ಎಸ್.ಎಂ.ಕೃಷ್ಣ ಭೇಟಿ ಮಾಡಿದ ಜೆಡಿಎಸ್ ಬಂಡಾಯ ಶಾಸಕರು!
Recommended Video

ಬೆಂಗಳೂರು, ಫೆಬ್ರವರಿ 02 : ಜೆಡಿಎಸ್ ಪಕ್ಷದಿಂದ ಅಮಾನತುಗೊಂಡಿರುವ 7 ಶಾಸಕರು ಬಿಜೆಪಿ ಸೇರಲಿದ್ದಾರೆಯೇ?. ಬಂಡಾಯ ಶಾಸಕರು ಎಸ್.ಎಂ.ಕೃಷ್ಣ ಭೇಟಿ ಮಾಡಿರುವ ಚಿತ್ರ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿವೆ.
ಜೆಡಿಎಸ್‌ನ ಬಂಡಾಯ ಶಾಸಕರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಅವರ ಜೊತೆ ಸಂಪರ್ಕದಲ್ಲಿದ್ದಾರೆ. 'ರಾಜ್ಯಸಭೆ ಚುನಾವಣೆಯಲ್ಲಿ ನಮ್ಮನ್ನು ಬೆಂಬಲಿಸಿದ ಎಲ್ಲಾ ಶಾಸಕರು ನಮ್ಮ ಜೊತೆಯೇ ಇದ್ದಾರೆ. ಅವರು ಪಕ್ಷ ಸೇರಲಿದ್ದಾರೆ' ಎಂದು ಅವರು ಹಲವು ಬಾರಿ ಡಿ.ಕೆ.ಶಿವಕುಮಾರ್ ಹೇಳಿದ್ದಾರೆ.
ಆದರೆ, ಬಂಡಾಯ ಶಾಸಕರು ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಅವರನ್ನು ಭೇಟಿ ಮಾಡಿರುವ ಚಿತ್ರಗಳು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿವೆ. ಶಾಸಕರು ಎಂದು ಕೃಷ್ಣ ಅವರನ್ನು ಭೇಟಿ ಮಾಡಿದ್ದಾರೆ ಎಂದು ತಿಳಿದಿಲ್ಲ, ಚಿತ್ರಗಳು ಮಾತ್ರ ವೈರಲ್ ಆಗಿದೆ. ಶಾಸಕರು ಬಿಜೆಪಿ ಬಾಗಿಲು ತಟ್ಟುತ್ತಿದ್ದಾರೆಯೇ? ಎಂಬ ಪ್ರಶ್ನೆಯನ್ನು ಚಿತ್ರ ಹುಟ್ಟು ಹಾಕಿದೆ.
ಬಂಡಾಯ ಶಾಸಕರು ಎಐಸಿಸಿ ಅಧ್ಯಕ್ಷ ರಾಹುಲ್ ಗಾಂಧಿ ಕರ್ನಾಟಕಕ್ಕೆ ಆಗಮಿಸಿದಾಗ ಪಕ್ಷ ಸೇರುವ ಸಾಧ್ಯತೆ ಇದೆ. ಆದರೆ, ಪಕ್ಷ ಸೇರುವ ದಿನಾಂಕ ಅಧಿಕೃತವಾಗಿ ಇನ್ನೂ ನಿಗದಿಯಾಗಿಲ್ಲ. ಶಾಸಕರು ಕಾಂಗ್ರೆಸ್ ಸೇರುವುದಕ್ಕೆ ವಿರೋಧಗಳು ಇವೆ...

ಯಾವ-ಯಾವ ಶಾಸಕರು
ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ), ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ) ಜೆಡಿಎಸ್‌ನ ಬಡಾಯ ಶಾಸಕರು.

