"ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ" ಜೆಡಿಎಸ್ ನೂತನ ಅಭಿಯಾನ

ಬೆಂಗಳೂರು, ಏಪ್ರಿಲ್‌ 09: ಬೆಲೆ ಏರಿಕೆ ಖಂಡಿಸಿ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ನೂತನ ಅಭಿಯಾನವನ್ನು ಇಂದು ನಿಖಿಲ್ ಕುಮಾರಸ್ವಾಮಿ ಅವರ ನೇತೃತ್ವದಲ್ಲಿ https://www.saakappasaaku.com ನೂತನ ವೆಬ್ಸೈಟ್ ನನ್ನ ಅವರು ಬಿಡುಗಡೆ ಮಾಡಿದರು.ಬೆಂಗಳೂರಿನ ಜೆಡಿಎಸ್ ರಾಜ್ಯ ಕಚೇರಿಯಲ್ಲಿ ಮಾಧ್ಯಮಗೋಷ್ಠಿಯನ್ನು ಉದ್ದೇಶಿಸಿ ಮಾತನಾಡಿದ ಅವರು, ರಾಜ್ಯ ಸರ್ಕಾರ ಆಡಳಿತಕ್ಕೆ ಬಂದಾಗಿನಿಂದಲೂ ಜನರ ಮೇಲೆ ಬೆಲೆ ಏರಿಕೆ ಬರೆ ಹಾಕ್ತಿದ್ದಾರೆ. ನಾಡಿನ ಜನ ಸಂಕಷ್ಟದ ದಿನಗಳನ್ನು ಎದುರಿಸುವ ಹಂತಕ್ಕೆ ಈ ಸರ್ಕಾರ ದೂಡಿದೆ. ಇದರ ವಿರುದ್ಧ ನಮ್ಮ ಹೋರಾಟ ಶುರು ಮಾಡಿದ್ದೇವೆ ಬೆಳಿಗ್ಗೆಯಿಂದ ನಮ್ಮ ಕಾರ್ಯಕರ್ತರು, ಸಾಕಪ್ಪಾ ಸಾಕು ಕಾಂಗ್ರೆಸ್ ಸರ್ಕಾರ ಸಾಕು ಎಂಬ ಅಭಿಯಾನ ಶುರುಮಾಡಿದ್ದಾರೆ ಎಂದು ತಿಳಿಸಿದರು.

ಶನಿವಾರ ಫ್ರೀಡಂ ಪಾರ್ಕ್‌ನಲ್ಲಿ ದೊಡ್ಡ ಹೋರಾಟ ‌ಇರಲಿದೆ ಕುಮಾರಣ್ಣ ಅವರ ನೇತೃತ್ವದಲ್ಲಿ ಅಭಿಯಾನದ ಮೂಲಕ ‌ಪ್ರತಿಭಟನೆ ಮಾಡ್ತೀವಿ.ಕುಮಾರಣ್ಣ ಅವರು ಪ್ರತಿಭಟನೆಯಲ್ಲಿ ಭಾಗಿಯಾಗ್ತಾರೆ.ನಿರಂತರವಾಗಿ ಈ ಅಭಿಯಾನವನ್ನ ಜೆಡಿಎಸ್ ಮಾಡುತ್ತೆ ಎಂದು ತಿಳಿಸಿದರು. ರಾಜ್ಯ ಸರ್ಕಾರ ಕಳೆದ ಎರಡು ವರ್ಷಗಳಿಂದ ಇಲ್ಲಿವರೆಗೂ ನಿರಂತರವಾಗಿ ಬೆಲೆ ಏರಿಕೆ ಮಾಡುತ್ತಿದೆ. ಹಂತ ಹಂತವಾಗಿ ಯಾವುದಾದರು ಒಂದು ರೀತಿ ಜನರ ಮೇಲೆ ಬೆಲೆ ಏರಿಕೆ ಮಾಡಿದೆ. ನಾಡಿನ ಜನರಿಗೆ ಸಂಕಷ್ಟದ ದಿನ ಎದುರಿಸಲು ಸರ್ಕಾರ ದೂಡಿದೆ. ಈ ಹಿನ್ನಲೆಯಲ್ಲಿ ದೊಡ್ಡ ಚರ್ಚೆಗಳು ರಾಜ್ಯದಲ್ಲಿ ಆಗ್ತಿದೆ. ಜೆಡಿಎಸ್ ಪಕ್ಷ ಕೂಡಾ ಪ್ರತಿಯೊಬ್ಬ ಕನ್ನಡರ ಭಾವನೆ ಹೊರಗೆ ಹಾಕೋ ಕೆಲಸ ಮಾಡ್ತಿದೆ ಎಂದು ತಿಳಿಸಿದರು.

