5 ಜಿಲ್ಲೆಗಳಲ್ಲಿ ಒಬಿಸಿ ಸಮಾವೇಶ ನಡೆಸಲಿದೆ ಜೆಡಿಎಸ್‌

Posted By: Gururaj
Subscribe to Oneindia Kannada

ಬೆಂಗಳೂರು, ಫೆಬ್ರವರಿ 11 : ಜೆಡಿಎಸ್‌ ಬಿಎಸ್‌ಪಿ ಜೊತೆ ಚುನಾವಣಾ ಮೈತ್ರಿ ಮಾಡಿಕೊಂಡಿದೆ. ಮೈತ್ರಿಯ ಬಳಿಕ ಹಿಂದುಳಿದ ಜಾತಿಗಳ 5 ಸಮಾವೇಶಗಳನ್ನು ರಾಜ್ಯಾದ್ಯಂತ ಜೆಡಿಎಸ್ ಹಮ್ಮಿಕೊಳ್ಳಲಿದೆ.

ಫೆಬ್ರವರಿ 23 ರಿಂದ 28ರ ತನಕ ವಿವಿಧ ಜಿಲ್ಲೆಗಳಲ್ಲಿ ಸಮಾವೇಶ ನಡೆಯಲಿದೆ. ಶಿವಮೊಗ್ಗ, ಮೈಸೂರು, ಬೆಂಗಳೂರು, ಬೀದರ್ ಮತ್ತು ಬೆಳಗಾವಿಯಲ್ಲಿ ಸಮಾವೇಶಗಳನ್ನು ನಡೆಸಲಾಗುತ್ತದೆ.

ಆನೆ-ತೆನೆಹೊತ್ತ ಮಹಿಳೆ ದೋಸ್ತಿ: ಎಲ್ಲೆಲ್ಲಿ ಬಿಎಸ್ಪಿ ಸ್ಪರ್ಧೆ?

ಪಿ.ಜಿ.ಆರ್.ಸಿಂಧ್ಯಾ, ಎಚ್.ವಿಶ್ವನಾಥ್, ಮಧು ಬಂಗಾರಪ್ಪ, ಬಂಡೆಪ್ಪ ಕಾಶೇಂಪುರ ಅವರ ನೇತೃತ್ವದಲ್ಲಿ ವಿವಿಧ ಜಿಲ್ಲೆಗಳಲ್ಲಿ ಸಮಾವೇಶಗಳು ನಡೆಯಲಿವೆ. ಮೈತ್ರಿ ಬಳಿಕ ಒಬಿಸಿ ಮತಗಳ ಮೇಲೆ ಜೆಡಿಎಸ್ ಕಣ್ಣಿಟ್ಟಿದೆ.

JDS plans 5 OBC rally in Karnataka

ಫೆ.17 ಪಟ್ಟಿ ಬಿಡುಗಡೆ : ಜೆಡಿಎಸ್ ಫೆ.17ರಂದು ಬೆಂಗಳೂರಿನಲ್ಲಿ ಬೃಹತ್ ಸಮಾವೇಶ ಹಮ್ಮಿಕೊಂಡಿದೆ. ಸಮಾವೇಶದಲ್ಲಿ ಬಿಎಸ್‌ಪಿ ನಾಯಕಿ ಮಾಯಾವತಿ ಪಾಲ್ಗೊಳ್ಳಲಿದ್ದಾರೆ.

ಚುನಾವಣಾ ಪೂರ್ವ ಮೈತ್ರಿ: ಬಿಎಸ್ಪಿ-ಜೆಡಿಎಸ್ ಸೀಟು ಹಂಚಿಕೆ ಅಂತಿಮ

ಬೆಂಗಳೂರಿನಲ್ಲಿ ನಡೆಯಲಿರುವ ಸಮಾವೇಶದಲ್ಲಿ ಜೆಡಿಎಸ್‌ನ 130 ಅಭ್ಯರ್ಥಿಗಳ ಪಟ್ಟಿಯನ್ನು ಬಿಡುಗಡೆ ಮಾಡಲಾಗುತ್ತದೆ. ಬಿಎಸ್‌ಪಿ ನಾಯಕಿ ಮಾಯಾವತಿ ಅವರು ಸಮಾವೇಶದಲ್ಲಿ ದಲಿತ ಸಿಎಂ ವಿಚಾರವನ್ನು ಪ್ರಸ್ತಾಪಿಸುವ ಸಾಧ್ಯತೆ ಇದೆ.

ದಲಿತ ಮತಗಳ ಮೇಲೆ ಕಣ್ಣು : ಜೆಡಿಎಸ್‌ ಅಧಿಕಾರಕ್ಕೆ ಬಂದರೆ ಎರಡು ಉಪ ಮುಖ್ಯಮಂತ್ರಿ ಹುದ್ದೆಯನ್ನು ಸೃಷ್ಟಿಸಲಾಗುತ್ತದೆ ಎಂದು ಪಕ್ಷ ಘೋಷಣೆ ಮಾಡಿದೆ. ಒಬ್ಬರು ದಲಿತ ಮತ್ತು ಒಬ್ಬರು ಅಲ್ಪ ಸಂಖ್ಯಾತರನ್ನುಉಪ ಮುಖ್ಯಮಂತ್ರಿ ಮಾಡಲಾಗುತ್ತದೆ ಎಂದು ಪಕ್ಷ ಹೇಳಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Janata Dal (Secular) will organize 5 Other Backward Classes (OBC) in Karnataka. Rallies will be held in Shivamogga, Mysuru, Bengaluru, Bidar and Belagavi districts from February 23 to 28, 2018.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