ಎಸ್.ಎಂ.ಕೃಷ್ಣ ಭೇಟಿ ಮಾಡಿದ ನಾಯಕರು
ಜೆಡಿಎಸ್‌ನ ಬಂಡಾಯ ಶಾಸಕರು ಬಿಜೆಪಿ ನಾಯಕ ಎಸ್.ಎಂ.ಕೃಷ್ಣ ಭೇಟಿ ಮಾಡಿದ್ದಾರೆ. ಜಮೀರ್ ಅಹಮದ್ ಖಾನ್, ಚೆಲುವರಾಯಸ್ವಾಮಿ, ಬಾಲಕೃಷ್ಣ ಭೇಟಿ ಎಸ್.ಎಂ.ಕೃಷ್ಣ ಭೇಟಿ ಮಾಡಿದ್ದಾರೆ.

ಕುತೂಹಲ ಕೆರಳಿಸಿದ ಪುಟ್ಟಣ್ಣ ಭೇಟಿ
ವಿಧಾನಪರಿಷತ್ ಸದಸ್ಯ, ಜೆಡಿಎಸ್ ನಾಯಕ ಪುಟ್ಟಣ್ಣ ಅವರು ಸಹ ಎಸ್.ಎಂ.ಕೃಷ್ಣ ಭೇಟಿ ಮಾಡಿದ್ದಾರೆ. ಈ ಭೇಟಿ ಕುತೂಹಲಕ್ಕೆ ಕಾರಣವಾಗಿದೆ. ಪುಟ್ಟಣ್ಣ ಅವರು ಪಕ್ಷ ತೊರೆಯಲು ನಿರ್ಧರಿಸಿದ್ದಾರೆ, ಅವರು ಬಿಜೆಪಿ ಸೇರಲಿದ್ದಾರೆ ಎಂಬ ಸುದ್ದಿ ಹಲವು ದಿನಗಳಿಂದ ಹರಿದಾಡುತ್ತಿದೆ.

ಡಿ.ಕೆ.ಶಿವಕುಮಾರ್ ಭೇಟಿ
ಜೆಡಿಎಸ್‌ನ ಬಂಡಾಯ ಶಾಸಕರು ಇಂಧನ ಸಚಿವ ಡಿ.ಕೆ.ಶಿವಕುಮಾರ್ ಜೊತೆ ಸಂಪರ್ಕದಲ್ಲಿದ್ದಾರೆ. ಜನವರಿ 9ರಂದು ಬೆಂಗಳೂರಿನ ಕಾವಲ್ ಭೈರಸಂದ್ರದಲ್ಲಿರುವ ಅಖಂಡ ಶ್ರೀನಿವಾಸಮೂರ್ತಿ ಅವರ ನಿವಾಸಕ್ಕೆ ಡಿ.ಕೆ.ಶಿವಕುಮಾರ್ ಭೇಟಿ ನೀಡಿ, ಉಪಹಾರ ಸವಿದಿದ್ದರು. ಚಾಮರಾಜಪೇಟೆ ಶಾಸಕ ಜಮೀರ್ ಅಹಮದ್ ಖಾನ್ ಸೇರಿದಂತೆ ಇತರ ನಾಯಕರು ಈ ಸಂದರ್ಭದಲ್ಲಿ ಜೊತೆಗಿದ್ದರು.

