ಡಿಸೆಂಬರ್‌ನಲ್ಲಿ ಜೆಡಿಎಸ್ ಬಂಡಾಯ ಶಾಸಕರು ಕಾಂಗ್ರೆಸ್ ಸೇರ್ಪಡೆ

Posted By: Gururaj
Subscribe to Oneindia Kannada

ಬೆಂಗಳೂರು, ಆ, 11 : ಜೆಡಿಎಸ್ ಪಕ್ಷದ ಏಳು ರೆಬೆಲ್ ಶಾಸಕರು ಕಾಂಗ್ರೆಸ್ ಸೇರುವುದು ನಿಶ್ಚಿತವಾಗಿದೆ. ಡಿಸೆಂಬರ್ ತಿಂಗಳಿನಲ್ಲಿ ಎಲ್ಲಾ ಶಾಸಕರು ಕಾಂಗ್ರೆಸ್ ಸೇರಲಿದ್ದಾರೆ.

ಡಿಕೆಶಿ ಅಕ್ಕ-ಪಕ್ಕ ಕಾಣಿಸಿಕೊಳ್ಳುತ್ತಿರುವ ಜೆಡಿಎಸ್ ರೆಬೆಲ್ ಶಾಸಕರು

ಶುಕ್ರವಾರ ಬೆಂಗಳೂರಿನಲ್ಲಿ ಮಾತನಾಡಿದ ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್, 'ಎಲ್ಲರೂ ಕಾಂಗ್ರೆಸ್ ಸೇರುತ್ತೇವೆ. ಡಿಸೆಂಬರ್ ಮೊದಲ ವಾರದಲ್ಲಿ ಸಮಾವೇಶ ನಡೆಸಿ ಪಕ್ಷ ಸೇರಲಿದ್ದೇವೆ' ಎಂದು ಹೇಳಿದರು.

JDS rebel MLA's will join Congress says B.Z.Zameer Ahmed Khan

'ಕಾಂಗ್ರೆಸ್ ಪಕ್ಷ ಸೇರುವ ಮುನ್ನ ದೆಹಲಿಗೆ ಹೋಗಿ ಹೈಕಮಾಂಡ್ ನಾಯಕರನ್ನು ಭೇಟಿಯಾಗಿ ಬರುತ್ತೇವೆ. ನಂತರ ಬೆಂಗಳೂರಿನಲ್ಲಿ ಸಮಾವೇಶ ನಡೆಸಿ ಪಕ್ಷ ಸೇರಲಿದ್ದೇವೆ' ಎಂದರು.

ಜೆಡಿಎಸ್ ನಾಯಕರಿಗೆ ಜಮೀರ್ ನೀಡಿದ ಸಲಹೆ ಏನು?

ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಮತ ಹಾಕಿದ ಎಂಟು ಶಾಸಕರನ್ನು ಜೆಡಿಎಸ್ ಅಮಾನತುಗೊಳಿದೆ. ಇವರಲ್ಲಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯರನ್ನು ಪಕ್ಷಕ್ಕೆ ವಾಪಸ್ ಸೇರಿಸಿಕೊಳ್ಳಲಾಗಿದ್ದು, ಏಳು ಶಾಸಕರು ಉಳಿದುಕೊಂಡಿದ್ದಾರೆ.

'ನಾನು ಅವರಿಗೆ ಹಣ ಕೊಟ್ಟು ಸಾಕುವಷ್ಟು ಶ್ರೀಮಂತನಲ್ಲ'

ರೆಬೆಲ್ ಶಾಸಕರು ಎಸ್‌ಸಿಪಿ ಸೇರಲಿದ್ದಾರೆ, ಸಮಾಜವಾದಿ ಪಕ್ಷ ಸೇರಲಿದ್ದಾರೆ ಎಂಬ ಸುದ್ದಿ ಹಬ್ಬಿತ್ತು. ಆದರೆ, ರಾಷ್ಟ್ರ ರಾಜಕಾರಣದಲ್ಲಿ ದೇವೇಗೌಡರ ಮಿತ್ರ ಬಳಗ ದೊಡ್ಡದಿರುವುದರಿಂದ ಯಾವ ಪಕ್ಷಗಳು ಶಾಸಕರನ್ನು ಸೇರಿಸಿಕೊಂಡಿಲ್ಲ.

ಯಾವ-ಯಾವ ಶಾಸಕರು : ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ) ಜೆಡಿಎಸ್ ನಿಂದ ಅಮಾನತುಗೊಂಡವರು.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Chamarajpet JDS MLA B.Z.Zameer Ahmed Khan said, 7 JDS MLA 's will join Congress on December 2017. Karnataka JDS suspended 7 rebel MLAs for Cracking the whip and voted against its official candidate and supported Congress in the Rajya Sabha election.
Please Wait while comments are loading...