ಕರ್ನಾಟಕದಲ್ಲಿ ಜಿಂದಾಲ್ ₹1.20 ಕೋಟಿ ಹೂಡಿಕೆ: ಈ 3 ಜಿಲ್ಲೆಗಳಿಗೆ ಇಂಡಸ್ಟ್ರಿ ಬೂಸ್ಟ್, ಯಾವುವು?

ಬೆಂಗಳೂರು: ಉಕ್ಕು ತಯಾರಿಕೆ ಮತ್ತು ಇತರ ವಲಯಗಳಲ್ಲಿ ಮುಂಚೂಣಿಯಲ್ಲಿರುವ 'ಜಿಂದಾಲ್' ಸಮೂಹದಿಂದ ರಾಜ್ಯದ ಕೆಲವು ಜಿಲ್ಲೆಗಳಲ್ಲಿ ಕೈಗಾರಿಕೆಯಲ್ಲಿ ಮಹತ್ವದ ಅಭಿವೃದ್ಧಿಯಾಗಿದೆ. ಇದೇ ಕಂಪನಿಯು ಭವಿಷ್ಯದಲ್ಲಿ ರಾಜ್ಯದಲ್ಲಿ 1.20 ಲಕ್ಷ ಕೋಟಿ ಹೂಡಿಕೆ ಮಾಡಲಿದೆ. ಇನ್ನೂ ರಾಜ್ಯದ ಪ್ರಮುಖ ಮೂರು ಜಿಲ್ಲೆಗಳಲ್ಲಿ ಬಿಸ್ಲೇರಿ ಕಂಪನಿ, ರೇಮಂಡ್ ಕಂಪನಿಗಳು ತಮ್ಮ ಘಟಕ ಸ್ಥಾಪಿಸುವ ನಿರೀಕ್ಷೆಗಳಿವೆ.

ರಾಜ್ಯದ ಕೈಗಾರಿಕಾ ವಲಯಕ್ಕೆ ಹೆಚ್ಚಿನ ಬಂಡವಾಳ ಆಕರ್ಷಿಸುವ ಸಲುವಾಗಿ ಸೋಮವಾರ ಮುಂಬೈಗೆ ತರಳಿದ್ದ ಬೃಹತ್ ಮತ್ತು ಮಧ್ಯಮ ಕೈಗಾರಿಕೆ ಸಚಿವ ಎಂಬಿ ಪಾಟೀಲ್ ಅವರು ಎರಡು ದಿನ ಅಲ್ಲಿ ರೋಡ್ ಶೋ ನಡೆಸಿದ್ದಾರೆ. ಅಲ್ಲಿ ಎಲ್ ಅಂಡ್ ಟಿ, ಬಿಸ್ಲೆರಿ, ರೇಮಂಡ್ ಟಾರ್ಕ್-ಹೀರಾನಂದಾನಿ, ಸನೋಫಿ ಹೆಲ್ತ್, ಮ್ಯಾಗ್ನಂ, ಬಾಲು ಫೋರ್ಜ್ ಮತ್ತು ಮ್ಯಾಕ್ಸ್ ಏರೋಸ್ಪೇಸ್ ಸೇರಿದಂತೆ ಇತರ 10 ಪ್ರಮುಖ ಕಂಪನಿಗಳೊಂದಿಗೆ ಸಚಿವರು ಮಾತುಕತೆ ನಡೆಸಿದ್ದಾರೆ. ಫಲವಾಗಿ ವಿವಿಧ ಕಂಪನಿಗಳು ರಾಜ್ಯದಲ್ಲಿ ಹೂಡಿಕೆಗೆ ಆಸಕ್ತಿ ತೋರಿವೆ ಎಂದು ಎಂಬಿ ಪಾಟೀಲರು ತಿಳಿಸಿದ್ದಾರೆ.

Jindal

ರಾಜ್ಯದಲ್ಲಿ 1.20 ಲಕ್ಷ ಕೋಟಿ ಹೂಡಿಕೆ

ಜಿಂದಾಲ್ ಅಧ್ಯಕ್ಷ ಸಜ್ಜನ್ ಜಿಂದಾಲ್ ಮತ್ತು ಜೆಎಂಡಿ ಜಯಂತ್ ಆಚಾರ್ಯ ಅವರ ಜತೆ ಸಚಿವರು ಸಭೆ ನಡೆಸಿದರು. ಬಳಿಕ ಮಾತನಾಡಿ ರಾಜ್ಯದಲ್ಲಿ ಮುಂದಿನ 05 ವರ್ಷಗಳಲ್ಲಿ 1.20 ಲಕ್ಷ ಕೋಟಿ ರೂಪಾಯಿ ಬಂಡವಾಳ ಹೂಡಿಕೆ ಒಪ್ಪಿದ್ದಾರೆಂದು ಸಚಿವರು ಮಾಹಿತಿ ನೀಡಿದರು.

