ಜ್ಯೂನಿಯರ್ ಇಂಜಿನಿಯರ್ ನೇಮಕಾತಿ ಪರೀಕ್ಷೆಯಲ್ಲಿ ಭಾರೀ ಗೋಲ್ ಮಾಲ್ !
ಬೆಂಗಳೂರು, ಮೇ. 11: ಪಿಎಸ್ಐ ನೇಮಕಾತಿ ಪರೀಕ್ಷೆ ಅಕ್ರಮದ ತನಿಖೆ ಈ ಹಿಂದೆ ನಡೆದಿದ್ದ ಲೋಕೋಪಯೋಗಿ ಇಲಾಖೆಯ ಜೆಇಎಇ ಪರೀಕ್ಷೆಯ ಅಕ್ರಮದ ಮರು ತನಿಖೆಗೆ ನಾಂದಿ ಹಾಡಿದೆ.
ಪಿಎಸ್ಐ ನೇಮಕಾತಿ ಪರೀಕ್ಷೆ ಸಂಬಂಧ ತನಿಖೆ ನಡೆಸಿದ ಸಿಐಡಿ ಅಧಿಕಾರಿಗಳು ಕಿಂಗ್ ಪಿನ್ ಮಂಜುನಾಥ್ ಮೇಳಕುಂದಿ ಮತ್ತು ಆರ್. ಡಿ. ಪಾಟೀಲ್ ಲೋಕೋಪಯೋಗಿ ಇಲಾಖೆ ನಡೆಸಿದ ಜೆಇಎಇ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವುದನ್ನು ಪತ್ತೆ ಮಾಡಿದ್ದರು.
ಈ ಅಕ್ರಮಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರಿನ ಅನ್ನಪೂರ್ಣೇಶ್ವರಿ ನಗರ ಪೊಲೀಸ್ ಠಾಣೆಯಲ್ಲಿ ಕೇಸು ದಾಖಲಾಗಿದ್ದು, ಪ್ರಕರಣವನ್ನು ತನಿಖೆ ನಡೆಸಲು ಪೊಲೀಸರು ಮುಂದಾಗಿದ್ದಾರೆ.

ಪಾಟೀಲ್ ವಶಕ್ಕೆ: ಪಿಡ್ಲೂಡಿ ನಡೆಸಿದ ಜೆಇಎಇ ಪರೀಕ್ಷೆಯ ಅಕ್ರಮಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿ ಆರ್. ಡಿ. ಪಾಟೀಲ್‌ನನ್ನು ಅನ್ನಪೂಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಲಿದ್ದಾರೆ. ಸಿಐಡಿ ಅಧಿಕಾರಿಗಳ ತನಿಖಾ ವರದಿಯಲ್ಲಿ ಜೆಇಎಇ ಪರೀಕ್ಷೆಯಲ್ಲಿ ಅಕ್ರಮ ಎಸಗಿರುವ ಬಗ್ಗೆ ಉಲ್ಲೇಖಿಸಿದ್ದಾರೆ.

ಈ ವರದಿ ಹಿನ್ನೆಲೆಯಲ್ಲಿ ಜೆಇಎಇ ಪರೀಕ್ಷಾ ಅಕ್ರಮದ ಅರೋಪಿಯಾಗಿರುವ ಪಾಟೀಲ್‌ನನ್ನು ಅನ್ನಪೂರ್ಣೇಶ್ವರಿ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಪಿಎಸ್ಐ ಅಕ್ರಮದ ಕಿಂಗ್ ಪಿನ್ ಆರ್. ಡಿ. ಪಾಟೀಲ್‌ನನ್ನು ಬಾಡಿ ವಾರಂಟ್ ಮೇಲೆ ವಶಕ್ಕೆ ಪಡೆದಿದ್ದಾರೆ.

ಈಗಾಗಲೇ ಮಂಜುನಾಥ್ ಮೇಳಕುಂದಿಯನ್ನು ಅನ್ನಪೂರ್ಣೇಶ್ವರಿ ನಗರ ಪೊಲೀಸರು ವಶಕ್ಕೆ ಪಡೆದು ವಿಚಾರಣೆ ನಡೆಸಿದ್ದರು. ಇನ್ನು ಈ ಪ್ರಕರಣದಲ್ಲಿ ಈಗಾಗಲೇ 16 ಆರೋಪಿಗಳನ್ನು ಬಂಧಿಸಲಾಗಿದ್ದು, 17ನೇ ಆರೋಪಿ ಪಾಟೀಲ್‌ನನ್ನು ನ್ಯಾಯಾಧೀಶರ ಮುಂದೆ ಹಾಜರುಪಡಿಸಿ ಪೊಲೀಸ್ ವಶಕ್ಕೆ ಪಡೆಯಲಿದ್ದಾರೆ.












Click it and Unblock the Notifications