ರಾಜ್ಯ ಬಿಜೆಪಿಯಂತೂ ನಪುಂಸಕವಾಗಿರುವುದು ಸತ್ಯ: ಜೆಡಿಎಸ್ ವಾಗ್ದಾಳಿ

ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರವನ್ನು ಜನರು ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ರಾಜ್ಯ ಬಿಜೆಪಿ ವಿರುದ್ದ ಜೆಡಿಎಸ್ ರಾಜ್ಯ ಘಟಕ ಟ್ವೀಟ್ ಮೂಲಕ ವಾಗ್ದಾಳಿ ನಡೆಸಿದೆ.

ಬೆಂಗಳೂರು,ಫೆಬ್ರವರಿ7: ನಮ್ಮ ಕರುನಾಡು ಬರಗಾಲ, ಪ್ರವಾಹದಿಂದ ತತ್ತರಿಸಿದಾಗೆಲ್ಲ 'ಮಾಯವಾಗುವ' ಪ್ರಧಾನಿಯವರು, ಚುನಾವಣೆ ಹತ್ತಿರ ಬಂದ ತಕ್ಷಣ ಪ್ರತ್ಯಕ್ಷರಾಗುತ್ತಾರೆ ಎಂದು ಜೆಡಿಎಸ್‌ ರಾಜ್ಯ ಘಟಕ ಕಿಡಿಕಾರಿದೆ.

ಈ ಕುರಿತು ಸರಣಿ ಟ್ವೀಟ್ ಮಾಡಿರುವ ಜೆಡಿಎಸ್ ನಪುಂಸಕ ರಾಜ್ಯ ಬಿಜೆಪಿ ಸರ್ಕಾರ ಎಂದು ಹ್ಯಾಶ್ ಟ್ಯಾಗ್ ಬಳಸಿ ವಾಗ್ದಾಳಿ ನಡೆಸಿಸದೆ. ಕರ್ನಾಟಕ ಬಿಜೆಪಿ ಪಾಲಿಗೆ ಇಂದು 'ಪಾಲಕರನ್ನು ಶಾಲೆಗೆ ಬರಮಾಡಿಕೊಳ್ಳುವ ದಿನ'ದ ಹಾಗೆ. ಪ್ರಧಾನಿ ನರೇಂದ್ರ ಮೋದಿ ಅವರು ರಾಜ್ಯಕ್ಕೆ ಆಗಮಿಸುತ್ತಿರುವ ಈ ವೇಳೆ, ಅವರನ್ನು ಸ್ವಾಗತಿಸಿ ಚುನಾವಣೆ ಗೆಲ್ಲಲು ಅಣಿಯಾಗುವ ಉತ್ಸಾಹಲ್ಲಿದ್ದಾರೆ ರಾಜ್ಯ ಬಿಜೆಪಿಯವರು ಎಂದು ಟ್ವೀಟ್‌ ಮೂಲಕ ಟೀಕಿಸಿದೆ.

ಇಡೀ ದೇಶದ ಆರ್ಥಿಕತೆಗೆ ಬೆನ್ನೆಲುಬಾಗಿರುವ ಪ್ರಮುಖ ರಾಜ್ಯಗಳಲ್ಲೊಂದಾದ ಕರ್ನಾಟಕದ ಸಮಸ್ಯೆಗಳಿಗೆ ಕುರುಡಾಗಿ ವರ್ತಿಸುವವರು, ಈಗ ಮತ ಕೇಳಲು ಯಾವ ಮುಖ ಹೊತ್ತು ಬರುತ್ತಾರೆ? ಎಂದು ಪ್ರಶ್ನಿಸಿದೆ.

ಆದಾಯ ಮತ್ತು ಕಾರ್ಪೋರೆಟ್ ತೆರಿಗೆ, ಜಿಎಸ್ ಟಿಗಳನ್ನು ಕೇಂದ್ರದ ಖಜಾನೆಗೆ ಭರ್ತಿಯಾಗಿ ತುಂಬಿಸಿಕೊಳ್ಳಲು ಮಾತ್ರ ಕರ್ನಾಟಕ ಬೇಕು ಎನ್ನುವ ಹಾಗಾಗಿದೆ. ನಮ್ಮಿಂದ ಸಂಗ್ರಹವಾದ ತೆರಿಗೆಯಲ್ಲಿ ಕನಿಷ್ಠ ಪಾಲು ಸಿಗುವುದೇ ಕನಸಾಗಿದೆ. ಇನ್ನೂ ಸಮಪಾಲು ದೂರದ ವಿಷಯ. ಒಕ್ಕೂಟ ಸರ್ಕಾರವು ಕರ್ನಾಟಕವನ್ನು ಕಾಲು ಒರೆಸುವ ಮ್ಯಾಟ್ ನಂತೆ ಬಳಸುತ್ತಿದೆ.

