2023ರ ಚುನಾವಣೆ; ಮಹತ್ವದ ತೀರ್ಮಾನ ಪ್ರಕಟಿಸಿದ ಕುಮಾರಸ್ವಾಮಿ

ಬೆಂಗಳೂರು, ಜುಲೈ 15; "2023ರ ವಿಧಾನಸಭಾ ಚುನಾವಣೆಗೆ ಜೆಡಿಎಸ್ ಪಕ್ಷ 150 ರಿಂದ 170 ಕ್ಷೇತ್ರಗಳಲ್ಲಿ ಸ್ಪರ್ಧೆ ಮಾಡಲಿದೆ" ಎಂದು ಮಾಜಿ ಮುಖ್ಯಮಂತ್ರಿ ಮತ್ತು ಜೆಡಿಎಸ್ ನಾಯಕ ಎಚ್. ಡಿ. ಕುಮಾರಸ್ವಾಮಿ ಹೇಳಿದರು.

ಗುರುವಾರ ಜೆಪಿ ಭವನದಲ್ಲಿ ಮಾಧ್ಯಮಗಳ ಜೊತೆ ಮಾತನಾಡಿದ ಅವರು, "2022ರ ಜನವರಿ 15ರ ಸುಮಾರಿಗೆ ಪಕ್ಷ 150 ಕ್ಷೇತ್ರಗಳ ಅಭ್ಯರ್ಥಿಗಳನ್ನು ಘೋಷಣೆ ಮಾಡಲಿದೆ" ಎಂದರು.

"2022ರ ಜನವರಿ ಎಂದರೆ ಚುನಾವಣೆಗೆ ಸುಮಾರು ಒಂದು ವರ್ಷ ಉಳಿದಿರುತ್ತದೆ. 150 ಕ್ಷೇತ್ರಗಳಿಗೆ ಅಭ್ಯರ್ಥಿಗಳನ್ನು ಘೋಷಣೆ ಮಾಡಿದರೆ ಅವರು ಚುನಾವಣೆ ಸಿದ್ಧತೆಗಳನ್ನು ಮಾಡಿಕೊಳ್ಳಲು ಅನುಕೂಲವಾಗಲಿದೆ" ಎಂದು ಕುಮಾರಸ್ವಾಮಿ ತಿಳಿಸಿದರು.

JDS To Contest In 150 To 170 Seat In 2023 Assembly Elections Says Kumaraswamy

"ಪಕ್ಷ ಸಂಘಟನೆ, ಪದಾಧಿಕಾರಿಗಳ ನೇಮಕ, ನಾಯಕರ ಭೇಟಿಗಾಗಿ ಮುಂದಿನ ಒಂದು ವಾರದಲ್ಲಿ ಪ್ರತಿದಿನ 5 ಜಿಲ್ಲೆಗಳಲ್ಲಿ ಪ್ರವಾಸ ಮಾಡಲಿದ್ದೇನೆ" ಎಂದು ಕುಮಾರಸ್ವಾಮಿ ಘೋಷಣೆ ಮಾಡಿದರು.

"ಜನರ ಜೊತೆ ಮಾತುಕತೆ ನಡೆಸಲಿದ್ದೇನೆ. ಪ್ರಾದೇಶಿಕ ಪಕ್ಷದ ಅಗತ್ಯ. ಶಿಕ್ಷಣ, ರಾಜಕೀಯ, ರೈತರ ವಿಚಾರದಲ್ಲಿ ಪಕ್ಷದ ನಿಲುವು ಏನು ಎಂಬುದನ್ನು ಜನರಿಗೆ ತಿಳಿಸಿಕೊಡುತ್ತೇನೆ" ಎಂದು ಕುಮಾರಸ್ವಾಮಿ ವಿವರಣೆ ನೀಡಿದರು.

"ರಾಷ್ಟ್ರೀಯ ಪಕ್ಷಗಳಾದ ಕಾಂಗ್ರೆಸ್ ಮತ್ತು ಬಿಜೆಪಿ ಕಾರ್ಯವೈಖರಿಯನ್ನು ಜನರು ನೋಡುತ್ತಿದ್ದಾರೆ. ರಾಷ್ಟ್ರೀಯ ಪಕ್ಷಗಳು ಅಧಿಕಾರಕ್ಕೆ ಬಂದರೆ ಕರ್ನಾಟಕವನ್ನು ಅವರು ಲೂಟಿ ಮಾಡಲು ಬಳಕೆ ಮಾಡಿಕೊಳ್ಳುತ್ತಾರೆ" ಎಂದು ಕುಮಾರಸ್ವಾಮಿ ದೂರಿದರು.

2018ರ ಚುನಾವಣೆ ಬಳಿಕ ಯಾವುದೇ ಪಕ್ಷಕ್ಕೆ ಬಹುಮತ ಸಿಗಲಿಲ್ಲ. ಆಗ ಎಚ್. ಡಿ. ಕುಮಾರಸ್ವಾಮಿ ಕಾಂಗ್ರೆಸ್ ಜೊತೆ ಸೇರಿ ಮೈತ್ರಿ ಸರ್ಕಾರ ರಚನೆ ಮಾಡಿದರು. 14 ತಿಂಗಳಿನಲ್ಲಿ ಸರ್ಕಾರ ಪತನಗೊಂಡಿತು. ಚುನಾವಣೆಯಲ್ಲಿ ಜೆಡಿಎಸ್ 37 ಸ್ಥಾನಗಳಲ್ಲಿ ಗೆದ್ದಿತ್ತು. ರಾಜಕೀಯ ಬೆಳವಣಿಗೆ ಬಳಿಕ 2019ರಲ್ಲಿ ಶಾಸಕರ ಸಂಖ್ಯೆ 32ಕ್ಕೆ ಇಳಿಯಿತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+