50 ಲಕ್ಷ ಸದಸ್ಯರ ನೋಂದಣಿ ಜೆಡಿಎಸ್ ಟಾರ್ಗೆಟ್
ಬೆಂಗಳೂರು, ಜ. 12 : ಬಿಜೆಪಿ ಮತ್ತು ಕಾಂಗ್ರೆಸ್ ಪಕ್ಷಗಳು ಸದಸ್ಯತ್ವ ಅಭಿಯಾನವನ್ನು ರಾಜ್ಯದಲ್ಲಿ ಆರಂಭಿಸಿವೆ. ಜೆಡಿಎಸ್ ಸಹ ಪಕ್ಷವನ್ನು ಗಟ್ಟಿಗೊಳಿಸಲು ಸದಸ್ಯತ್ವ ಅಭಿಯಾನವನ್ನು ಆರಂಭಿಸಲು ಚಿಂತನೆ ನಡೆಸಿದೆ. ಕನಿಷ್ಠ 50 ಲಕ್ಷ ಸದಸ್ಯರನ್ನು ಪಕ್ಷಕ್ಕೆ ಸೇರಿಸಿಕೊಳ್ಳಲು ನಿರ್ಧರಿಸಿದೆ.
ಜನತಾಪರಿವಾರದ ವಿಲೀನದ ಬಗ್ಗೆ ರಾಷ್ಟ್ರಮಟ್ಟದಲ್ಲಿ ಸಿದ್ಧತೆಗಳು ಆರಂಭವಾಗಿದೆ. ಇದನ್ನು ಮುಂದಿಟ್ಟುಕೊಂಡು ರಾಜ್ಯದಲ್ಲಿ ಪಕ್ಷ ಸಂಘಟನೆ ಮಾಡಲು ಜೆಡಿಎಸ್ ನಿರ್ಧರಿಸಿದೆ. ಜ. 24ರಂದು ಬೆಂಗಳೂರಿನ ಅರಮನೆ ಮೈದಾನದಲ್ಲಿ ಜೆಡಿಎಸ್ ಸಮಾವೇಶ ನಡೆಯಲಿದ್ದು, ಸಮಾವೇಶದಲ್ಲಿ ಸದಸ್ಯತ್ವದ ಅಭಿಯಾನವನ್ನು ನಡೆಸುವ ಬಗ್ಗೆ ರೂಪುರೇಷೆ ತಯಾರಿಸಲಾಗುತ್ತದೆ.

ರಾಜ್ಯದಲ್ಲಿ ಕನಿಷ್ಠ 50 ಲಕ್ಷ ಸದಸ್ಯರನ್ನು ನೋಂದಣಿ ಮಾಡಿಕೊಳ್ಳುವ ಗುರಿಯನ್ನು ಜೆಡಿಎಸ್ ಹೊಂದಿದೆ. ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಕನಿಷ್ಠ 15 ರಿಂದ 25 ಸಾವಿರ ಸದಸ್ಯತ್ವ ನೋಂದಣಿ ಮಾಡಿಸಲು ನಾಯಕರಿಗೆ ಟಾರ್ಗೆಟ್ ನೀಡಲು ನಿರ್ಧರಿಸಲಾಗಿದೆ. [ಕರ್ನಾಟಕದಲ್ಲಿ 50 ಲಕ್ಷ ಸದಸ್ಯತ್ವ, ಕಾಂಗ್ರೆಸ್ ಗುರಿ]
ಯುವಕರಿಗೆ ಆದ್ಯತೆ : ಪಕ್ಷದ ಭವಿಷ್ಯದ ದೃಷ್ಟಿಯಿಂದ ಯುವಕರಿಗೆ ಸದಸ್ಯತ್ವ ಅಭಿಯಾನದಲ್ಲಿ ಹೆಚ್ಚು ಆದ್ಯತೆ ನೀಡಲು ನಿರ್ಧರಿಸಲಾಗಿದೆ. ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಪುತ್ರ ನಿಖಿಲ್ ಗೌಡ ಮತ್ತು ಎಚ್.ಡಿ.ರೇವಣ್ಣ ಪುತ್ರ ಪ್ರಜ್ವಲ್ ರೇವಣ್ಣ ಅವರು ಸದಸ್ಯತ್ವ ಅಭಿಯಾನದಲ್ಲಿ ಪಾಲ್ಗೊಂಡು ಯುವಕರನ್ನು ಪಕ್ಷಕ್ಕೆ ಸೆಳೆಯಲಿದ್ದಾರೆ. [1 ಕೋಟಿ ಸದಸ್ಯರ ಸೇರ್ಪಡೆ ಗುರಿ ಬಿಜೆಪಿಗೆ]