JDS Party Tweets Outraged On BJP government,

ಕರ್ನಾಟಕವು ಸೇರಿದಂತೆ ಎಲ್ಲ ರಾಜ್ಯಗಳ‌ ಪ್ರಾದೇಶಿಕತೆಯ ಕತ್ತು‌ಹಿಸುಕುವ ಕುತಂತ್ರದ ರಾಜಕೀಯ ಮುಂದುವರಿದಿದೆ. ರಾಜ್ಯಗಳ ಅಧಿಕಾರವನ್ನೆಲ್ಲ ಮೊಟಕುಗೊಳಿಸಿದ್ದಾಯ್ತು. ಈಗ, ಚುನಾವಣೆ ಹತ್ತಿರ ಬಂದಿದೆ ಎಂಬ ಕಾರಣಕ್ಕೆ ಕೆಲವು ಯೋಜನೆಗಳ‌ ಉದ್ಘಾಟನೆಗೆ ಆಗಮಿಸುತ್ತಿರುವ ಪ್ರಧಾನಿಯವರೆ, ನಿಮ್ಮ ಮುಖವಾಡ ಕಳಚಿ ಬಹಳ ದಿನಗಳಾಗಿವೆ. ಇನ್ನೂ ರಾಜ್ಯದಲ್ಲಿ ಅಧಿಕಾರ ನಡೆಸುತ್ತಿರುವ ಬಿಜೆಪಿ ಸರ್ಕಾರ ಮತ್ತು 25 ಸಂಸದರು‌ ತಮ್ಮ ಬೆನ್ನೆಲುಬನ್ನು ಸಂಪೂರ್ಣವಾಗಿ ಕಳೆದುಕೊಂಡಿದ್ದಾರೆ. ರಾಜ್ಯದ ಜನತೆ ಅವರಿಗೆ ಮುಖ್ಯವೇ ಅಲ್ಲ. ಏನಿದ್ದರೂ ಮೋದಿಯವರ ಭಜನೆ ಮತ್ತು ಮುಖಸ್ತುತಿ ರಾಜಕಾರಣವಷ್ಟೆ! ಮೋದಿಯವರ ಹೆಸರಿನಲ್ಲಿ ಅಧಿಕಾರ ಪಡೆಯುವ ಹುಚ್ಚು ಭ್ರಮೆ ಅವರಿಗೆಲ್ಲ ಎಂದು ಕಿಡಿಕಾರಿದೆ.

ಮೋದಿಯವರು ಬಂದ ದಿನ ರೆಕ್ಕೆ ಬಲಿತ ಹಕ್ಕಿಯಂತೆ ಆಡುವುದು ಮಾತ್ರ ಇಲ್ಲಿನ ಬಿಜೆಪಿಗರಿಗೆ ಗೊತ್ತಿರುವುದು! ಇಂತಹ ಬೃಹತ್ ನಾಟಕ ಮಂಡಳಿಯ ಯಾವ ಪ್ರದರ್ಶನವೂ ಇನ್ನು ಕರ್ನಾಟಕದಲ್ಲಿ ನಡೆಯುವುದಿಲ್ಲ. ನಿಮ್ಮಂತಹ ಮುಖೇಡಿ ರಾಜಕಾರಣಿಗಳು ಹಾಗೂ ನಿಮ್ಮನ್ನು ತೊಗಲು ಗೊಂಬೆಗಳನ್ನಾಗಿ ಮಾಡಿರುವ ದೆಹಲಿ ದೊರೆಗಳನ್ನು ರಾಜ್ಯ ತಿರಸ್ಕರಿಸಲಿದೆ.

ರಾಜ್ಯ ಬಿಜೆಪಿಯಂತೂ ನಪುಂಸಕವಾಗಿರುವುದು ದಿಟ. ಬರಡು ಭೂಮಿಯಂತೆ ಯಾವ ಪ್ರಯೋಜನವು ಇಲ್ಲದ ರಾಜ್ಯ ಸರ್ಕಾರವಿದು. ಸಾರ್ವಜನಿಕರ ಹಣ ಬಾಚುವ, ದೋಚುವುದಷ್ಟೆ ಇವರ ಕಾಯಕ. ಒಟ್ಟಿನಲ್ಲಿ, ಕೇಂದ್ರದ ತಾಳಕ್ಕೆ ಕುಣಿಯುತ್ತಾ, ರಾಜ್ಯದ ನೆಮ್ಮದಿ ಕಸಿಯುವ ಕೀಚಕ ಸರ್ಕಾರವನ್ನು ಜನರು ಕಿತ್ತೊಗೆಯುವುದು ಸೂರ್ಯ-ಚಂದ್ರರಷ್ಟೇ ಸತ್ಯ ಎಂದು ರಾಜ್ಯ ಬಿಜೆಪಿ ವಿರುದ್ದ ಜೆಡಿಎಸ್ ರಾಜ್ಯ ಘಟಕ ಕಿಡಿಕಾರಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+