ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಗೆಲುವು?
ಬೆಂಗಳೂರು, ಜೂನ್ 04: 2024 ರ ಲೋಕಸಭಾ ಚುನಾವಣೆ ಹಿನ್ನೆಲೆ ಬಿಜೆಪಿ ಜೊತೆಗೆ ಮೈತ್ರಿ ಮಾಡಿಕೊಂಡಿರುವ ಜೆಡಿಎಸ್ ಗೆ ಬಿಜೆಪಿ ಹೈಕಮಾಂಡ್ ಮಂಡ್ಯ, ಹಾಸನ ಹಾಗೂ ಕೋಲಾರ ಲೋಕಸಭಾ ಕ್ಷೇತ್ರಗಳನ್ನ ಬಿಟ್ಟು ಕೊಟ್ಟಿದೆ. ಇಂದು(ಮಂಗಳವಾರ) ಚುನಾವಣಾ ಮತಎಣಿಕೆ ನಡೆಯುತ್ತಿದ್ದು, ಆರಂಭದಲ್ಲೇ ಮೂರು ಕ್ಷೇತ್ರದಲ್ಲೂ ಜೆಡಿಎಸ್ ನಾಯಕರು ಮುನ್ನಡೆಯನ್ನ ಸಾಧಿಸಿದ್ದಾರೆ.
ಮಂಡ್ಯ ಲೋಕಸಭಾ ಕ್ಷೇತ್ರದಲ್ಲಿ ಎನ್ ಡಿ ಎ ಅಭ್ಯರ್ಥಿಯಾಗಿ ಹೆಚ್ ಡಿ ಕುಮಾರಸ್ವಾಮಿ ಸ್ಪರ್ಧೆ ಮಾಡಿದ್ರೆ, ಇತ್ತ ಕಾಂಗ್ರೆಸ್ ಪಕ್ಷದಿಂದ ಸ್ಟಾರ್ ಚಂದ್ರು ಅವರು ಕಣದಲ್ಲಿದ್ದಾರೆ. ಈಗಾಗಲೇ ಮತಎಣಿಕೆ ನಡೆಯುತ್ತಿದ್ದು, ಅಂಚೆ ಮತದಾನ ಹಾಗೂ ಮೊದಲ ಸುತ್ತಿನ ಮತ ಎಣಿಕೆಯಲ್ಲಿ ಮಾಜಿ ಮುಖ್ಯಮಂತ್ರಿ ಹೆಚ್ ಡಿ ಕುಮಾರಸ್ವಾಮಿ ಅವರು ಮುನ್ನಡೆಯನ್ನ ಸಾಧಿಸಿದ್ದಾರೆ.

ಮಂಡ್ಯ ಲೋಕಸಭಾ ಕ್ಷೇತ್ರ ದಳಪತಿಗಳಿಗೆ ಪ್ರತಿಷ್ಠೆಯಾಗಿದ್ದು ಬರೋಬ್ಬರಿ 1,64, 054 ಮತಗಳನ್ನ ಪಡೆದುಕೊಂಡಿದ್ದು, ಮೊದಲ ಸುತ್ತಿನ ಮತ ಎಣಿಕೆಯಿಂದಲೂ ಕುಮಾರಸ್ವಾಮಿ ಅವರು ಮುನ್ನಡೆಯನ್ನ ಸಾಧಿಸಿದ್ದಾರೆ. ಕಾಂಗ್ರೆಸ್ ಅಭ್ಯರ್ಥಿ ಸ್ಟಾರ್ ಚಂದ್ರು ಆರಂಭದಿಂದಲೂ ಹಿನ್ನಡೆಯನ್ನ ಅನುಭವಿಸಿದ್ದಾರೆ.
ಇನ್ನೂ ಹಾಸನ ಲೋಕಸಭಾ ಕ್ಷೇತ್ರದ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್ ರೇವಣ್ಣ ಹಾಗೂ ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ ನಡುವೆ ತೀವ್ರ ಜಟಾಪಟಿ ನಡೆಯುತ್ತಿದ್ದು, ಮೈತ್ರಿ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ - 314523
ಕಾಂಗ್ರೆಸ್ ಅಭ್ಯರ್ಥಿ ಶ್ರೇಯಸ್‌ಪಟೇಲ್ - 312531 ಮತಗಳನ್ನ ಪಡೆದಿದ್ದಾರೆ. 1992 ಮತಗಳಿಂದ ಪ್ರಜ್ವಲ್ ಮುನ್ನಡೆ ಸಾಧಿಸಿದ್ದಾರೆ.
ಕಾಂಗ್ರೆಸ್ ನಾಯಕರ ಪ್ರತಿಷ್ಠೆಯಾಗಿರು ಕೋಲಾರ ಲೋಕಸಭಾ ಕ್ಷೇತ್ರದಲ್ಲಿ ಜೆಡಿಎಸ್ ಅಭ್ಯರ್ಥಿ ಮಲ್ಲೇಶ್ ಬಾಬು ಆರಂಭದಿಂದಲೂ ಮುನ್ನಡೆ ಸಾಧಿಸಿದ್ದು, ಕಾಂಗ್ರೆಸ್ ನಾಯಕರ ಭದ್ರಕೋಟೆಯಾಗಿದ್ದ ಕೋಲಾರ ಕ್ಷೇತ್ರದಲ್ಲಿ ಕೈ ನಾಯಕರ ಒಳಜಗಳವೇ ಎನ್ ಡಿ ಎ ಅಭ್ಯರ್ಥಿಗೆ ವರದಾನವಾಗಿದ್ದು, ಬಹುತೇಕ ಕೋಲಾರದಲ್ಲಿ ಮಲ್ಲೇಶ್ ಬಾಬು ಗೆಲುವು ಸಾಧಿಸಲಿದ್ದಾರೆ.












Click it and Unblock the Notifications