ಸಿದ್ದರಾಮಯ್ಯ ತವರು ಕ್ಷೇತ್ರದಿಂದ ಎಚ್‌ಡಿಕೆ ರಾಜ್ಯ ಪ್ರವಾಸ ಆರಂಭ!

Posted By: Gururaj
Subscribe to Oneindia Kannada
   ಮೈಸೂರು : ಸಿದ್ದರಾಮಯ್ಯ ತವರು ಕ್ಷೇತ್ರದಿಂದ ಕುಮಾರಸ್ವಾಮಿ ರಾಜ್ಯ ಪ್ರವಾಸ ಆರಂಭ | Oneindia Kannada

   ಬೆಂಗಳೂರು, ಅಕ್ಟೋಬರ್ 27 : ಜೆಡಿಎಸ್ ರಾಜ್ಯಾಧ್ಯಕ್ಷ ಎಚ್.ಡಿ.ಕುಮಾರಸ್ವಾಮಿ ಅವರ ರಾಜ್ಯ ಪ್ರವಾಸ ಮುಖ್ಯಮಂತ್ರಿ ಸಿದ್ದರಾಮಯ್ಯ ತವರು ಕ್ಷೇತ್ರದಿಂದ ಆರಂಭವಾಗಲಿದೆ. ನ.3ರಂದು ಕುಮಾರಸ್ವಾಮಿ ಅವರ ರಾಜ್ಯ ಪ್ರವಾಸಕ್ಕೆ ಮೈಸೂರಿನ ಚಾಮುಂಡೇಶ್ವರಿ ಕ್ಷೇತ್ರದಲ್ಲಿ ಚಾಲನೆ ಸಿಗಲಿದೆ.

   '2018ರ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧೆ'

   ಎಚ್.ಡಿ.ಕುಮಾರಸ್ವಾಮಿ ಅವರ ರಾಜ್ಯ ಪ್ರವಾಸದ ಮಾರ್ಗ ಅಂತಿವಾಗಿದೆ. ನ.3ರಂದು ಚಾಮುಂಡಿ ಬೆಟ್ಟದಲ್ಲಿ ವಿಶೇಷ ಪೂಜೆ ಸಲ್ಲಿಸಿ, ಬಳಿಕ ಚಾಮುಂಡೇಶ್ವರಿ ಕ್ಷೇತ್ರದಿಂದ ರಾಜ್ಯ ಪ್ರವಾಸ ಆರಂಭಿಸಲಿದ್ದಾರೆ. ಚಾಮುಂಡೇಶ್ವರಿ ಕ್ಷೇತ್ರದ ಹಾಲಿ ಶಾಸಕರು ಜೆಡಿಎಸ್‌ನ ಜಿ.ಟಿ.ದೇವೇಗೌಡ.

   ಕುಮಾರಸ್ವಾಮಿ ರಾಜ್ಯ ಪ್ರವಾಸಕ್ಕೆ ಹೈಟೆಕ್ ಬಸ್, ವಿಶೇಷತೆ ಏನು?

    JDS to kick off poll campaign from Chamundeshwari constituency

   ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ರಾಜಕೀಯ ಮರುಜೀವ ನೀಡಿದ ಕ್ಷೇತ್ರ ಚಾಮುಂಡೇಶ್ವರಿ. 2018ರ ಚುನಾವಣೆಗೆ ಚಾಮುಂಡೇಶ್ವರಿ ಕ್ಷೇತ್ರದಿಂದ ಸ್ಪರ್ಧಿಸುತ್ತೇನೆ ಎಂದು ಈಗಾಗಲೇ ಅವರು ಘೋಷಣೆ ಮಾಡಿದ್ದಾರೆ. ಆದ್ದರಿಂದ, ಅಲ್ಲಿಂದಲೇ ಕುಮಾರಸ್ವಾಮಿ ಪ್ರವಾಸ ಆರಂಭಿಸುತ್ತಿದ್ದಾರೆ.

   ತುಮಕೂರಿನಿಂದ ರಾಜ್ಯದೆಲ್ಲೆಡೆಗೆ 'ಮನೆ- ಮನೆಗೆ ಕುಮಾರಣ್ಣ'

   ಉತ್ತರ ಕರ್ನಾಟಕ ಪ್ರವಾಸ? : ಎಚ್.ಡಿ.ಕುಮಾರಸ್ವಾಮಿ ಅವರು ಉತ್ತರ ಕರ್ನಾಟಕ ಭಾಗದ ಪ್ರವಾಸ ಕೈಗೊಳ್ಳುವ ಬಗ್ಗೆ ಇನ್ನೂ ಅಂತಿಮ ನಿರ್ಧಾರವಾಗಿಲ್ಲ. ವಿಧಾನಪರಿಷತ್ ಸದಸ್ಯ ಬಸವರಾಜ ಹೊರಟ್ಟಿ, ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ದೇವರಹಿಪ್ಪರಗಿ ಕ್ಷೇತ್ರದ ಶಾಸಕ ಎ.ಎಸ್.ಪಾಟೀಲ ನಡಹಳ್ಳಿ ಉತ್ತರ ಕರ್ನಾಟಕದಲ್ಲಿ ಪ್ರವಾಸ ಮುನ್ನಡೆಸುವ ಸಾಧ್ಯತೆ ಇದೆ.

   ಶೀಘ್ರದಲ್ಲೇ ಜೆಡಿಎಸ್ ಸೇರುತ್ತೇನೆ : ಎ.ಎಸ್.ಪಾಟೀಲ ನಡಹಳ್ಳಿ

   ನನ್ನ ಸ್ನೇಹಿತ : 'ಎ.ಎಸ್.ಪಾಟೀಲ ನಡಹಳ್ಳಿ ನನ್ನ ಉತ್ತಮ ಸ್ನೇಹಿತ. ಮುಂದಿನ ವಿಧಾನಸಭೆ ಚುನಾವಣೆಯಲ್ಲಿ ಅವರು ಜೆಡಿಎಸ್ ಅಭ್ಯರ್ಥಿಯಾಗಿ ಸ್ಪರ್ಧಿಸಲಿದ್ದಾರೆ' ಎಂದು ಎಚ್.ಡಿ.ಕುಮಾರಸ್ವಾಮಿ ಸ್ಪಷ್ಟಪಡಿಸಿದರು.

   ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

   English summary
   Karnataka JDS president H.D.Kumaraswamy said, on November 3, 2017 he will start the campaign in Chamundeshwari constituency, Mysuru along with G.T.Deve Gowda who is the sitting MLA.

   Oneindia ಬ್ರೇಕಿಂಗ್ ನ್ಯೂಸ್,
   ತಾಜಾ ಸುದ್ದಿ ತಕ್ಷಣವೇ ಪಡೆಯಿರಿ