ಸ್ಮಾರ್ಟ್ ಮೀಟರ್ ಹಗರಣ: ಕೆ ಜೆ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿದ ಜೆಡಿಎಸ್ ಪ್ರತಿಭಟನೆ
ಬೆಂಗಳೂರು, ಮಾರ್ಚ್27 ರಾಜ್ಯ ಕಾಂಗ್ರೆಸ್ ಸರ್ಕಾರ "ಸ್ಮಾರ್ಟ್ ಮೀಟರ್" ಹೆಸರಲ್ಲಿ 15 ಸಾವಿರ ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆಸಿದೆ. KTTP ಕಾಯ್ದೆಯನ್ನು ಉಲ್ಲಂಘಿಸಿ, ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ಪ್ರಕ್ರಿಯೆ ನಡೆಸಿ ಸಾವಿರಾರು ಕೋಟಿ ಲೂಟಿ ಮಾಡಿದೆ ಎಂದು ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಡಿ ಜೆಡಿಎಸ್ ಮುಖಂಡರು ಹಾಗೂ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.
ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ ಬೃಹತ್ ಹಗರಣ ಹಾಗೂ ಸಚಿವ ಕೆ.ಎ ಜಾರ್ಜ್ ರಾಜೀನಾಮೆಗೆ ಆಗ್ರಹಿಸಿ ಇಂದು ಪ್ರತಿಭಟನೆ ನಡೆಸಿದ ಜೆಡಿಎಸ್ ಕಾರ್ಯಕರ್ತರು ಇಂಧನ ಸಚಿವ ಕೆ ಜೆ ಜಾರ್ಜ್ ಮನೆ ಮುತ್ತಿಗೆ ಹಾಕಲು ಮುಂದಾಗಿದ್ದರು. ಸ್ಮಾರ್ಟ್ ಮೀಟರ್ ಹಗರಣದಲ್ಲಿ 15 ಸಾವಿರ ಕೋಟಿ ಹಣ ಭ್ರಷ್ಟಾಷಾರ ನಡೆದಿದೆ. ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್‌ನಲ್ಲಿ ಬೃಹತ್ ಹಗರಣ ಹಿನ್ನೆಲೆ ಸಚಿವ ಕೆ.ಎ ಜಾರ್ಜ್ ರಾಜೀನಾಮೆ ನೀಡಬೇಕು ಎಂದು ಜೆಡಿಎಸ್ ಕಾರ್ಯಕರ್ತರು ಆಗ್ರಹಿಸಿದರು.

ರೇಸ್ ಕೋರ್ಸ್ ರಸ್ತೆಯ ಸಚಿವ ಜಾರ್ಜ್ ಸರ್ಕಾರಿ ನಿವಾಸದ ಬಳಿ ಪೊಲೀಸ್ ಹೆಚ್ಚುವರಿ ಭದ್ರತೆ ಕಲ್ಪಿಸಿದ್ದು, ಸ್ಮಾರ್ಟ್ ಮೀಟರ್ ಖರೀದಿ ಟೆಂಡರ್ ಹಗರಣದ ಕುರಿತು ಕೆ ಜೆ ಜಾರ್ಜ್ ಅವರ ಮನೆ ಮುತ್ತಿಗೆಗೆ ಜೆಡಿಎಸ್ ಕಾರ್ಯಕರ್ತರು ಮುಂದಾಗಿದ್ದು, ಈ ವೇಳೆ ಮುತ್ತಿಗೆಗೆ ಮುಂದಾಗಿದ್ದ ಜೆಡಿಎಸ್ ಕಾರ್ಯಕರ್ತರು, ಮುಖಂಡರನ್ನ ರಸ್ತೆ ಮಧ್ಯದಲ್ಲೇ ಪೊಲೀಸರು ತಡೆದು, ಪ್ರತಿಭಟನಕಾರರನ್ನ ವಶಕ್ಕೆ ಪಡೆದರು.
