ಇದ್ಯಾವ ಸೀಮೆ ಅರ್ಥಶಾಸ್ತ್ರ?? ಆ ಅಸಹ್ಯ ತನ್ನದಲ್ಲ ಎನ್ನುವ ' ಅವಿವೇಕ ' ಕಾಂಗ್ರೆಸ್ ಪಕ್ಷದ್ದು: ಜೆಡಿಎಸ್ ಕಿಡಿ
ಬೆಂಗಳೂರು, ಜುಲೈ 05: ಕಾಂಗ್ರೆಸ್ ವಿರುದ್ದ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಮತ್ತೆ ವಾಗ್ದಾಳಿಯನ್ನ ಮುಂದುವರೆಸಿದ್ದು, ಇದೀಗ ಕಾಂಗ್ರೆಸ್ ಸರ್ಕಾರದ ವಿರುದ್ದ ಜೆಡಿಎಸ್ ರಾಜ್ಯ ಘಟಕ ಸರಣಿ ಟ್ವೀಟ್ ಮೂಲಕ ಕಿಡಿಕಾರಿದೆ.
ಸತ್ಯಕ್ಕೆ ಸಮಾಧಿ ಕಟ್ಟುವುದು ಕಾಂಗ್ರೆಸ್ ಚಾಳಿ, ಅದು ಮೂಲತಃ ಸುಳ್ಳುಗಳ ವಾಚಾಳಿ. ಮುಖದ ಮೇಲೆ ಕೊಚ್ಚೆ ಹಾಕಿಕೊಂಡವನು ಆ ಗಲೀಜು ಅನ್ಯರ ಕಣ್ಣಿಗೆ ಬೀಳದಿರಲೆಂದು ಇನ್ನೊಬ್ಬರ ಮೇಲೆ ಅದನ್ನೇ ಎರಚಿ ಕುಣಿದನಂತೆ! ಹಂಗಿದೆ ನೋಡಿ ʼಕಮೀಷನ್ ಕಾಂಗ್ರೆಸ್ʼನ ' ಹೊಸ ವರಸೆ ಮತ್ತು ಹೊಸ ಕಸವರಿಕೆ!! ಎಂದು ಜೆಡಿಎಸ್ ಕುಟುಕಿದೆ.

ಕಾಂಗ್ರೆಸ್ ಕುಮಾರಸ್ವಾಮಿ ಅವರ ವಿರುದ್ದ ತಾಜ್ ವೆಸ್ಟ್ ಎಂಡ್ ಹೋಟಲ್ ವಿಚಾರವಾಗಿ ಟೀಕಿಸಿದ್ದು, ಇದೀಗ ಜೆಡಿಎಸ್ ತಿರುಗೇಟು ನೀಡಿದೆ. ವೆಸ್ಟ್ ಎಂಡ್ ಲೆಕ್ಕ ಇರಲಿ, ' ಸಿಎಂ ಟಿಪ್ಪಣಿ ಬಿಕರಿ'ಗೆ ಲೆಕ್ಕ ಇಡಿ. ಒಂದು ಎಸಿ ಹುದ್ದೆ, 3 ಟಿಪ್ಪಣಿ!! ಇದ್ಯಾವ ಸೀಮೆ ಅರ್ಥಶಾಸ್ತ್ರ?? ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ ಹಾಗೂ ರಾಜನೀತಿ!! ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ ವೈ ಎಸ್ ಟಿ ಟ್ಯಾಗ್ಸ್ ಹುಂಡಿಗೋ? ಇಲ್ಲೇ ಸಾಕ್ಷ್ಯ ಇದೆ.ಪಾಪ.. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ!! ಎಂದು ಕಿಡಿಕಾರಿದೆ.
ವೆಸ್ಟ್ ಎಂಡ್ ಲೆಕ್ಕ ಇರಲಿ, ' ಸಿಎಂ ಟಿಪ್ಪಣಿ ಬಿಕರಿ'ಗೆ ಲೆಕ್ಕ ಇಡಿ. ಒಂದು ಎಸಿ ಹುದ್ದೆ, 3 ಟಿಪ್ಪಣಿ!! ಇದ್ಯಾವ ಸೀಮೆ ಅರ್ಥಶಾಸ್ತ್ರ?? ಕೌಟಿಲ್ಯನೂ ಬೆಚ್ಚಿಬೀಳುವ ಆಡಳಿತ ಹಾಗೂ ರಾಜನೀತಿ!! ಈ ಟಿಪ್ಪಣಿಗಳ ಹಣ ಪಕ್ಷದ ಮಂಡಿಗೋ ಅಥವಾ #YstTax ಹುಂಡಿಗೋ? ಇಲ್ಲೇ ಸಾಕ್ಷ್ಯ ಇದೆ.
— Janata Dal Secular (@JanataDal_S) July 5, 2023
ಪಾಪ.. ಬೂಟಾಟಿಕೆ ದಾಸಯ್ಯನಿಗೆ ಮೈಯ್ಯೆಲ್ಲಾ ಪಂಗನಾಮ!! 2/4
ಮಾಜಿ ಮುಖ್ಯಮಂತ್ರಿಗಳಾದ ಹೆಚ್ ಡಿ ಕುಮಾರಸ್ವಾಮಿ ಅವರು ವೈ ಎಸ್ ಟಿ ತೆರಿಕೆ ಬಗ್ಗೆ ಹೇಳಿ, ʼಕಾಸಿಗಾಗಿ ಹುದ್ದೆʼ #CashForPosting ದಂಧೆಯನ್ನು ದಾಖಲೆ ಸಮೇತ ಬಿಚ್ಚಿಟ್ಟರೂ ಆ ಅಸಹ್ಯ ತನ್ನದಲ್ಲ ಎನ್ನುವ ' ಅವಿವೇಕ ' ಕಾಂಗ್ರೆಸ್ ಪಕ್ಷದ್ದು. ಆ ಅವಿವೇಕವನ್ನು ಮುಚ್ಚಿಕೊಳ್ಳಲು ಈಗ ವೆಸ್ಟ್ʼಎಂಡ್ ಎನ್ನುವ ಸವಕಲು ವಿಷಯ ನೆನಪು ಮಾಡಿಕೊಂಡಿದೆ.

