ಉತ್ತಮ ಕಾರ್ಯಕ್ರಮ ಕೊಡದಿದ್ದರೆ 2028ರಲ್ಲಿ ಜೆಡಿಎಸ್‌ ಪಕ್ಷ ವಿಸರ್ಜನೆ: ಕುಮಾರಸ್ವಾಮಿ

ವಿಜಯಪುರ,ಜನವರಿ19: ಜೆಡಿಎಸ್ ನಿಂದ ರೈತರಿಗೆ ಒಳ್ಳೆಯ ಕಾರ್ಯಕ್ರಮ ನೀಡದಿದ್ದರೆ 2028 ರಲ್ಲಿ ಪಕ್ಷವನ್ನ ವಿಸರ್ಜಿಸುತ್ತೇನೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ.

ಈ ಕುರಿತು ವಿಜಯಪುರ ಜಿಲ್ಲೆಯ ಸಿಂದಗ ಪಟ್ಟಣದಲ್ಲಿ ಆಯೋಜಿಸಿದ್ದ ಪಂಚರತ್ನ ರಥಯಾತ್ರೆ ಸಮಾವೇಶದಲ್ಲಿ ಮಾತನಾಡಿದ ಅವರು, ಜೆಡಿಎಸ್‌ ಪಕ್ಷ ರೈತರಿಗೆ ಸಾಲ ಮುಕ್ತರನ್ನಾಗಿ ಮಾಡಲು ಒಳ್ಳೆಯ ಕಾರ್ಯಕ್ರಮ ನೀಡಬೇಕಾಗಿದೆ. ರೈತರು ಸಾಲ ಮಾಡಿಕೊಂಡು ಸಂಕಷ್ಟದಲ್ಲಿದ್ದಾರೆ. ತಮ್ಮ ಸರ್ಕಾರ ಅಧಿಕಾರಕ್ಕೆ ಬಂದರೆ ರೈತರನ್ನು ಸಾಲ ಮುಕ್ತರನ್ನಾಗಿ ಮಾಡಲಾಗುವುದು. ಜೆಡಿಎಸ್‌ಗೆ ಸ್ಪಷ್ಟಬಹುಮತ ನೀಡಿ ಐದು ವರ್ಷ ಪೂರ್ಣಾವಧಿ ಅಧಿಕಾರ ನೀಡಿದರೆ ರೈತರಿಗೆ ಒಳ್ಳೆಯ ಕಾರ್ಯಕ್ರಮ ನೀಡಲಾಗುವುದು ಎಂದು ಹೇಳಿದರು.

ಸಿಂದಗಿಯಲ್ಲಿ ಜನರು ದೇವೇಗೌಡರು ನೀಡಿದ ನೀರಾವರಿ ಯೋಜನೆ ನೆನಪಿಟ್ಟುಕೊಂಡಿದ್ದಾರೆ. ನಮ್ಮ ತಪ್ಪಿನಿಂದ ಕಳೆದ ಚುನಾವಣೆಯಲ್ಲಿ ಸೋಲುಂಡಿದ್ದೇವೆ. ಅಂದು ದೇವೇಗೌಡರನ್ನು ಬಹಳ ಪ್ರೀತಿಯಿಂದ ಸ್ವಾಗತಿಸಿದ್ದೀರಿ. ದೇವೇಗೌಡರ ಮೇಲೆ ನೀವು ಇಟ್ಟಿರುವ ಪ್ರೀತಿಯನ್ನು ನಾನು ಮರೆತಿಲ್ಲ. ಬಿಜೆಪಿ ಜನರ ತೆರಿಗೆ ಹಣ ಲೂಟಿ ಮಾಡುತ್ತಿದೆ. ಕಾಂಗ್ರೆಸ್‌, ಬಿಜೆಪಿ ಸರ್ಕಾರಗಳು ರೈತರಿಗಾಗಿ ಕಾರ್ಯಕ್ರಮ ಕೊಡಲಿಲ್ಲ ಎಂದು ವಾಗ್ದಾಳಿ ನಡೆಸಿದರು.

