ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮೂವರು ಶಾಸಕರ ಅನರ್ಹತೆಗೆ ಮನವಿ ಮಾಡಿದ ಜೆಡಿಎಸ್‌

|
Google Oneindia Kannada News

ಬೆಂಗಳೂರು, ಜುಲೈ 11 : ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿರುವ ಮೂವರನ್ನು ಶಾಸಕ ಸ್ಥಾನದಿಂದ ಅನರ್ಹಗೊಳಿಸಬೇಕು ಎಂದು ಜೆಡಿಎಸ್ ಸ್ಪೀಕರ್ ಕೆ.ಆರ್.ರಮೇಶ್ ಕುಮಾರ್ ಅವರಿಗೆ ದೂರು ನೀಡಿದೆ.

ಗುರುವಾರ ಜೆಡಿಎಸ್ ಪರವಾಗಿ ವಕೀಲ ರಂಗನಾಥ್ ಅವರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿ ಮಾಡಿ ದೂರು ನೀಡಿದರು. ಈ ಸಂದರ್ಭದಲ್ಲಿ ಪಕ್ಷದ ಪರವಾಗಿ ಮಾಜಿ ಶಾಸಕ ಕೋನರೆಡ್ಡಿ, ರಮೇಶ್ ಬಾಬು ಅವರು ಉಪಸ್ಥಿತರಿದ್ದರು.

ಶಾಸಕರ ಜೊತೆ ಸಭೆ ನಡೆಸಿ ಭೋಜನ ಸವಿದ ಎಚ್.ಡಿ.ಕುಮಾರಸ್ವಾಮಿಶಾಸಕರ ಜೊತೆ ಸಭೆ ನಡೆಸಿ ಭೋಜನ ಸವಿದ ಎಚ್.ಡಿ.ಕುಮಾರಸ್ವಾಮಿ

ಜುಲೈ 6ರ ಶನಿವಾರ ಹುಣಸೂರು ಶಾಸಕ ಎಚ್. ವಿಶ್ವನಾಥ್, ಕೆ. ಆರ್. ಪೇಟೆ ಶಾಸಕ ನಾರಾಯಣ ಗೌಡ, ಮಹಾಲಕ್ಷ್ಮೀ ಲೇಔಟ್ ಶಾಸಕ ಕೆ. ಗೋಪಾಲಯ್ಯ ಅವರು ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ. ಆದರೆ, ರಾಜೀನಾಮೆ ಇನ್ನೂ ಅಂಗೀಕಾರವಾಗಿಲ್ಲ.

8 ಶಾಸಕರ ಅನರ್ಹತೆ : ಕೆಪಿಸಿಸಿ ಅಧ್ಯಕ್ಷರು ಹೇಳುವುದೇನು?8 ಶಾಸಕರ ಅನರ್ಹತೆ : ಕೆಪಿಸಿಸಿ ಅಧ್ಯಕ್ಷರು ಹೇಳುವುದೇನು?

JDS seeks disqualification of Three MALs

ರಾಜೀನಾಮೆ ನೀಡಿದ ಮೂವರು ಶಾಸಕರು ಮುಂಬೈಗೆ ತೆರಳಿದ್ದರು. ಸುಪ್ರೀಂಕೋರ್ಟ್‌ ಆದೇಶದಂತೆ ಗುರುವಾರ ಸಂಜೆ ಮೂವರು ಶಾಸಕರು ಸ್ಪೀಕರ್ ರಮೇಶ್ ಕುಮಾರ್ ಅವರನ್ನು ಭೇಟಿಯಾಗಿ ಮತ್ತೊಮ್ಮೆ ರಾಜೀನಾಮೆ ಸಲ್ಲಿಸಿದರು.

ಶಿಷ್ಯರ ವಿರುದ್ಧ ಸಿದ್ದರಾಮಯ್ಯ ಸಮರ, ಶಾಸಕರ ಅನರ್ಹತೆಗೆ ಮನವಿ!ಶಿಷ್ಯರ ವಿರುದ್ಧ ಸಿದ್ದರಾಮಯ್ಯ ಸಮರ, ಶಾಸಕರ ಅನರ್ಹತೆಗೆ ಮನವಿ!

ಜೆಡಿಎಸ್‌ನ ಶಾಸಕರು ದೇವನಹಳ್ಳಿ ಬಳಿಯ ಗಾಲ್ಫ್ ಶೈರ್ ರೆಸಾರ್ಟ್‌ನಲ್ಲಿ ವಾಸ್ತವ್ಯ ಹೂಡಿದ್ದಾರೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಗುರುವಾರ ಮಧ್ಯಾಹ್ನ ರೆಸಾರ್ಟ್‌ಗೆ ಭೇಟಿ ನೀಡಿ ಶಾಸಕರ ಜೊತೆ ಮಾತುಕತೆ ನಡೆಸಿದರು.

ಕಾಂಗ್ರೆಸ್‌ ಸಹ ಶಾಸಕರನ್ನು ಅನರ್ಹಗೊಳಿಸಬೇಕು ಎಂದು ಸ್ಪೀಕರ್‌ಗೆ ದೂರು ನೀಡಿದೆ. ಆದರೆ, ಯಾವುದೇ ಶಾಸಕರನ್ನು ಅನರ್ಹಗೊಳಿಸುವ ಬಗ್ಗೆ ಸ್ಪೀಕರ್ ಇನ್ನೂ ಯಾವುದೇ ತೀರ್ಮಾನಗಳನ್ನು ಕೈಗೊಂಡಿಲ್ಲ.

English summary
Janata Dal (Secular) requested the speaker K.R.Ramesh Kumar to disqualify the Three MLAs who submitted resignation on July 6, 2019.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X