ಎಚ್ ಡಿಕೆ ಆರೋಗ್ಯದಲ್ಲಿ ಏರುಪೇರು, ಸಿಂಗಾಪುರದಲ್ಲಿ ಚಿಕಿತ್ಸೆ

Posted By:
Subscribe to Oneindia Kannada

ಬೆಂಗಳೂರು, ಆಗಸ್ಟ್ 11 : ಜೆಡಿಎಸ್‌ ರಾಜ್ಯಾಧ್ಯಕ್ಷ ಎಚ್‌.ಡಿ.ಕುಮಾರಸ್ವಾಮಿ ಅವರ ಆರೋಗ್ಯದಲ್ಲಿ ಏರುಪೇರು ಆಗಿರುವುದರಿಂದ ಸಿಂಗಾಪುರದ ಮೌಂಟ್‌ ಎಲಿಜಬೆತ್‌ ಆಸ್ಪತ್ರೆಗೆ ದಾಖಲಾಗಿದ್ದಾರೆ ಎಂದು ವರದಿಯಾಗಿದೆ.

ಜಂತಕಲ್ ಮೈನಿಂಗ್, ಕುಮಾರಸ್ವಾಮಿಗೆ ನಿರೀಕ್ಷಣಾ ಜಾಮೀನು

ಕೆಮ್ಮು ಮತ್ತು ಕಫ‌ದ ಸಮಸ್ಯೆಯಿಂದ ಬಳಲುತ್ತಿದ್ದ ಅವರು ಧರ್ಮಸ್ಥಳದ ಉಜಿರೆಯಲ್ಲಿ ಪ್ರಕೃತಿ ಚಿಕಿತ್ಸೆ ಪಡೆಯುತ್ತಿದ್ದರು. ಆದರೂ ನಿಯಂತ್ರಣಕ್ಕೆ ಬಾರದ ಹಿನ್ನಲೆಯಲ್ಲಿ ಗುರುವಾರ ಸಿಂಗಾಪುರಕ್ಕೆ ತೆರಳಿದ್ದಾರೆ ಎಂದು ಹೇಳಲಾಗುತ್ತಿದೆ.

JDS president HD Kumaraswamy admitted in mount Elizabeth hospital at Singapore

ಉತ್ತರ ಕರ್ನಾಟಕ ಪ್ರವಾಸದಲ್ಲಿದ್ದ ಎಚ್ ಡಿಕೆ ವಿಶ್ರಾಂತಿ ಇಲ್ಲದೆ ಸತತ ಸಮಾವೇಶಗಳಲ್ಲಿ ಪಾಲ್ಗೊಂಡಿದ್ದರಿಂದ ಅಲರ್ಜಿಯಾಗಿ ಕೆಮ್ಮು ಮತ್ತು ಕಫ‌ ಸಮಸ್ಯೆ ಕಾಣಿಸಿಕೊಂಡಿದೆ ಎನ್ನಲಾಗಿದೆ.

,ಮೈಸೂರು ವಿವಿ ಮಾಜಿ ಕುಲಪತಿ ರಂಗಪ್ಪ ಅವರು ಕುಮಾರ ಸ್ವಾಮಿ ಅವರೊಂದಿಗೆ ಸಿಂಗಾಪುರಕ್ಕೆ ತೆರಳಿದ್ದು, ಭಾನುವಾರ ವಾಪಸ್ಸಾಗುವ ಸಾಧ್ಯತೆಗಳಿವೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ - ನೋಂದಣಿ ಉಚಿತ!

English summary
Karnataka JDS president HD Kumaraswamy has been admitted to Mount Elizabeth Hospital in Singapore.
Please Wait while comments are loading...