ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಚುನಾವಣೆ ಸೋಲಿಗೆ ನನ್ನ ಮೇಲೆ ಗೂಬೆ ಕೂರಿಸಬೇಡಿ; ಸಿದ್ದರಾಮಯ್ಯ

|
Google Oneindia Kannada News

ಬೆಂಗಳೂರು, ಆಗಸ್ಟ್ 23 : "2019ರ ಲೋಕಸಭೆ ಚುನಾವಣೆ ವೇಳೆ ಜೆಡಿಎಸ್ ಜೊತೆ ಮೈತ್ರಿ ಬೇಡ. ಫ್ರೆಂಡ್ಲಿ ಫೈಟ್ ಇರಲಿ ಎಂದಿದ್ದೆವು" ಎಂದು ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.

ಶುಕ್ರವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಸಿದ್ದರಾಮಯ್ಯ, ಜೆಡಿಎಸ್ ವರಿಷ್ಠ ಎಚ್. ಡಿ. ದೇವೇಗೌಡ ಮಾಡಿದ್ದ ಆರೋಪಗಳಿಗೆ ತಿರುಗೇಟು ನೀಡಿದರು. "ಲೋಕಸಭಾ ಚುನಾವಣೆಯಲ್ಲಿ ಜೆಡಿಎಸ್ ಸೋಲಿಗೆ ಅವರೇ ಕಾರಣ" ಎಂದು ಸ್ಪಷ್ಟಪಡಿಸಿದರು.

ದೇವೇಗೌಡರ ಮುಂದೆ ಎಚ್‌ಡಿಕೆ ಕಣ್ಣೀರು : ಶರವಣ ಹೊಸ ಬಾಂಬ್ದೇವೇಗೌಡರ ಮುಂದೆ ಎಚ್‌ಡಿಕೆ ಕಣ್ಣೀರು : ಶರವಣ ಹೊಸ ಬಾಂಬ್

"ಹಳೆ ಮೈಸೂರು ಭಾಗದಲ್ಲಿ ಪಂಚಾಯಿತಿ ಮಟ್ಟದ ಚುನಾವಣೆಯಿಂದ ಎಲ್ಲಾ ಚುನಾವಣೆಗಳಲ್ಲೂ ಕಾಂಗ್ರೆಸ್-ಜೆಡಿಎಸ್ ಫೈಟ್ ಕೊಟ್ಟಿದ್ದೆ ಹೆಚ್ಚು. ಹೀಗಾಗಿ ಫ್ರೆಂಡ್ಲಿ ಫೈಟ್ ಇರಲಿ ಎಂದಿದ್ದೆವು" ಎಂದು ತಿಳಿಸಿದರು.

ದೇವೇಗೌಡರು ಸ್ವಜಾತಿಯವರನ್ನೇ ಬೆಳೆಸುವುದಿಲ್ಲ: ಸಿದ್ದರಾಮಯ್ಯದೇವೇಗೌಡರು ಸ್ವಜಾತಿಯವರನ್ನೇ ಬೆಳೆಸುವುದಿಲ್ಲ: ಸಿದ್ದರಾಮಯ್ಯ

JDS Responsibility for Party Defeat In Lok Sabha Polls Says Siddaramaiah

"ಮಂಡ್ಯ, ತುಮಕೂರು ಕ್ಷೇತ್ರದಲ್ಲಿ ಸೋಲಿಗೆ ನಾವೇ ಕಾರಣ ಎಂದು ಆರೋಪ ಮಾಡಿದರು. ಮೈಸೂರು, ಬೆಂಗಳೂರು ಉತ್ತರ ಸೇರಿದಂತೆ ಹಲವೆಡೆ ನಮ್ಮ ಸೋಲಿಗೆ ನೀವು ಕಾರಣ ಅಲ್ಲವೋ?" ಎಂದು ಸಿದ್ದರಾಮಯ್ಯ ಪ್ರಶ್ನಿಸಿದರು.

ವಿಶ್ರಾಂತಿಗೆ ವೈದ್ಯರ ಸೂಚನೆ; ಸಿದ್ದರಾಮಯ್ಯ ಎಲ್ಲಾ ಕಾರ್ಯಕ್ರಮ ರದ್ದುವಿಶ್ರಾಂತಿಗೆ ವೈದ್ಯರ ಸೂಚನೆ; ಸಿದ್ದರಾಮಯ್ಯ ಎಲ್ಲಾ ಕಾರ್ಯಕ್ರಮ ರದ್ದು

"ಹಾಸನದಲ್ಲಿ ದೇವೇಗೌಡರ ಮೊಮ್ಮಗ ಗೆದ್ದಿದ್ದಾರೆ. ನಮ್ಮ ಪಕ್ಷ ಅಲ್ಲಿ ಕೆಲಸ ಮಾಡಿಲ್ಲವೇ?. ಒಟ್ಟಿಗೆ ಪ್ರಚಾರ ಮಾಡಿದ್ದೇವೆ, ಹಾಗಾಗಿಯೇ ಗೆದ್ದರು" ಎಂದು ಪ್ರಜ್ವಲ್ ರೇವಣ್ಣ ಗೆಲುವಿನ ಬಗ್ಗೆ ವಿಷಯ ಪ್ರಸ್ತಾಪಿಸಿದರು.

"ಹಿಂದೆ-ಮುಂದೆ ರಾಜಕೀಯ ಮಾಡುವ ಅಭ್ಯಾಸ ನನಗಿಲ್ಲ. ನೇರ ರಾಜಕಾರಣ ಮಾಡುತ್ತೇನೆ. ತಾತ, ಮೊಮ್ಮಕ್ಕಳು ಎಲ್ಲಾ ಕುಟುಂಬ ನಿಂತಿದ್ದರಿಂದ ಸೋಲು ಕಂಡರು. ನನ್ನ ಮೇಲೆ ಸುಮ್ಮನೆ ಗೂಬೆ ಕೂರಿಸುವುದು ಸರಿಯಲ್ಲ" ಎಂದು ಸಿದ್ದರಾಮಯ್ಯ ಹೇಳಿದರು.

English summary
Janata Dal (Secular) responsibility for their party defeat in 2019 Lok Sabha Polls said Former Chief Minister of Karnataka Siddaramaiah.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X