JDS President: ಏಪ್ರಿಲ್ ನಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರ ನೇಮಕ: ಹೊಸ ಸಾರಥಿ ಇವರೇ ನೋಡಿ

ಬೆಂಗಳೂರು, ಜನವರಿ 13: ಜಿಲ್ಲಾ ಪಂಚಾಯಿತಿ ಮತ್ತು ತಾಲ್ಲೂಕು ಪಂಚಾಯಿತಿ ಚುನಾವಣೆ ಹಿನ್ನೆಲೆಯಲ್ಲಿ ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಗೆ ಏಪ್ರಿಲ್ ನಲ್ಲಿ ಚುನಾವಣೆ ನಡೆಸಲು ಜೆಡಿಎಸ್ ನಿರ್ಧರಿಸಿದೆ. ಏಪ್ರಿಲ್ನಲ್ಲಿ ಚುನಾವಣೆ ಮೂಲಕ ರಾಜ್ಯ ಘಟಕದ ಅಧ್ಯಕ್ಷರನ್ನು ಆಯ್ಕೆ ಮಾಡಲು ನಾವು ನಿರ್ಧರಿಸಿದ್ದೇವೆ ಎಂದು ಮಾಜಿ ಮುಖ್ಯಮಂತ್ರಿ ಹೆಚ್‌ ಡಿ ಕುಮಾರಸ್ವಾಮಿ ಅವರು ತಿಳಿಸಿದ್ದಾರೆ.

ಪಕ್ಷವನ್ನು ಬಲಪಡಿಸುವತ್ತ ಗಮನ ಹರಿಸುವ ಅಗತ್ಯದ ಬಗ್ಗೆ ನಾನು ನಮ್ಮ ನಾಯಕರೊಂದಿಗೆ ದೃಢವಾಗಿದ್ದೇನೆ. ಪಕ್ಷದ ಅಭಿವೃದ್ಧಿಗಾಗಿ ಪ್ರಾಮಾಣಿಕವಾಗಿ ಕೆಲಸ ಮಾಡುವವರಿಗೆ ಆದ್ಯತೆ ನೀಡಲಾಗುವುದು ಎಂದು ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. ಇನ್ನೂ ಸತತ ಮೂರನೇ ಬಾರಿಗೆ ಸೋಲು ಅನುಭವಿಸಿರುವ ಜೆಡಿಎಸ್ ರಾಜ್ಯ ಯುವ ಘಟಕದ ಅಧ್ಯಕ್ಷ ನಿಖಿಲ್ ಕುಮಾರಸ್ವಾಮಿ ಅವರು ಅಧ್ಯಕ್ಷ ಸ್ಥಾನಕ್ಕೆ ಪ್ರಬಲ ಸ್ಪರ್ಧಿ ಎಂದು ಹೇಳಲಾಗುತ್ತಿದೆ.

JDS To Get New State President In April

ರಾಜ್ಯಾಧ್ಯಕ್ಷ ಸ್ಥಾನಕ್ಕೆ ಯಾರನ್ನು ಆಯ್ಕೆ ಕುರಿತು ಮಾಧ್ಯಮಗಳ ಜೊತೆಗೆ ಹೆಚ್‌ ಡಿ ಕುಮಾರಸ್ವಾಮಿ ಅವರು ಮಾತನಾಡಿ, ಜೆಡಿಎಸ್ ರಾಜ್ಯಾಧ್ಯಕ್ಷರ ಆಯ್ಕೆಯನ್ನು ಮುಂದಿನ ಏಪ್ರಿಲ್ ತಿಂಗಳ ಒಳಗೆ ಚುನಾವಣೆ ಮೂಲಕ ನಡೆಸುವ ನಿರ್ಧಾರವನ್ನು ಜೆಡಿಎಸ್ ಕೈಗೊಂಡಿದೆ. ಪಕ್ಷದ ದ್ವೈವಾರ್ಷಿಕ ಸಾಂಸ್ಥಿಕ ಚುನಾವಣೆ, ಸದಸ್ಯತ್ವ ಅಭಿಯಾನವನ್ನು ಚುರುಕುಗೊಳಿಸುವುದು, ಜಿಲ್ಲಾ ಮತ್ತು ತಾಲೂಕು ಪಂಚಾಯಿತಿ ಚುನಾವಣೆ ತಯಾರಿ ಹಾಗೂ ಪಕ್ಷ ಸಂಘಟನೆ ವಿಷಯಗಳ ಸಭೆಯಲ್ಲಿ ಮಹತ್ವದ ನಿರ್ಧಾರಗಳನ್ನು ಮಾಡಲಾಗಿದೆ ಎಂದು ಹೇಳಿದರು.