ವೆಸ್ಟ್ʼಎಂಡ್ ಬಾಡಿಗೆ ಮಾತಿರಲಿ; ಲುಲು ಮಾಲು ವಿಷಯಕ್ಕೆ ಬರೋಣ. ಹೊಲ ಉತ್ತಿ, ಬೀಜ ಬಿತ್ತಿ ಬೆವರಿನ ಹೊಳೆ ಹರಿಸಿ ತೆಗೆದ ಫಸಲಿಗೆ ಲುಲು ಮಾಡಬಹುದಾ!? ಒಂದು ವೇಳೆ ಮಾಡಬಹುದಾದರೆ, ನಿಮ್ಮ ʼಲುಲುಕುಮಾರ್ʼಗಿಂತ ಬೆಸ್ಟ್ ಎಕನಾಮಿಸ್ಟ್ ಇನ್ನೊಬ್ಬರಿಲ್ಲ!! ಹಾಗಿದ್ದರೆ, ಅವರನ್ನೇ ವಿತ್ತಮಂತ್ರಿ ಮಾಡಬಹುದಿತ್ತಲ್ಲ!? ಎಂದು ಜೆಡಿಎಸ್ ರಾಜ್ಯ ಘಟಕ ಕಾಂಗ್ರೆಸ್ ಪಕ್ಷವನ್ನ ಪ್ರಶ್ನಿಸಿದೆ.
ಕುಮಾರಸ್ವಾಮಿ ವಿರುದ್ ಕಾಂಗ್ರೆಸ್ ಟ್ವೀಟ್ ಏನು?
ವೆಸ್ಟ್ ಎಂಡ್ ಹೋಟೆಲ್‌ನಲ್ಲಿ ಒಂದು ದಿನದ ಬಾಡಿಗೆ ಎಷ್ಟು ಹೆಚ್ ಡಿ ಕುಮಾರಸ್ವಾಮಿ ಅವರೇ? ಅಲ್ಲೊಂದು ಖಾಯಂ ಅಡ್ಡ ತೆರೆದಿದ್ದೀರಿ ಅಂದರೆ ಅದಕ್ಕೆ ಎಷ್ಟು ಕೋಟಿ ಸುರಿದಿದ್ದೀರಿ? ವೆಸ್ಟ್ ಎಂಡ್ ಹೋಟೆಲಿಗೆ ಜಮೀನಿನಲ್ಲಿ ಉಳುಮೆ ಮಾಡಿ ಬಾಡಿಗೆ ಕಟ್ಟುತ್ತಿದ್ದೀರಾ? ಅಥವಾ "KST" ಸಂಗ್ರಹದ ಹಣ ಬಳಸುತ್ತಿದ್ದೀರಾ? ಎಂದು ರಾಜ್ಯ ಕಾಂಗ್ರೆಸ್ ಕುಮಾರಸ್ವಾಮಿ ಅವರನ್ನ ಪ್ರಶ್ನಿಸಿದ್ದು, ಕುಮಾರಸ್ವಾಮಿ ಉತ್ತರಿಸಬೇಕು ಎಂದು ಆಗ್ರಹಿಸಿದೆ.












Click it and Unblock the Notifications