸುವ ಕಾರ್ಯಕ್ರಮಗಳನ್ನು ಜನರಿಗೆ ವಿವರಿಸುತ್ತಾ ಎಚ್. ಡಿ. ಕುಮಾರಸ್ವಾಮಿ ಪಂಚರತ್ನ ರಥಯಾತ್ರೆ ನಡೆಸುತ್ತಿದ್ದಾರೆ.

ಯಾತ್ರೆ ಕೋಲಾರ, ಚಿಕ್ಕಬಳ್ಳಾಪುರ, ಬೆಂಗಳೂರು ಗ್ರಾಮಾಂತರ, ತುಮಕೂರು ಜಿಲ್ಲೆಗಳಲ್ಲಿ ಸಂಚಾರ ನಡೆಸಿ, ಈಗ ರಾಮನಗರ ಜಿಲ್ಲೆಗೆ ಪ್ರವೇಶ ಮಾಡಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+