ಮೂವರು ಶಾಸಕರ ಅನರ್ಹತೆಗೆ ಮನವಿ ಮಾಡಿದ ಜೆಡಿಎಸ್‌

ಬೆಂಗಳೂರು, ಜುಲೈ 11 : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮೂವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜೆಡಿಎಸ್ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರಿಗೆ ದೂರು ನೀಡಿದೆ.

ಗುರುವಾರ ಜೆಡಿಎಸ್ ಪರವಾಗಿ ವಕೀಲ ರಂಗನಾಥ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಪರವಾಗಿ ಮಾಜಿ ಶಾಸಕ ಕೋನರೆಡ್ಡಿ, ರಮೇಶ್ ಬಾಬು ಅವರು ಉಪಸ್ಥಿತರಿದ್ದರು.

ಜುಲೈ 6ರ ಶನಿವಾರ ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ.

JDS seeks disqualification of Three MALs

ರಾಜೀನಾಮೆ ನೀಡಿದ ಮೂವರು ಶಾಸಕರು ಮುಂಬೈಗೆ ತೆರಳಿದ್ದರು. ಸುಪ್ರೀಂಕೋರ್ಟ್‌ ಆದೇಶದಂತೆ ಗುರುವಾರ ಸಂಜೆ ಮೂವರು ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದರು.

ಜೆಡಿಎಸ್‌ನ ಶಾಸಕರು ದೇವನಹಳ್ಳಿ ಬಳಿಯ ಗಾಲ್ಫ್ ಶೈರ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಮಧ್ಯಾಹ್ನ ರೆಸಾರ್ಟ್‌ಗೆ ಭೇಟಿ ನೀಡಿ ಶಾಸಕರ ಜೊತೆ ಮಾತುಕತೆ ನಡೆಸಿದರು.

ಕಾಂಗ್ರೆಸ್‌ ಸಹ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಿದೆ. ಆದರೆ, ಯಾವುದೇ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಸ್ಪೀಕರ್ ಇನ್ನೂ ಯಾವುದೇ ತೀರ್ಮಾನಗಳನ್ನು ಕೈಗೊಂಡಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+