ಪಂಚಾಯಿತಿ ಫೈಟ್ : ಜೆಡಿಎಸ್ ಹಿನ್ನಡೆಗೆ ಕಾರಣ ಬಹಿರಂಗ!

By: ಮೈಸೂರು ಪ್ರತಿನಿಧಿ
Subscribe to Oneindia Kannada

ಮಂಡ್ಯ, ಫೆಬ್ರವರಿ 25 : 'ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯಲ್ಲಿ ಜೆಡಿಎಸ್ ಪಕ್ಷದ ಹಿನ್ನಡೆಗೆ ಪಕ್ಷದ ನಾಯಕರ ಆಂತರಿಕ ಭಿನ್ನಾಭಿಪ್ರಾಯವೇ ಕಾರಣ' ಎಂದು ಶಾಸಕ ಚೆಲುವರಾಯಸ್ವಾಮಿ ದೂರಿದ್ದಾರೆ. 30 ಜಿಲ್ಲಾ ಪಂಚಾಯಿತಿಗಳ ಪೈಕಿ 2 ಸ್ಥಾನಗಳಲ್ಲಿ ಮಾತ್ರ ಜೆಡಿಎಸ್ ಜಯಗಳಿಸಿದೆ.

ಮಂಡ್ಯದಲ್ಲಿ ಬುಧವಾರ ಮಾತನಾಡಿದ ನಾಗಮಂಗಲ ಶಾಸಕ ಚೆಲುವರಾಯಸ್ವಾಮಿ ಅವರು, 'ಪಕ್ಷದೊಳಗಿನ ಆಂತರಿಕ ಭಿನ್ನಾಭಿಪ್ರಾಯ ಹಾಗೂ ನಾಯಕರ ನಡುವಳಿಕೆಗಳಿಂದಲೇ ರಾಜ್ಯದಲ್ಲಿ ಜೆಡಿಎಸ್ ಪಕ್ಷಕ್ಕೆ ಹಿನ್ನಡೆಯಾಗಿದೆ ಎಂದು ಅಸಮಾಧಾನ ವ್ಯಕ್ತಪಡಿಸಿದರು. ['ಪರಿಷತ್ ಚುನಾವಣೆ ಸೋಲಿನ ಹೊಣೆ ಹೊರುವುದಿಲ್ಲ']

cheluvarayaswamy

'2011ರ ಚುನಾವಣೆಯಲ್ಲಿ ನಾಲ್ಕು ಜಿಲ್ಲೆಗಳಲ್ಲಿ ಪಕ್ಷ ಅಧಿಕಾರಕ್ಕೆ ಬಂದಿತ್ತು. ಈ ಬಾರಿ 2 ಜಿಲ್ಲೆಗಳಲ್ಲಿ ಮಾತ್ರ ಅಧಿಕಾರಕ್ಕೆ ಬಂದಿದೆ. ಇದಕ್ಕೆ ಪಕ್ಷದಲ್ಲಿನ ನಾಯಕರು ತೆಗೆದುಕೊಳ್ಳುವ ಗೊಂದಲದ ನಿರ್ಧಾರ ಹಾಗೂ ವ್ಯತಿರಿಕ್ತ ಹೇಳಿಕೆಗಳೇ ಕಾರಣ' ಎಂದು ದೂರಿದರು.[ದೇವೇಗೌಡ, ಎಚ್ಡಿಕೆಗೆ ಇಕ್ಬಾಲ್ ಅನ್ಸಾರಿ ಬಹಿರಂಗ ಸವಾಲು!]

'ಹಾಸನ ಮತ್ತು ಮಂಡ್ಯ ಜಿಲ್ಲೆ ಹೊರತು ಪಡಿಸಿ ತುಮಕೂರು, ಕೋಲಾರ, ರಾಮನಗರ ಮತ್ತು ಮೈಸೂರು ಜಿಲ್ಲೆಗಳಲ್ಲಿ ಪಕ್ಷಕ್ಕೆ ಹಿನ್ನಡೆಯಾಗಿದೆ. ಮಂಡ್ಯ ಜಿಲ್ಲೆಯ ಮತದಾರರು ಕಳೆದ ಬಾರಿಗಿಂತ ಈ ಬಾರಿ ಇನ್ನೂ ಎರಡು ಹೆಚ್ಚು ಸ್ಥಾನವನ್ನು ನೀಡಿ, ಶಕ್ತಿ ತುಂಬುವ ಮೂಲಕ ನಮ್ಮ ಜವಾಬ್ದಾರಿಯನ್ನು ಹೆಚ್ಚಿಸಿದ್ದಾರೆ' ಎಂದರು. [30 ಜಿಲ್ಲೆಗಳ ಪಂಚಾಯ್ತಿ ಫಲಿತಾಂಶ ಸಂಪೂರ್ಣ ವಿವರ]

ಅಂದಹಾಗೆ ಮಂಡ್ಯ ಜಿಲ್ಲಾ ಪಂಚಾಯಿತಿಯ 41 ಸ್ಥಾನಗಳ ಪೈಕಿ ಜೆಡಿಎಸ್ 27ರಲ್ಲಿ ಜಯಗಳಿಸಿದೆ. ಕಾಂಗ್ರೆಸ್ 13 ಮತ್ತು ಪಕ್ಷೇತರ ಅಭ್ಯರ್ಥಿ 1 ಸ್ಥಾನದಲ್ಲಿ ಜಯಗಳಿಸಿದ್ದಾರೆ. ಜಿಲ್ಲೆಯ 7 ತಾಲೂಕು ಪಂಚಾಯಿತಿಗಳ ಪೈಕಿ ಜೆಡಿಎಸ್ 5ರಲ್ಲಿ ಜಯಗಳಿಸಿದೆ. ಕಾಂಗ್ರೆಸ್ ಒಂದು ಸ್ಥಾನಗಳಿಸಿದ್ದರೆ, ಮತ್ತೊಂದರಲ್ಲಿ ಅತಂತ್ರ ಫಲಿತಾಂಶ ಬಂದಿದೆ. [ತಾ.ಪಂ ಫಲಿತಾಂಶ : ಯಾವ ಜಿಲ್ಲೆಯಲ್ಲಿ ಯಾರಿಗೆ ಗೆಲುವು?]

ಜಿಲ್ಲಾ ಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣಾ ಪ್ರಚಾರದ ವೇಳೆ ಚೆಲುವರಾಯಸ್ವಾಮಿ ಅವರು, ಪಕ್ಷದ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರೊಂದಿಗೆ ಕಾಣಿಸಿಕೊಳ್ಳದೆ ತಟಸ್ಥವಾಗಿದ್ದರು.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
Nagamangala MLA N.Cheluvarayaswamy said, JDS top leaders internal clash impact the poor performance of the party in Zilla and Taluk panchayat election 2016.
Please Wait while comments are loading...