ಮುಂದಿನ ಏಪ್ರಿಲ್ ಒಳಗೆ ರಾಜ್ಯದ ಘಟಕದ ಅಧ್ಯಕ್ಷ ಸ್ಥಾನವನ್ನು ಚುನಾವಣೆ ಮೂಲಕ ಆಯ್ಕೆ ಮಾಡುವ ತೀರ್ಮಾನ ಆಗಿದೆ. ಪಕ್ಷದ ಸಂಘಟನೆ ಬಗ್ಗೆ ಪಕ್ಷದ ನಾಯಕರಿಗೆ ಕಠಿಣವಾಗಿಯೇ ಹೇಳಿದ್ದೇನೆ. ಯಾರು ಪ್ರಾಮಾಣಿಕವಾಗಿ ಪಕ್ಷದ ಸಂಘಟನೆಗೆ ದುಡಿಯುತ್ತಾರೋ ಅಂಥವರಿಗೆ ಆದ್ಯತೆ ಕೊಡುತ್ತೇವೆ. ನಾನು ಕೂಡ ಪಕ್ಷ ಸಂಘಟನೆಯಲ್ಲಿ ನಿಯಮಿತವಾಗಿ ತೊಡಗಿಸಿಕೊಳ್ಳುತ್ತೇನೆ ಎಂದು ಜೆಡಿಎಸ್‌ ರಾಜ್ಯಾಧ್ಯಕ್ಷರಾದ ಹೆಚ್‌ ಡಿ ಕುಮಾರಸ್ವಾಮಿ ಅವರು ಹೇಳಿದರು.

ಕುಮಾರಸ್ವಾಮಿ ಅವರು ಕೇಂದ್ರ ಸಚಿವರಾದ ಮೇಲೆ ರಾಜ್ಯದಲ್ಲಿ ನಾಯಕತ್ವ ಶೂನ್ಯ ಉಂಟಾಗಿದೆ ಎಂದು ಹೇಳಲಾಗುತ್ತಿದೆ ಎನ್ನುವ ಪ್ರಶ್ನೆಗೆ ಉತ್ತರಿಸಿ, ವಾರದಲ್ಲಿ ನಾಲ್ಕು ದಿನ ನವದೆಹಲಿಯ ಸಚಿವಾಲಯದಲ್ಲಿ ಕೆಲಸ ಮಾಡುತ್ತೇನೆ. ಒಂದು ಅಥವಾ ಎರಡು ದಿನ ಬೃಹತ್ ಕೈಗಾರಿಕೆ ಮತ್ತು ಉಕ್ಕು ಸಚಿವಾಲಯದ ಕಾರ್ಖಾನೆಗಳಿಗೆ ಭೇಟಿ ಕೊಡುತ್ತೇನೆ. ಉಳಿದ ಸಮಯವನ್ನು ಪಕ್ಷದ ಕೆಲಸಕ್ಕೆ ಮಿಸಲಿಡುತ್ತೇನೆ. ಪಕ್ಷದ ಸಂಘಟನೆ, ಸಭೆ, ಪ್ರವಾಸ, ಮಂಡ್ಯ ಕ್ಷೇತ್ರಕ್ಕೆ ಭೇಟಿ ಇತ್ಯಾದಿಗಳ ಬಗ್ಗೆ ವೇಳಾಪಟ್ಟಿ ಸಿದ್ಧ ಮಾಡಿಕೊಂಡಿದ್ದೇನೆ. ಇನ್ನು ಮುಂದೆ ಅದರಂತೆಯೇ ಕೆಲಸ ಮಾಡುತ್ತೇನೆ ಎಂದು ಕೇಂದ್ರ ಸಚಿವ ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