ವಿರೋಧವೂ ಇದೆ
ಬಂಡಾಯ ಶಾಸಕರು ಕಾಂಗ್ರೆಸ್ ಸೇರುವುದಕ್ಕೆ ಹಲವು ಕಡೆ ವಿರೋಧವಿದೆ. ಪುಲಿಕೇಶಿ ನಗರ ಕ್ಷೇತ್ರದಲ್ಲಿ ಅಖಂಡ ಶ್ರೀನಿವಾಸಮೂರ್ತಿ ಅವರು ಕಾಂಗ್ರೆಸ್ ಸೇರುವುದಕ್ಕೆ ಮಾಜಿ ಶಾಸಕ ಪ್ರಸನ್ನ ಕುಮಾರ್ ವಿರೋಧ ವ್ಯಕ್ತಪಡಿಸುತ್ತಿದ್ದಾರೆ.
-
Rameshwaram Cafe: ರಾಮೇಶ್ವರಂ ಕೆಫೆ ಪಾರ್ಸಲ್ - ಬ್ಯಾಗ್ ತುಂಬಾ ದುಬಾರಿ ಕಣ್ರೀ: ಸೋಷಿಯಲ್ ಮೀಡಿಯಾ ವೈರಲ್ ಪೋಸ್ಟ್ -
ವೈಭವ್ ಸೂರ್ಯವಂಶಿ ಆಕ್ರಮಣಕಾರಿ ಆಟಕ್ಕೆ ಇಂಗ್ಲೆಂಡ್ ಮೈಕೆಲ್ ವಾಘನ್ ಫಿದಾ; ಬಿಸಿಸಿಐಗೆ ವಿಶೇಷ ಮನವಿ -
Viral Video: ವಿದೇಶಿ ಛಾಯಾಗ್ರಾಹಕರ ಫೋಟೋಗ್ರಫಿ ಹುಚ್ಚುತನಕ್ಕೆ ಜೀವ ಕಳೆದುಕೊಂಡಿತೇ ಭಾರತದ ಮುದ್ದಾದ ಆನೆ, ಏನಿದು ಚರ್ಚೆ -
SSLC ಹಿಂದಿ ಪರೀಕ್ಷೆ ಮುಕ್ತಾಯ: ಪ್ರಶ್ನೆಪತ್ರಿಕೆ ಹೇಗಿತ್ತು? ಹೊಸ ನಿಯಮಗಳೇನು? ಇಲ್ಲಿದೆ ಸಂಪೂರ್ಣ ವಿಶ್ಲೇಷಣೆ -
ಕರ್ನಾಟಕ ಪ್ರಥಮ PUC ಫಲಿತಾಂಶ 2026 ಪ್ರಕಟ: ಫಲಿತಾಂಶ ವೀಕ್ಷಿಸುವುದು ಹೇಗೆ? ಇಲ್ಲಿದೆ ಮಾಹಿತಿ -
Bengaluru Kannada: ಉತ್ತರ ಕರ್ನಾಟಕ, ಕರಾವಳಿಯಲ್ಲಿ ಇಲ್ಲದ "ಕನ್ನಡ" ಸಮಸ್ಯೆ ಬೆಂಗಳೂರಲ್ಲೇಕೆ: ಅಶ್ವಿನಿ ಬರಹ -
April 1 Horoscope: ಈ ರಾಶಿಯವರಿಗೆ ಹೊಸ ಕೆಲಸಗಳು ಸುಗಮ, ವೃತ್ತಿಯಲ್ಲಿ ಮೆಚ್ಚುಗೆ; ದಿನ ಭವಿಷ್ಯ -
Bengaluru-Mysuru expressway: ಬೆಂಗಳೂರು-ಮೈಸೂರು ಎಕ್ಸ್ಪ್ರೆಸ್ವೇ ಪ್ರಯಾಣ ಮತ್ತೆ ದುಬಾರಿ: ಏಪ್ರಿಲ್ 1ರಿಂದ ಹೊಸ ಟೋಲ್ ದರ -
March 31 Horoscope: ಲಾಭ, ನಷ್ಟ, ಆರೋಗ್ಯದ ಸಂಪೂರ್ಣ ಮಾಹಿತಿ -
Karnataka Weather: ಬೆಂಗಳೂರು ಸೇರಿದಂತೆ ದಕ್ಷಿಣ ಒಳನಾಡಿನ ಈ ಜಿಲ್ಲೆಗಳಲ್ಲಿ ಇಂದು ಗುಡುಗು ಸಹಿತ ಮಳೆಯ ಆರ್ಭಟ -
ತ್ರಿಭಾಷಾ ಸೂತ್ರ vs ದ್ವಿಭಾಷಾ ಮಾದರಿ: ಹಿಂದಿ ಕಲಿಕೆಯ ಲಾಭ-ನಷ್ಟಗಳ ವಿಶ್ಲೇಷಣೆ: ಡಾ. ಪುರುಷೋತ್ತಮ ಬಿಳಿಮಲೆ ಬರಹ -
Summer Drinks: ಬಿಸಿಲಿನಲ್ಲಿ ದೇಹಕ್ಕೆ ಬೆಸ್ಟ್ ಡ್ರಿಂಕ್ ಯಾವುದು? ಎಳನೀರು ಅಥವಾ ಮಜ್ಜಿಗೆ












Click it and Unblock the Notifications