ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಡಿಎಸ್ ರಥಯಾತ್ರೆ ಡಿ.15 ರಿಂದ ಪುನಾರಂಭ: ಸಮಾವೇಶ, ಎಚ್‌ಡಿಕೆ ಜನ್ಮದಿನ ಕಾರ್ಯಕ್ರಮದ ವಿವಿರ ಇಲ್ಲಿದೆ

|
Google Oneindia Kannada News

ಬೆಂಗಳೂರು, ಡಿಸೆಂಬರ್ 14: ಮಳೆಯ ಕಾರಣಕ್ಕೆ ತಾತ್ಕಾಲಿಕವಾಗಿ ಸ್ಥಗಿತಗೊಳಿಸಿದ್ದ 'ಪಂಚರತ್ನ ರಥಯಾತ್ರೆ' ನಾಳೆ ಗುರುವಾರದಿಂದ ರಾಮನಗರ ಜಿಲ್ಲೆಯ ಮಾಗಡಿಯಿಂದ ಪುನಾರಂಭಗೊಳ್ಳಲಿದೆ. ನಂತರ ಬೃಹತ್ ಸಮಾವೇಶ, ಎಚ್‌.ಡಿ. ಕುಮಾರಸ್ವಾಮಿ ಅವರ ಜನ್ಮದಿನ, ಶ್ರೀನಿವಾಸ ಕಲ್ಯಾಣ ಕಾರ್ಯಕ್ರಮಗಳು ನಡೆಯಲಿವೆ.

ಪಂಚರತ್ನ ರಥಯಾತ್ರೆ ಪುನರಾರಂಭ ಕುರಿತು ಮಾತನಾಡಿದ ಮಾಜಿ ಮುಖ್ಯಮಂತ್ರಿ ಎಚ್‌.ಡಿ.ಕುಮಾರಸ್ವಾಮಿ ಅವರು, ತಾತ್ಕಾಲಿಕವಾಗಿ ಮುಂದೂಡಲ್ಪಟ್ಟಿದ್ದ 'ಪಂಚರತ್ನ ರಥಯಾತ್ರೆ' ಮಳೆ ಬಿಡುವು ಕೊಟ್ಟ ಹಿನ್ನೆಲೆ ರಾಮನಗರ ಜಿಲ್ಲೆಯಿಂದ ಮತ್ತೆ ಆರಂಭವಾಗಲಿದೆ. ಡಿಸೆಂಬರ್ 15ರಂದು ಮಾಗಡಿ, 16ರಂದು ರಾಮನಗರ, 17ರಂದು ಹಾರೋಹಳ್ಳಿ, 18ರಂದು ಕನಕಪುರ, 19ರಂದು ಚನ್ನಪಟ್ಟಣ ಕ್ಷೇತ್ರದಲ್ಲಿ ಜೆಡಿಎಸ್ ರಥಯಾತ್ರೆ ನಡೆಯಲಿದೆ ಎಂದರು.

ಮಳೆಯ ಕಾರಣಕ್ಕೆ ಪಂಚರತ್ನ ರಥಯಾತ್ರೆ 4 ದಿನ ಮುಂದೂಡಿಕೆಮಳೆಯ ಕಾರಣಕ್ಕೆ ಪಂಚರತ್ನ ರಥಯಾತ್ರೆ 4 ದಿನ ಮುಂದೂಡಿಕೆ

ಮಾಗಡಿಯ ಶ್ರೀ ರಂಗನಾಥ ಸ್ವಾಮಿ ದೇವಾಲಯ ಮತ್ತು ಶ್ರೀ ಸೋಮೇಶ್ವರ ದೇವಾಲಯದಲ್ಲಿ ಸಂಜೆ ಕುಮಾರಸ್ವಾಮಿ ಪೂಜೆ ಸಲ್ಲಿಸಲಿದ್ದಾರೆ. ನಂತರ ಮಾಗಡಿ ಪಟ್ಟಣದ ಜೆಡಿಎಸ್ ಭವನದಲ್ಲಿ ಬೃಹತ್ ಸಭೆ ನಡೆಯಲಿದೆ. ಅದಾದ ಮೇಲೆ ಶ್ರೀ ಕಲ್ಯಾ ಗೇಟ್ ಗಣಪತಿ ದೇವಾಲಯದಲ್ಲಿ ಪೂಜೆ ನೆರವೇರಿಸಿ ನಂತರ ಮೆರವಣಿಗೆ ನಡೆಯಲಿದೆ. ಅಂತಿಮವಾಗಿ ಮಾಗಡಿಯ ಕೋಟೆ ಮೈದಾನದಲ್ಲಿ ಬೃಹತ್ ಸಮಾವೇಶ ಹಮ್ಮಿಕೊಳ್ಳಲಾಗಿದೆ.

JDS Pancharatna Yatra Resume From Dec.15 In Ramanagara District HD Kumaraswamy

ಮಾಗಡಿ ಕ್ಷೇತ್ರದ ರಥಯಾತ್ರೆಯಲ್ಲಿ ಶಾಸಕ ಮಂಜುನಾಥ್ ಅವರು ಮಾಜಿ ಮುಖ್ಯಮಂತ್ರಿ ಅವರ ಜತೆ ಇರಲಿದ್ದಾರೆ.

