ಕರ್ನಾಟಕ ಚುನಾವಣೆ : ಕಾಂಗ್ರೆಸ್ ಅಥವ ಜೆಡಿಎಸ್ ಜೊತೆ ಜೆಡಿಯು ಮೈತ್ರಿ
Recommended Video

ಬೆಂಗಳೂರು, ಮಾರ್ಚ್ 31 : 'ಕರ್ನಾಟಕದ ಚುನಾವಣೆಯಲ್ಲಿ ಜೆಡಿಎಸ್ ಅಥವ ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳುವ ಕುರಿತು ಎರಡು ದಿನದಲ್ಲಿ ತೀರ್ಮಾನ ಕೈಗೊಳ್ಳಲಾಗುತ್ತದೆ' ಎಂದು ಜೆಡಿಯು ಮುಖ್ಯಸ್ಥ ಶರದ್ ಯಾದವ್ ಹೇಳಿದ್ದಾರೆ.
ಶರದ್ ಯಾದವ್ ಶುಕ್ರವಾರ ಬೆಂಗಳೂರಿನಲ್ಲಿ ಪತ್ರಿಕಾಗೋಷ್ಠಿ ನಡೆಸಿದರು. 'ಮೈತ್ರಿ ಬಗ್ಗೆ ಚರ್ಚೆ ನಡೆಸಲು ಬೆಂಗಳೂರಿಗೆ ಬಂದಿದ್ದೇನೆ. ಎರಡು ದಿನ ನಗರದಲ್ಲಿಯೇ ಇದ್ದು, ಕಾರ್ಯಕರ್ತರ ಜೊತೆ ಚರ್ಚಿಸಿ ಅಂತಿಮ ತೀರ್ಮಾನ ಕೈಗೊಳ್ಳುತ್ತೆನೆ' ಎಂದು ಹೇಳಿದರು.
'ಕರ್ನಾಟಕದಲ್ಲಿ ನಮ್ಮ ಪಕ್ಷದ ಕಾರ್ಯಕರ್ತರು ಇದ್ದಾರೆ. ಮುಖ್ಯಮಂತ್ರಿಯಾಗಿದ್ದ ರಾಮಕೃಷ್ಣ ಹೆಗೆಡೆ, ಜೆ.ಎಚ್.ಪಟೇಲ್ ನಮ್ಮ ಪಕ್ಷದವರು. ಈ ಬಾರಿಯ ಕರ್ನಾಟಕದ ಚುನಾವಣೆ ಮೇಲೆ ದೇಶವೇ ಕಣ್ಣಿಟ್ಟಿದೆ. ಫಲಿತಾಂಶಕ್ಕಾಗಿ ಜನರು ಕುತೂಹಲದಿಂದ ಕಾಯುತ್ತಿದ್ದಾರೆ' ಎಂದರು.

