ಅಮಾನತು ವಾಪಸ್, ಶಾಸಕ ಕೆ.ಗೋಪಾಲಯ್ಯ ಮರಳಿ ಜೆಡಿಎಸ್ ಗೆ?

Posted By: Ramesh
Subscribe to Oneindia Kannada

ಬೆಂಗಳೂರು, ಫೆಬ್ರವರಿ. 10 : ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘಸಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿ ಅಮಾನತುಗೊಂಡಿದ್ದ 7 ಶಾಸಕರ ಪೈಕಿ ಮಹಾಲಕ್ಷ್ಮೀ ಲೇಔಟ್ ಕ್ಷೇತ್ರದ ಶಾಸಕ ಕೆ.ಗೋಪಾಲಯ್ಯ ಮೇಲಿನ ಅಮಾನತು ವಾಪಸ್ ಪಡೆಯಲಾಗಿದೆ.

ಜೆಡಿಎಸ್ ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಎಚ್.ಡಿ.ದೇವೇಗೌಡ ಶಿಸ್ತು ಸಮಿತಿ ಸಲಹೆಯಂತೆ ಅಮಾನತು ಆದೇಶ ವಾಪಸ್ ಪಡೆದಿದ್ದಾರೆ. ಈ ಅಮಾನತು ವಾಪಸ್ ಪಡೆದಿರುವುದನ್ನು ನೋಡಿದರೆ ಪುನಃ ಪಕ್ಷಕ್ಕೆ ಸೇರಿಸಿಕೊಳ್ಳುವ ಎಲ್ಲಾ ಲಕ್ಷಣಗಳು ಕಾಣುತ್ತಿವೆ.[ಅರಮನೆ ಮೈದಾನದಲ್ಲಿ ನಾಳೆ(ಫೆ.10) ಜೆಡಿಎಸ್ ಮಹತ್ವದ ಸಮಾವೇಶ]

ಅಷ್ಟೇ ಅಲ್ಲದೆ ಶುಕ್ರವಾರ ನಡೆಯಲಿರುವ ಪಕ್ಷದ ರಾಜ್ಯ ಚುನಾವಣಾ ಸಂಘಟನಾ ಸಮಾವೇಶದಲ್ಲಿ ಗೋಪಾಲಯ್ಯ ಪಾಲ್ಗೊಳ್ಳು ನಿರೀಕ್ಷೆಗಳಿವೆ.

JDS revoked Mahalakshmi Layout MLA A K. Gopalaiah suspension

ರಾಜ್ಯಸಭೆ ಚುನಾವಣೆಯಲ್ಲಿ ಪಕ್ಷದ ವಿಪ್ ಉಲ್ಲಂಘನೆ ಮಾಡಿ ಕಾಂಗ್ರೆಸ್ ಅಭ್ಯರ್ಥಿಗೆ ಮತ ಹಾಕಿದ್ದ ಏಳು ಶಾಸಕರನ್ನು ಜೆಡಿಎಸ್ ಅಮಾತನು ಮಾಡಿತ್ತು,

ಹಾಗೂ. ಶಾಸಕರನ್ನು ಅನರ್ಹಗೊಳಿಸುವಂತೆ ಸ್ಪೀಕರ್ ಗೆ ದೂರು ನೀಡಿದೆ. ಈ ಪ್ರಕರಣದ ವಿಚಾರಣೆ ಸ್ಪೀಕರ್ ಕೆ.ಬಿ.ಕೋಳಿವಾಡ ಮುಂದೆ ನಡೆಯುತ್ತಿದೆ.

ಜಮೀರ್ ಅಹಮದ್ ಖಾನ್ (ಚಾಮರಾಜಪೇಟೆ), ಕೆ.ಗೋಪಾಲಯ್ಯ (ಮಹಾಲಕ್ಷ್ಮೀ ಲೇಔಟ್), ಅಖಂಡ ಶ್ರೀನಿವಾಸಮೂರ್ತಿ (ಪುಲಿಕೇಶಿ ನಗರ), ಚೆಲುವರಾಯ ಸ್ವಾಮಿ (ನಾಗಮಂಗಲ), ಎಚ್.ಸಿ.ಬಾಲಕೃಷ್ಣ (ಮಾಗಡಿ) ಇಕ್ಬಾಲ್ ಅನ್ಸಾರಿ (ಗಂಗಾವತಿ), ರಮೇಶ್ ಬಂಡಿಸಿದ್ದೇಗೌಡ (ಶ್ರೀರಂಗಪಟ್ಟಣ), ಭೀಮಾ ನಾಯಕ್ (ಹಗರಿಬೊಮ್ಮನಹಳ್ಳಿ) ಇವರು ರಾಜ್ಯಸಭಾ ಚುನವಾಣೆಯಲ್ಲಿ ಅಡ್ಡ ಮತದಾನ ಮಾಡಿ ಜೆಡಿಎಸ್ ನಿಂದ ಅಮಾನತುಗೊಂಡಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Finally JDS revoked Mahalakshmi Layout MLA K. Gopalaiah suspension. The Gopalaiah cross-voted for ruling party candidates in the Rajya Sabha poll.
Please Wait while comments are loading...