ಈ ವೇಳೆ ಜೆಡಿಎಸ್ ನಗರ ಘಟಕ ಮುಖಂಡ ಪ್ರವೀಣ್ ಅವರು ಮಾತನಾಡಿ, ರಾಜ್ಯ ಸರ್ಕಾರ ಗ್ಯಾರಂಟಿಗಳನ್ನು ನೀಡಿ ದರೋಡೆಗೆ ಇಳಿದಿದೆ. ಸ್ಮಾರ್ಟ್ ಮೀಟರ್ ವಿಚಾರವಾಗಿ ಜನರ ತೆರಿಗೆ ದುಡ್ಡನ್ನು ಲೂಟಿ ಹೊಡೆಯುವ ಕೆಲಸಕ್ಕೆ ಸರ್ಕಾರ ಮುಂದಾಗಿದೆ. ಇದರ ತನಿಖೆ ಆಗಿ ಸತ್ಯಾಂಶ ಹೊರಬರ್ಬೇಕು. ಪ್ರತಿಭಟನೆ ಮಾಡ್ತಿದ್ದಂತೆ ವಶಕ್ಕೆ ಪಡೆದಿದ್ದಾರೆ ಇದು ಸರಿಯಲ್ಲ ಎಂದು ಆಕ್ರೋಶ ವ್ಯಕ್ತಪಡಿಸಿದರು. "ಸ್ಮಾರ್ಟ್ ಮೀಟರ್" ಹೆಸರಲ್ಲಿ 15 ಸಾವಿರ ಕೋಟಿಗೂ ಹಣವನ್ನ ತಿಂದು ಹಾಕುವ ಕೆಲಸ ಮಾಡುತ್ತಿದ್ದಾರೆ. 15 ಸಾವಿರ ಕೋಟಿ ಹಗರಣ ನಡೆದಿದೆ ಎಂದು ಆರೋಪಿಸಿದರು.
15 ಸಾವಿರ ಕೋಟಿಗೂ ಹೆಚ್ಚು ಭ್ರಷ್ಟಾಚಾರ: ನಿಖಿಲ್
ಜೆಡಿಎಸ್ ಯುವ ಘಟಕದ ರಾಜ್ಯಾಧ್ಯಕ್ಷರಾದ ನಿಖಿಲ್ ಕುಮಾರಸ್ವಾಮಿ ಅವರು ಮಾತನಾಡಿ, ರಾಜ್ಯ ಕಾಂಗ್ರೆಸ್ ಸರ್ಕಾರ "ಸ್ಮಾರ್ಟ್ ಮೀಟರ್" ಹೆಸರಲ್ಲಿ 15 ಸಾವಿರ ಕೋಟಿಗೂ ಹೆಚ್ಚು ಭ್ರಷ್ಟಾಚಾರ ನಡೆಸಿದೆ. KTTP ಕಾಯ್ದೆಯನ್ನು ಉಲ್ಲಂಘಿಸಿ, ನಿಯಮಗಳನ್ನು ಗಾಳಿಗೆ ತೂರಿ ಟೆಂಡರ್ ಪ್ರಕ್ರಿಯೆ ನಡೆಸಿ ಸಾವಿರಾರು ಕೋಟಿ ಲೂಟಿ ಮಾಡಿದ್ದಾರೆ ಎಂದು ಆರೋಪಿಸಿದರು.
ಸ್ಮಾರ್ಟ್ ಮೀಟರ್ ಹಗರಣ ದಿಂದ ರಾಜ್ಯದ ಪ್ರತಿಯೊಬ್ಬ ಗ್ರಾಹಕನ ಮೇಲೆ ₹8,520 ರೂ ಹೊರೆ ಬೀಳಲಿದೆ. ಸ್ಮಾರ್ಟ್ ಮೀಟರ್ ಟೆಂಡರ್ ಪ್ರಕ್ರಿಯೆ ರದ್ದು ಮಾಡಿ, ಪಾರದರ್ಶಕವಾಗಿ ಮರು ಟೆಂಡರ್ ನಡೆಸಬೇಕು. ರಾಜ್ಯದಲ್ಲಿ ಸರ್ಕಾರ ಅಧಿಕಾರಕ್ಕೆ ಬಂದು ವರ್ಷಗಳಾಗುತ್ತಾ ಬಂತು. ಕಾಂಗ್ರೆಸ್ ಅಧಿಕಾರಕ್ಕೆ ಬಂದಾಗಿನಿಂದ ದೊಡ್ಡ ದೊಡ್ಡ ಹಗರಣಗಳು ಬಯಲಿಗೆ ಬರುತ್ತಿದೆ. ಜನ ಇದನ್ನ ನಿರೀಕ್ಷೆ ಮಾಡಿರಲಿಲ್ಲ. ಸರ್ಕಾರದಲ್ಲಿ ಸ್ಮಾರ್ಟ್ ಮೀಟರ್ ಹಗರಣ ನಡೆದಿದೆ. ಇದರ ಟೆಂಡರ್ ಪ್ರಕ್ರಿಯೆ ಸರಿಯಾಗಿ ಆಗಿಲ್ಲ. ಸದನದಲ್ಲೂ ಈ ಹಗರಣ ಬಗ್ಗೆ ಪ್ರಸ್ತಾಪ ಆಗಿದೆ. ಹಲವಾರು ರಾಜ್ಯಗಳು ಸ್ಮಾರ್ಟ್ ಮೀಟರ್ ಅಳವಡಿಕೆ ಮಾಡಿವೆ ಎಂದು ತಿಳಿಸಿದರು.












Click it and Unblock the Notifications