ಕಾಂತರಾಜ್ ವರದಿ ಸರ್ಕಾರದ ಕೈ ಸೇರಿ ಎಷ್ಟು ವರ್ಷವಾಯಿತು? ಜಾತಿಗಳ ಸಮಸ್ಯಗಳಿಗೆ ಏನು ಪರಿಹಾರ ಕೊಟ್ಟಿದ್ದಾರೆ ಇವರು. ಏಳು ವರ್ಷ ಸಿದ್ದರಾಮಯ್ಯ ಅವರೇ ಸಿಎಂ ಆಗಿ ಇದ್ದಾರಲ್ಲವೇ? ಅಹಿಂದಾ ನಾಯಕರು, ಬೇರೆ ಸಮಾಜಗಳ ಮಾತಿರಲಿ, ಅಹಿಂದಾ ವರ್ಗಕ್ಕೆ ಅವರು ಏನು ಮಾಡಿದ್ದಾರೆ. ಇಷ್ಟು ದಿನ ಅಧಿಕಾರದಲ್ಲಿ ಇದ್ದರೂ ಇವರು ಇನ್ನೂ ಅಹಿಂದಾ ಅಹಿಂದಾ ಎಂದು ಹೇಳುತ್ತಿದ್ದಾರೆ. ಕೇವಲ ರಾಜಕೀಯಕ್ಕಾಗಿ ಸಿದ್ದರಾಮಯ್ಯ ಅವರು ಈ ಸಮುದಾಯವನ್ನು ಬಳಕೆ ಮಾಡಿಕೊಳ್ಳುತ್ತಿದ್ದಾರೆ ಎಂದು ಕೇಂದ್ರ ಸಚಿವ ಕುಮಾರಸ್ವಾಮಿ ಅವರು ಆಕ್ರೋಶ ವ್ಯಕ್ತಪಡಿಸಿದರು.

ರಾಹುಲ್ ಗಾಂಧಿ ಹೋದ ಕಡೆ, ಬಂದ ಕಡೆ ಜಾತಿಗಣತಿ ಮಾಡುತ್ತೇವೆ ಎಂದು ಹೇಳುತ್ತಿದ್ದಾರೆ. ಕೇಂದ್ರ ಸರಕಾರವೇ ಜಾತಿ ಗಣತಿಗೆ ತೀರ್ಮಾನ ಮಾಡಿದೆ. ಹೀಗಿದ್ದ ಮೇಲೆ ರಾಜ್ಯ ಸರಕಾರ ಕೇಂದ್ರದ ವರದಿ ಬರುವ ತನಕ ಕಾಯಲಿ. ರಾಜ್ಯದಲ್ಲಿ ಈಗಾಗಲೇ ಆಗಿರುವ ಜಾತಿಗಣತಿ ವರದಿ ದೋಷಪೂರಿತವಾಗಿದೆ. ಗಣತಿ ಆಗಿ ಹತ್ತು ವರ್ಷಗಳು ಮೀರಿದೆ. ರಾಜ್ಯದಲ್ಲಿ ಹಣಕ್ಕೆ ಬರವಿಲ್ಲ. ರಾಜ್ಯ ಸರಕಾರವೇ ಹೊಸದಾಗಿ ಇನ್ನೊಂದು ಜಾತಿ ಜನಗಣತಿ ಮಾಡಲಿ ಎಂದು ಹೆಚ್‌ ಡಿ ಕುಮಾರಸ್ವಾಮಿ ಹೇಳಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+