jds poster campaign against state congress govt condemning price hike

ಇಂದು ಬೆಳಗ್ಗೆಯಿಂದ ನಮ್ಮ ಕಾರ್ಯಕರ್ತರು ಕುಮಾರಣ್ಣನ ಅವರ ಸಲಹೆ ಮತ್ತು ಸೂಚನೆ ಪಡೆದುಕೊಂಡು ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಅಭಿಯಾನ ಇವತ್ತಿಂದ ಪ್ರಾರಂಭ ಮಾಡಿದ್ದೇವೆ. ಏಳೂವರೆ ಕೋಟಿ ಜನರ ಭಾವನೆ ಸಾಕಪ್ಪ ಸಾಕು ಅಂತ ಇದೆ ಎಂದು ತಿಳಿಸಿದರು. ಈ ಸರ್ಕಾರದ ವೈಫಲ್ಯತೆ, ಭ್ರಷ್ಟಾಚಾರ ಜಾಸ್ತಿ ಆಗಿದೆ. ಸಿಎಂ ಅವರ ಆರ್ಥಿಕ ಸಲಹೆಗಾರರೇ ಭ್ರಷ್ಟಾಚಾರದಲ್ಲಿ ಕರ್ನಾಟಕ ನಂಬರ್ 1 ಅಂತ ಹೇಳಿಕೆ ಕೊಟ್ಟಿದ್ದಾರೆ. ರಾಯರೆಡ್ಡಿ ಅವರಿಗೆ ಧನ್ಯವಾದ ಹೇಳ್ತೀನಿ. ಇಷ್ಟು ಮುಕ್ತವಾಗಿ ಆಡಳಿತ ಪಕ್ಷದ ಶಾಸಕರು, ಆರ್ಥಿಕ ಸಲಹೆಗಾರರು ಭ್ರಷ್ಟಾಚಾರದ ಬಗ್ಗೆ ಮಾತಾಡಿದ್ದಾರೆ‌. ಈ ಹಿಂದೆಯೂ ಕೂಡಾ ರಾಯರೆಡ್ಡಿ ಅವರು ಗ್ಯಾರಂಟಿ ಹೇಗೆ ಅಭಿವೃದ್ಧಿ ‌ಮೇಲೆ ಪರಿಣಾಮ ಬಿದ್ದಿದೆ ಅಂತ ಹೇಳಿದ್ರು.ರಾಜ್ಯ ಸರ್ಕಾರ ಹೇಗೆ ಆಡಳಿತ ಮಾಡ್ತಿದೆ ಅನ್ನೊದಕ್ಕೆ ಅನೇಕ ವೈಫಲ್ಯಗಳು ನಮ್ಮ ಮುಂದೆ ಇದೆ ನಮ್ಮ ಹೋರಾಟ ನಿರಂತರವಾಗಿರುತ್ತೆ ಎಂದರು.

ಇಂದಿನಿಂದ ಸಾಕಪ್ಪ ಸಾಕು ಕಾಂಗ್ರೆಸ್ ಸರ್ಕಾರ ಸಾಕು ವೆಬ್ ಸೈಟ್ ಪ್ರಾರಂಭ ಮಾಡಿದ್ದೇವೆ. ಈ ವೆಬ್ ಸೈಟ್ ನಲ್ಲಿ ಸರ್ಕಾರ ಶಾಸಕರು, ಮಂತ್ರಿಗಳು ಹಿಂದೆ ಏನೇನು ಮಾತಾಡಿದ್ರು ಅದನ್ನ ಹಾಕಲಾಗಿದೆ. ಇದು ಒಂದು ದಿನದ ಅಭಿಯಾನ ಅಲ್ಲ.ಈ ಸರ್ಕಾರದಲ್ಲಿ ಸಚಿವರ ಹನಿಟ್ರ್ಯಾಪ್ ಮಾಡಿದ್ದಾರೆ, ಹೈಕಮಾಂಡ್ ಗೆ ಮನಿಟ್ರ್ಯಾಪ್ ಮಾಡಿದ್ದಾರೆ, ಕನ್ನಡಿಗರ ಮೇಕೆ ತೆರಿಗೆ ಟ್ರ್ಯಾಪ್ ಮಾಡಿದ್ದಾರೆ ಅಂತ ವೆಬ್ ಸೈಟ್ ನಲ್ಲಿ ಹೇಳಿದ್ದೇವೆ.ಎಂದು ಅವರು ತಿಳಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+