ನಿಮ್ಮಪ್ಪನಾಣೆ ಚಾಮುಂಡೇಶ್ವರಿಯಿಂದ ಗೆಲ್ಲಿ ನೋಡೋಣ, ಎಚ್ಡಿಕೆ ಸವಾಲ್

Posted By:
Subscribe to Oneindia Kannada

ಹುಬ್ಬಳ್ಳಿ, ಏ 7: ಎರಡು ರಾಷ್ಟ್ರೀಯ ಪಕ್ಷಗಳ ಭ್ರಷ್ಟ ಆಡಳಿತ ನೋಡಿ ರಾಜ್ಯದ ಜನರು ಬೇಸತ್ತಿದ್ದಾರೆ. ಹೀಗಾಗಿ, ಜೆಡಿಎಸ್ ಪರ ರಾಜ್ಯದ ಜನರ ಒಲವು ಹೆಚ್ಚಾಗಿದ್ದು ಎರಡೂ ರಾಷ್ಟ್ರೀಯ ಪಕ್ಷಗಳಿಗೆ ಭಯ ಉಂಟಾಗಿದೆ ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಕುಮಾರಸ್ವಾಮಿ ಹೇಳಿದರು.

ವಿಧಾನಸಭೆ ಚುನಾವಣೆ ಸುದ್ದಿಗಳಿಗಾಗಿ ಇಲ್ಲಿ ಕ್ಲಿಕ್ ಮಾಡಿ | 2018ರ ನಿಮ್ಮ ಕನಸಿನ ಸಂಪುಟವನ್ನು ಆಯ್ಕೆ ಮಾಡಿ

ನಗರದಲ್ಲಿ ಶನಿವಾರ ಮಾತನಾಡುತ್ತಿದ್ದ ಕುಮಾರಸ್ವಾಮಿ, 113 ಸೀಟ್​ಗಳನ್ನು ನಾವು ಕ್ರಾಸ್ ಮಾಡುತ್ತೇವೆ ಎಂಬ ಸಂಪೂರ್ಣ ವಿಶ್ವಾಸವಿದೆ. ಯಾವ ಪಕ್ಷಗಳ ಬೆಂಬಲ ಪಡೆಯದೇ ಸ್ವತಂತ್ರವಾಗಿ ಸರ್ಕಾರ ರಚನೆ ಮಾಡುತ್ತೇವೆ. ಉತ್ತರ ಕರ್ನಾಟಕದಲ್ಲಿ 45 ಸ್ಥಾನಗಳನ್ನು ಗೆಲ್ಲುತ್ತೇವೆ. ಹಳೇ ಕರ್ನಾಟಕದ ಭಾಗದಲ್ಲಿ 75 ಸ್ಥಾನಗಳನ್ನು ಗೆಲ್ಲುತೇವೆ ಎಂದು ಎಚ್ಡಿಕೆ ಭರವಸೆಯಿಂದ ನುಡಿದರು.

ಸಿದ್ದರಾಮಯ್ಯಗೆ ಚಾಮುಂಡೇಶ್ವರಿ ಸೇಫ್ ಅಲ್ಲ, ಗುಪ್ತಚರ ಇಲಾಖೆ ಸ್ಫೋಟಕ ಮಾಹಿತಿ

ನನಗೆ ಯಾವ ಪಕ್ಷಗಳನ್ನು ಸೋಲಿಸುವ ಉದ್ದೇಶವಿಲ್ಲ. ನಮ್ಮ ಅಭ್ಯರ್ಥಿಗಳನ್ನು ಗೆಲ್ಲಿಸುವುದೊಂದೇ ನನ್ನ ಗುರಿ ಎಂದ ಕುಮಾರಸ್ವಾಮಿ, ಪ್ರಜ್ವಲ್​ಗೆ ಟಿಕೆಟ್ ನೀಡಲು ಕಾರ್ಯಕರ್ತರ ಒತ್ತಡ ವಿಚಾರದ ಕುರಿತು ಪ್ರತಿಕ್ರಿಯಿಸಿದರು.

JDS State President HD Kumaraswamy challenge to Siddaramaiah to win from Chamundeshwari constituency

ನಾವು ಕುಟುಂಬ ರಾಜಕಾರಣ ಮಾಡುವುದಿಲ್ಲ. ಚನ್ನಪಟ್ಟಣದಲ್ಲಿ ಅನಿತಾ ಕುಮಾರಸ್ವಾಮಿಗೆ ಟಿಕೆಟ್ ನೀಡುವಂತೆ ಕಾರ್ಯಕರ್ತರ ಒತ್ತಡವಿತ್ತು. ಆದರೆ, ಪ್ರಜ್ವಲ್​ ವಿಷಯದ ಬಗ್ಗೆ ಶೀಘ್ರದಲ್ಲೇ ಒಂದು ಸ್ಪಷ್ಟನೆ ನೀಡುತ್ತೇವೆ ಎಂದು ಕುಮಾರಸ್ವಾಮಿ ಈ ಸಂದರ್ಭದಲ್ಲಿ ತಿಳಿಸಿದರು.

