ಜೆಡಿಎಸ್ ನಾಯಕಿ ಕಿಡ್ನಾಪ್ ಕೇಸಿನಲ್ಲಿ ಬಂಧನ, ಪಕ್ಷದಿಂದ ವಜಾ
ಬೆಂಗಳೂರು,
ಜನವರಿ 15: ಜೆಡಿಎಸ್ ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಅರ್ಷಿಯಾ ಅಲಿ ಅವರನ್ನು ಪಕ್ಷದಿಂದ ವಜಾಗೊಳಿಸಲಾಗಿದೆ. ರಿಯಲ್ ಎಸ್ಟೇಟ್ ದಲ್ಲಾಳಿ ಮಲ್ಲಿಕಾರ್ಜುನ ಅಲಿಯಾಸ್ ಮಲ್ಲಣ್ಣ ಎಂಬುವವರನ್ನು ಕಿಡ್ನಾಪ್ ಮಾಡಿದ ಆರೋಪದ ಮೇಲೆ ಅರ್ಷಿಯಾ ಅಲಿ ಹಾಗೂ ಮೂವರನ್ನು ಶನಿವಾರದಂದು ಪೊಲೀಸರು ಬಂಧಿಸಿ, ವಿಚಾರಣೆ ನಡೆಸಿದ್ದರು. id="toptextpromo"> id='are-slot-1' class='oiad oi-axt oiadv'> id='top-searched-articles'>ಅರ್ಷಿಯಾ
ಅವರು ಪಕ್ಷದ ತತ್ವ ಸಿದ್ಧಾಂತಕ್ಕೆ ವಿರುದ್ಧವಾಗಿ ನಡೆದುಕೊಂಡಿದ್ದಾರೆ. ಹೀಗಾಗಿ, ಅವರನ್ನು ರಾಜ್ಯ ಮಹಿಳಾ ಘಟಕದ ಅಧ್ಯಕ್ಷೆ ಹುದ್ದೆ ಹಾಗೂ ಪಕ್ಷದ ಪ್ರಾಥಮಿಕ ಸದಸ್ಯತ್ವದಿಂದ ವಜಾಗೊಳಿಸಲಾಗಿದೆ ಎಂದು ಪಕ್ಷದ ಮಹಾಪ್ರಧಾನ ಕಾರ್ಯದರ್ಶಿ ಬಿ.ಎಂ. ಫಾರೂಖ್ ತಿಳಿಸಿದ್ದಾರೆ. id='are-slot-2' class='oiad oi-axt oiadv'>












Click it and Unblock the Notifications