ಡಿಸೆಂಬರ್ 20ರಂದು ಮಂಡ್ಯ ಜಿಲ್ಲೆಗೆ ರಥಯಾತ್ರೆ ಪ್ರವೇಶ ಮಾಡಲಿದೆ. 20ರಂದು ಮಳವಳ್ಳಿ, 21ಕ್ಕೆ ಮದ್ದೂರು, 22ಕ್ಕೆ ಮಂಡ್ಯ, 23ಕ್ಕೆ ಶ್ರೀರಂಗಪಟ್ಟಣ, 24ಕ್ಕೆ ಪಾಂಡವಪುರ, 25ಕ್ಕೆ ಕೆ.ಆರ್.ಪೇಟೆ, 26ಕ್ಕೆ ನಾಗಮಂಗಲ ಕ್ಷೇತ್ರದಲ್ಲಿ ಪಂಚರತ್ನ ರಥಯಾತ್ರೆ ಜರುಗಲಿದೆ ಎಂದು ಕುಮಾರಸ್ವಾಮಿ ವಿವರಿಸಿದರು.

ಎಚ್‌ಡಿಕೆ ಜನ್ಮದಿನ: ಜ.3ಕ್ಕೆ ಕಲ್ಯಾಣ ಕರ್ನಾಟಕ ಪ್ರವೇಶ

ಡಿಸೆಂಬರ್ 27ರಂದು ತುರುವೇಕೆರೆ, 28ರಂದು ಚಿಕ್ಕನಾಯಕನಹಳ್ಳಿ, 29ರಂದು ತುಮಕೂರು ಗ್ರಾಮಾಂತರ, 30ರಂದು ಕುಣಿಗಲ್ ಕ್ಷೇತ್ರದಲ್ಲಿ ರಥಯಾತ್ರೆ ನಡೆಯಲಿದೆ. ಜನವರಿ 3ರಂದು ಬೀದರ್ ವಿಧಾನಸಭೆ ಕ್ಷೇತ್ರದ ಮೂಲಕ ಕಲ್ಯಾಣ ಕರ್ನಾಟಕವನ್ನು ರಥಯಾತ್ರೆ ಪ್ರವೇಶ ಮಾಡಲಿದೆ. ಈ ಮೂಲಕ ಕಲ್ಯಾಣ ಕರ್ನಾಟಕ ಭಾಗದ ಜನರನ್ನು ಚುನಾವಣೆ ದೃಷ್ಟಿಯಿಂದ ಜೆಡಿಎಸ್ ನಾಯಕರು ಓಲೈಸಲಿದ್ದಾರೆ.

ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಅವರ ಹುಟ್ಟುಹಬ್ಬದ ನಿಮಿತ್ತ 16ರಂದು ರಾಮನಗರದಲ್ಲಿ ಶ್ರೀ ಶ್ರೀನಿವಾಸ ಕಲ್ಯಾಣ ಮಹೋತ್ಸವ ಹಮ್ಮಿಕೊಳ್ಳಲಾಗಿದೆ. ಈ ಕಾರ್ಯಕ್ರಮದಲ್ಲಿ ಮಾಜಿ ಪ್ರಧಾನಮಂತ್ರಿ ಹೆಚ್.ಡಿ.ದೇವೆಗೌಡರ ಕುಟುಂಬ ಸದಸ್ಯರು, ಇನ್ನಿತರ ಮುಖಂಡರು, ಕಾರ್ಯಕರ್ತರು ಪಾಲ್ಗೊಳ್ಳಲಿದ್ದಾರೆ.

JDS Pancharatna Yatra Resume From Dec.15 In Ramanagara District HD Kumaraswamy

ಪೂರ್ವ ನಿಗದಿತ ಕಾರ್ಯಕ್ರಮಗಳ ಹಿನ್ನೆಲೆಯಲ್ಲಿ ಡಿಸೆಂಬರ್ 6ರಂದು ತುಮಕೂರು ಜಿಲ್ಲೆಯ ಗುಬ್ಬಿ ಕ್ಷೇತ್ರದಲ್ಲಿ ರಥಯಾತ್ರೆ ನಡೆಸಿದ ನಂತರ ಡಿಸೆಂಬರ್ 11ರವರೆಗು ಮುಂದೂಡಲಾಗಿತ್ತು. ನಂತರ ಬಂಗಾಳಕೊಲ್ಲಿಯಲ್ಲಿ ಉಂಟಾದ ವಾಯುಭಾರ ಕುಸಿತದಿಂದ ರಾಜ್ಯದಲ್ಲಿ ವ್ಯಾಪಕ ಮಳೆ ಸುರಿಯುತ್ತಿತ್ತು. ಹೀಗಾಗಿ ಡಿಸೆಂಬರ್ 14ರವರೆಗು ಯಾತ್ರೆಯನ್ನು ಮತ್ತೊಮ್ಮೆ ಮುಂದೂಡಲಾಗಿತ್ತು.

English summary
JDS Pancharatna Yatra resume from December 15 In Ramanagara District HD Kumaraswamy said.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X