'ಕರ್ನಾಟಕದ ವಿಧಾನಸಭೆ ಚುನಾವಣೆ 2019ರ ಲೋಸಭೆ ಚುನಾವಣೆಗೆ ಸೆಮಿ ಫೈನಲ್ ಇದ್ದಂತೆ. ಇಲ್ಲಿ ಬಿಜೆಪಿಯನ್ನು ಸೋಲಿಸುವುದೇ ನಮ್ಮ ಗುರಿ. ಚುನಾವಣೆಯಲ್ಲಿ ಕಾಂಗ್ರೆಸ್ ಅಥವ ಜೆಡಿಎಸ್ ಜೊತೆ ಹೊಂದಾಣಿಕೆ ಮಾಡಿಕೊಳ್ಳಬೇಕೇ? ಎಂಬ ಕುರಿತು ಚರ್ಚೆ ನಡೆಸುತ್ತಿದ್ದೇವೆ' ಎಂದು ತಿಳಿಸಿದರು.
'ಜೆಡಿಎಸ್ ಪಕ್ಷ ಯಾರಿಗೆ ಸೇರಿದ್ದು ಎಂಬ ಬಗ್ಗೆ ಸೋಮವಾರ ನ್ಯಾಯಾಲಯದಲ್ಲಿ ತೀರ್ಪು ಪ್ರಕಟವಾಗಲಿದೆ. ಬಳಿಕ ಹೊಸ ಚಿನ್ಹೆಯಡಿ ಕರ್ನಾಟಕದಲ್ಲಿ ಪ್ರಚಾರ ಕಾರ್ಯವನ್ನು ಆರಂಭಿಸಲಾಗುತ್ತದೆ' ಎಂದು ಶರದ್ ಯಾದವ್ ಹೇಳಿದರು.
ಮತ್ತೊಂದು ಕಡೆ ನಿತೀಶ್ ಕುಮಾರ್ ನೇತೃತ್ವದ ಜೆಡಿಯು ಪಕ್ಷ ಕರ್ನಾಟಕದಲ್ಲಿ ಹೊಸ ಕಚೇರಿಯನ್ನು ತೆರೆದಿದೆ. ವಿಲ್ಸನ್ ಗಾರ್ಡನ್ನಲ್ಲಿ ನೂತನ ಕಚೇರಿಯನ್ನು ಪಕ್ಷದ ರಾಜ್ಯಾಧ್ಯಕ್ಷ ಮಹಿಮಾ ಪಟೇಲ್ ಶುಕ್ರವಾರ ಉದ್ಗಾಟಿಸಿದರು.
-
ಹಿಂದುಳಿದ, ದುರ್ಬಲ ವರ್ಗದ ಮಕ್ಕಳಿಗೆ ಖಾಸಗಿ ಅನುದಾನ ರಹಿತ ಶಾಲೆಗಳಲ್ಲಿ ಶೇ. 25 ರಷ್ಟು ಉಚಿತ ಪ್ರವೇಶಕ್ಕೆ ಅರ್ಜಿ ಆಹ್ವಾನ -
ನಟಿ ನೋರಾ ಫತೇಹಿ ವೃತ್ತಿಜೀವನಕ್ಕೆ ಕುತ್ತು ತಂದ 'ಸೆರಗ ಸರ್ಸೆ' ವಿವಾದ: ಗಡಿಪಾರು ಮಾಡುವಂತೆ ಗೃಹ ಸಚಿವಾಲಯಕ್ಕೆ ದೂರು -
Bengaluru: ಬಿಡಿಎಗೆ 50ರ ಸಂಭ್ರಮ; ಹೊಸ ಲೋಗೋ, ಟ್ಯಾಗ್ಲೈನ್ ವಿನ್ಯಾಸ ಮಾಡಿ 1 ಲಕ್ಷ ರೂ. ಬಹುಮಾನ ಗೆಲ್ಲಿ -
ಮಾರ್ಚ್ 23ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Karnataka Weather: ಮಾ.23ರಿಂದ 28ರವರೆಗೆ 10ಕ್ಕೂ ಅಧಿಕ ಜಿಲ್ಲೆಗಳಿಗೆ ಮಳೆ ಮುನ್ಸೂಚನೆ -
'ಬೆಂಗಳೂರಿನ ಬಸವನಗುಡಿಯಿಂದ ಬೆಳ್ಳಂದೂರಿಗೆ ಹೋಗಿ ದೊಡ್ಡ ತಪ್ಪು ಮಾಡಿಬಿಟ್ಟೆ': ಅಳಲು ತೋಡಿಕೊಂಡ ಕನ್ನಡಿಗ, ಭಾರೀ ವೈರಲ್ -
Pink Line Metro: ಏಪ್ರಿಲ್ನಲ್ಲಿ ಪರೀಕ್ಷೆ ಮುಕ್ತಾಯ, ಮೇ ತಿಂಗಳಲ್ಲಿ ಗುಲಾಬಿ ಮಾರ್ಗದಲ್ಲಿ ಸಂಚಾರ -
Video: ಲ್ಯಾಂಬೋರ್ಗಿನಿ ಸ್ಟಂಟ್ ಕೇಸ್: ಮುತ್ತಪ್ಪ ರೈ ಪುತ್ರ ರಿಕ್ಕಿ ರೈಗೆ ಪೊಲೀಸರಿಂದ ನೋಟಿಸ್ -
ಮೈಸೂರು, ಬೆಂಗಳೂರು, ವಿಜಯಪುರ ರೈಲು ಪ್ರಯಾಣಿಕರೇ ಗಮನಕ್ಕೆ; ರೈಲುಗಳ ಸಂಚಾರ ಭಾಗಶಃ ರದ್ದು -
NWKRTC ಬಸ್ಗಳಿಗೆ ಟ್ರ್ಯಾಕಿಂಗ್ ಸಿಸ್ಟಮ್ ಅಳವಡಿಕೆಗೆ 'ಆಡಿಟ್' ಬಿಸಿ: ಜಗದೀಶ್ ಶೆಟ್ಟರ್ಗೆ ನಿತಿನ್ ಗಡ್ಕರಿ ಪತ್ರ -
Gold Rate Today: ಸತತ ನಾಲ್ಕನೇ ದಿನವು ಚಿನ್ನ-ಬೆಳ್ಳಿ ದರ ಭರ್ಜರಿ ಇಳಿಕೆ, ಇಂದಿನ ದರವೆಷ್ಟು? -
ಆರ್ಸಿಬಿಗೆ ಚಾರ್ಟರ್ಡ್ ಫ್ಲೈಟ್ ಸೌಲಭ್ಯದ ಬೇಡಿಕೆ ಆರೋಪ: ಒಂದೇ ಎಮೋಜಿ ಹಾಕಿ ಕಿಂಗ್ ಕೊಹ್ಲಿ ಸಷ್ಟನೆ












Click it and Unblock the Notifications