ಐಟಿ ಘಟಕಕ್ಕೆ ಜವಾಬ್ದಾರಿ : ಜೆಡಿಎಸ್ ಸದಸ್ಯತ್ವ ಅಭಿಯಾನವನ್ನು ನಡೆಸುವ ಜೊತೆಗೆ ಅಭಿಯಾನದಲ್ಲಿ ಸಂಗ್ರಹಿಸಿದ ಎಲ್ಲಾ ಮಾಹಿತಿಯನ್ನು ಪಕ್ಷದ ಐಟಿ ಘಟಕಕ್ಕೆ ನೀಡಲು ತೀರ್ಮಾನ ಕೈಗೊಂಡಿದೆ. ಸದಸ್ಯರಾದವರ ಮೊಬೈಲ್ ನಂಬರ್, ಈ ಮೇಲ್ ಐಡಿ ಮುಂತಾದವುಗಳನ್ನು ಸಂಗ್ರಹಿಸಲಾಗುತ್ತದೆ. [ಬೆಂಗಳೂರಿನ ಜೆಡಿಎಸ್ ಕಚೇರಿ ವಿವಾದವೇನು?]
ಪಕ್ಷದ ಚಟುವಟಿಕೆಗಳ ಬಗ್ಗೆ ಕಾಲಕಾಲಕ್ಕೆ ಮಾಹಿತಿಯನ್ನು ಸದಸ್ಯರಾದವರಿಗೆ ಎಸ್‌ಎಂಎಸ್ ಮತ್ತು ಈ ಮೇಲ್ ಮೂಲಕ ತಿಳಿಸಲು ಪಕ್ಷ ಮುಂದಾಗಿದೆ. ಸದಸ್ಯತ್ವ ಅಭಿಯಾನದ ಪೂರ್ಣ ರೂಪುರೇಷೆ 24ರ ನಂತರ ಹೊರಬೀಳಲಿದೆ.
ಬಿಜೆಪಿ, ಕಾಂಗ್ರೆಸ್‌ನಿಂದ ಸದಸ್ಯತ್ವ ಆರಂಭ : ಬಿಜೆಪಿ ರಾಷ್ಟ್ರೀಯ ಅಧ್ಯಕ್ಷ ಅಮಿತ್ ಶಾ ಬೆಂಗಳೂರಿಗೆ ಆಗಮಿಸಿ ಪಕ್ಷದ ಸದಸ್ಯತ್ವ ಅಭಿಯಾನಕ್ಕೆ ಚಾಲನೆ ನೀಡಿದ್ದು, 1 ಕೋಟಿ ಸದಸ್ಯರನ್ನು ಸೇರಿಸಿಕೊಳ್ಳಬೇಕು ಎಂದು ರಾಜ್ಯ ಬಿಜೆಪಿ ನಾಯಕರಿಗೆ ಟಾರ್ಗೆಟ್ ನೀಡಿದ್ದಾರೆ.
ಇತ್ತ ಕಾಂಗ್ರೆಸ್ ಪಕ್ಷ ನಡೆಸುತ್ತಿದ್ದ ಸದಸ್ಯತ್ವ ಅಭಿಯಾನ ಡಿಸೆಂಬರ್‌ಗೆ ಅಂತ್ಯಗೊಳ್ಳಬೇಕಿತ್ತು. ಆದರೆ, ಅದನ್ನು ಅದನ್ನು ಫೆಬ್ರವರಿ 15ರವರೆಗೆ ವಿಸ್ತರಣೆ ಮಾಡಲಾಗಿದ್ದು, 50 ಲಕ್ಷ ಸದಸ್ಯರನ್ನು ಸೇರಿಸಿಕೊಳ್ಳುವ ಗುರಿಯನ್ನು ಪಕ್ಷ ಹೊಂದಿದೆ.












Click it and Unblock the Notifications