JDS Party Will Dissolve In 2028 If It Does Not Give A Good Program HD Kumaraswamy Said

ಪೂರ್ಣಪ್ರಮಾಣದಲ್ಲಿ ಅಧಿಕಾರ ಕೊಟ್ಟರೆ ಮಾತಿಗೆ ತಪ್ಪದೆ ಪಂಚರತ್ನ ಯೋಜನೆಗಳನ್ನು ಜಾರಿಗೊಳಿಸಲಾಗುವುದು. ನಾನು ಒಳ್ಳೆಯ ಕಾರ್ಯಕ್ರಮ ಕೊಡದಿದ್ದರೆ ಮುಂದೆ ನಿಮ್ಮ ಬಳಿ ಮತ ಕೇಳಲು ಬರಲ್ಲ. ರೈತರು ಸಾಲಗಾರರು ಆಗದಂತೆ ನೋಡಿಕೊಳ್ಳುವುದು ನಮ್ಮ ಜವಾಬ್ದಾರಿ. ಸಿಂದಗಿಯ ಜನರು ದೇವೇಗೌಡರು ನೀಡಿದ್ದ ನೀರಾವರಿ ಯೋಜನೆ ನೆನಪಿಟ್ಟುಕೊಂಡಿದ್ದಾರೆ. ನಮ್ಮ ತಪ್ಪಿನಿಂದ ಕಳೆದ ಚುನಾವಣೆಯಲ್ಲಿಸೋಲುಂಡಿದ್ದೇವೆ. ಅಂದು ದೇವೇಗೌಡರನ್ನು ಬಹಳ ಪ್ರೀತಿಯಿಂದ ಸ್ವಾಗತಿಸಿದ್ದೀರಿ. ದೇವೇಗೌಡರ ಮೇಲೆ ನೀವಿಟ್ಟ ಪ್ರೀತಿ ಮರೆತಿಲ್ಲಎಂದು ಕುಮಾರಸ್ವಾಮಿ ತಿಳಿಸಿದರು.

ಪಂಚರತ್ನ ಯೋಜನೆಗಳ ಬಗ್ಗೆ ಮಾತನಾಡಲು ಮೂರ್ನಾಲ್ಕು ಗಂಟೆ ಬೇಕು. ಪಂಚರತ್ನ ಯೋಜನೆಗೆ ಜಾತಿ-ಧರ್ಮ ಇಲ್ಲ.ನಾವು 5 ಕಾರ್ಯಕ್ರಮಗಳು ಜಾರಿಯಾದರೆ ರಾಮರಾಜ್ಯವಾಗುತ್ತದೆ. ಕಾಂಗ್ರೆಸ್‌, ಬಿಜೆಪಿಯಿಂದ ಇಂಥ ಕಾರ್ಯಕ್ರಮಗಳನ್ನು ಜಾರಿ ಮಾಡೋದು ಸಾಧ್ಯವಿಲ್ಲ. ಬಿಜೆಪಿ ಜನರ ತೆರಿಗೆ ಹಣ ಲೂಟಿ ಮಾಡುತ್ತಿದೆ. ಕಾಂಗ್ರೆಸ್‌-ಬಿಜೆಪಿ ರೈತರಿಗಾಗಿ ಕಾರ್ಯಕ್ರಮ ಕೊಡಲಿಲ್ಲ ಎಂದು ಕುಮಾರಸ್ವಾಮಿ ವಾಗ್ದಾಳಿ ನಡೆಸಿದರು.

JDS Party Will Dissolve In 2028 If It Does Not Give A Good Program HD Kumaraswamy Said

ಜೆಡಿಎಸ್‌ ಅಭ್ಯರ್ಥಿ ಶಿವಾನಂದ ಪಾಟೀಲ ಸೋಮಜಾಳ ಮಾತನಾಡಿ, ಒಂದೇ ಸಮುದಾಯದ ಇಬ್ಬರು ಅಭ್ಯರ್ಥಿಯಾದರೆ ಚುನಾವಣೆ ಕಷ್ಟವಾಗುತ್ತದೆ ಎಂಬುದು ವಿರೋಧಿಗಳ ಊಹಾಪೋಹ. ವ್ಯಕ್ತಿ ಸರಿಯಾಗಿದ್ದರೆ ಅಭಿವೃದ್ಧಿ ಸಾಧ್ಯ. ಸೈನಿಕನಂತೆ ಪಕ್ಷಕ್ಕಾಗಿ ಕ್ಷೇತ್ರದ ಅಭಿವೃದ್ಧಿಗಾಗಿ ಕೆಲಸ ಮಾಡುವೆ ಎಂದು ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+