ಸಿದ್ದುವನ್ನು ಸೋಲಿಸಲು ಜೆಡಿಎಸ್ ಬಳಿಯಿದೆ ರೇವಣಾಸ್ತ್ರ!

ಕುಮಾರಸ್ವಾಮಿಗೆ ಸೋಲಿನ ಭಯವಿದೆ. ಹೀಗಾಗಿ ಎರಡು ಕ್ಷೇತ್ರಗಳಲ್ಲಿ ಸ್ಪರ್ಧಿಸ್ತಾರೆ ಎನ್ನುವ ಜಗದೀಶ್​ ಶೆಟ್ಟರ್ ಹೇಳಿಕೆಗೆ ತಿರುಗೇಟು ನೀಡಿರುವ ಕುಮಾರಸ್ವಾಮಿ, ನನ್ನ ಕರ್ಮಭೂಮಿ ರಾಮನಗರ, ಹಾಗಾಗಿ ಅಲ್ಲಿಂದ ಸ್ಪರ್ಧಿಸುತ್ತೇನೆ. ಕಾರ್ಯಕರ್ತರ ಅಪೇಕ್ಷೆ ಮೇರೆಗೆ ಇನ್ನೊಂದು ಕ್ಷೇತ್ರದ ಆಯ್ಕೆ ಮಾಡಿಕೊಳ್ಳಲಾಗಿದೆ.

ನನ್ನನ್ನು ಪ್ರಶ್ನಿಸುತ್ತಿರುವ ಶೆಟ್ಟರ್ ಅವರು, ಇದೇ ಪ್ರಶ್ನೆಯನ್ನು ಮೋದಿಯವರಲ್ಲೂ ಕೇಳಲಿ. ಸಿಎಂ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ. ಕುಮಾರಸ್ವಾಮಿಯನ್ನು ಸೋಲಿಸುವುದು ನನಗೆ ಗೊತ್ತು ಎಂಬ ಸಿಎಂ ಸಿದ್ದರಾಮಯ್ಯ ಹೇಳಿಕೆಗೆ ಪ್ರತಿಕ್ರಿಯಿಸಿದ ಅವರು, ಕಾಂಗ್ರೆಸ್‌ನವರು ಇರೋದೇ ನನಗೆ ವಿರೋಧ ಮಾಡಲು ಎಂದು ಲೇವಡಿ ಮಾಡಿದ್ದಾರೆ.

ಸಿಎಂ ಸಿದ್ದರಾಮಯ್ಯ ತಮ್ಮ ಅಧಿಕಾರ ದುರುಪಯೋಗ ಪಡಿಸಿಕೊಳ್ಳುತ್ತಿದ್ದಾರೆ. ಅವರ ವಿರುದ್ಧ ಇಂದು (ಏ 7) ಚುನಾವಣಾ ಆಯೋಗಕ್ಕೆ ದೂರು ನೀಡುತ್ತೇನೆ ಎಂದರು. ನಿಮ್ಮಪ್ಪನಾಣೆಗೂ ನೀವು ಚಾಮುಂಡೇಶ್ವರಿಯಲ್ಲಿ ಆಯ್ಕೆಯಾಗ್ತೀರಾ?ಸಿಎಂ ಪದೇ ಪದೇ ಕುಮಾರಸ್ವಾಮಿ ಅವ್ರಪ್ಪನಾಣೆ ಸಿಎಂ ಆಗಲ್ಲ ಅಂತಾರೆ.

ಆದರೆ, ನಿಮ್ಮಪ್ಪನಾಣೆ ನೀವು ಚಾಮುಂಡೇಶ್ವರಿಯಿಂದ ಆಯ್ಕೆಯಾಗಿ ಬನ್ನಿ ನೋಡೋಣ ಎಂದು ಸಿಎಂಗೆ ಕುಮಾರಸ್ವಾಮಿ ಸವಾಲು ಹಾಕಿದರು. ಚಾಮುಂಡೇಶ್ವರಿ ಅಷ್ಟೇ ಅಲ್ಲ, ಬಾದಾಮಿಯಲ್ಲಾದರೂ ಸ್ಪರ್ಧಿಸಲಿ. ಅಲ್ಲಿಯೂ ನಾವು ಸಿಎಂ ವಿರುದ್ದ ಸ್ಪರ್ಧೆ ನೀಡಲು ಸಜ್ಜಾಗಿದ್ದೇವೆ ಎಂದು ಕುಮಾರಸ್ವಾಮಿ ಹೇಳಿದ್ದಾರೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
JDS State President HD Kumaraswamy challenge to Siddaramaiah to win from Chamundeshwari constituency from Mysuru. If CM contested from Badami, we are fight there also, Kumaraswamy statement in Hubballi on April 7.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