ಉಕ್ಕು ಉತ್ಪಾದನೆಯಿಂದ ಹಿಡಿದು ಬಣ್ಣದ ತಯಾರಿಕೆವರೆಗೆ ನಾನಾ ವಲಯಗಳಲ್ಲಿ ಜಿಂದಾಲ್ ತನ್ನ ಆದ ಕೊಡುಗೆ ನೀಡಿದೆ. ಜಿಂದಾಲ್ ಸ್ಟೀಲ್ ವರ್ಕ್ಸ್ ಕಂಪನಿಯು ಬಂಡವಾಳ ಹೂಡಿಕೆಗೆ ರಾಜ್ಯವನ್ನು ಅಚ್ಚುಮೆಚ್ಚಿನ ತಾಣವೆಂದು ನಂಬಿದೆ. ಕಳೆದ ಮೂವತ್ತು ವರ್ಷದಲ್ಲಿ ಕಂಪನಿಯು ಕರ್ನಾಟಕದಲ್ಲಿ ಬರೋಬ್ಬರಿ 1.30 ಲಕ್ಷ ಕೋಟಿ ರೂ. ಬಂಡವಾಳ ಹೂಡಿಕೆ ಮಾಡಿದೆ. ರಾಜ್ಯದ ಬಳ್ಳಾರಿ ಮತ್ತು ವಿಜಯನಗರ ವ್ಯಾಪ್ತಿಯಲ್ಲಿ ಕೈಗಾರಿಕಾ ಅಭಿವೃದ್ಧಿಗೆ ಕಾರಣವಾಗಿದೆ. ಅದರ ಮುಂದಿನ ಹಂತದ ಹೂಡಿಕೆ ಆಶಾದಾಯಕವಾಗಿದ್ದು, ಸರ್ಕಾರ ಕಂಪನಿಗೆ ಅಗತ್ಯ ಎಲ್ಲ ನೆರವು ಒದಗಿಸಲಿದೆ ಎಂದು ಅವರು ವಿವರಿಸಿದರು.

ಕುಡಿಯುವ ನೀರಿನ ಬಾಟಲ್ ತಯಾರಿಕೆಗೆ ಹೆಸರಾದ ಬಿಸ್ಲೆರಿ ಕಂಪನಿಯು ರಾಜ್ಯದಲ್ಲಿ ಹೆಚ್ಚಿನ ಹೂಡಿಕೆ ಮತ್ತು ತನ್ನ ಸಾಮರ್ಥ್ಯ ಹೆಚ್ಚಳಕ್ಕೆ ಆದ್ಯತೆ ನೀಡಲಿದೆ. ಎಲ್ಲವು ಅಂದುಕೊಂಡಂತಾದರೆ ರಾಜ್ಯದಲ್ಲಿ 2 ಸಾವಿರ ಉದ್ಯೋಗಗಳು ಸೃಷ್ಟಿಯಾಗಲಿವೆ. ಇದನ್ನು ಗಮನದಲ್ಲಿ ಇಟ್ಟುಕೊಂಡು, ನೀರಿನ ಸಮೃದ್ಧಿ ಇರುವ ವಿಜಯಪುರ ಅಥವಾ ಚಾಮರಾಜನಗರ ಜಿಲ್ಲೆ ಹೂಡಿಕೆಗೆ ಅಥವಾ ಘಟಕ ಸ್ಥಾಪನೆಗೆ ಆಯ್ದುಕೊಳ್ಳುವಂತೆ ಮನವಿ ಮಾಡಿದ್ದೇವೆ ಎಂದರು.

ಬಳ್ಳಾರಿ ಅಥವಾ ವಿಜಯಪುರಕ್ಕೆ ರೇಮಂಡ್ ಕಂಪನಿ?

ಜೀನ್ಸ್ ಬಟ್ಟೆ ಉತ್ಪಾದನೆಗೆ ಮನಸ್ಸು ಮಾಡಿರುವ ರೇಮಂಡ್ ಲೈಫ್ ಸ್ಟೈಲ್ ಲಿಮಿಟೆಡ್ ಕಂಪನಿಗೆ ಕಚ್ಚಾವಸ್ತು ಮತ್ತು ಮಾರುಕಟ್ಟೆ ಅನುಕೂಲಗಳ ಹಿನ್ನೆಲೆಯಲ್ಲಿ ಕೈಗಾರಿಕೆ ಅಭಿವೃದ್ಧಿ ತಾಣವಾಗಿ ಬಳ್ಳಾರಿ ಇಲ್ಲವೇ ವಿಜಯಪುರ ಆಯ್ಕೆ ಮಾಡಿಕೊಳ್ಳಬೇಕು. ಅಲ್ಲಿ ಹೂಡಿಕೆ ಮಾಡುವಂತೆ ಮನವಿ ಮಾಡಿದ್ದೇವೆ ಎಂದು ಹೇಳಿದ್ದಾರೆ.

ಇನ್ನೂ ಎಲ್ ಅಂಡ್ ಟಿ ಕಂಪನಿಯು ಔದ್ಯಮಿಕ ರೋಬೋಟಿಕ್ಸ್ ವಲಯಕ್ಕೆ ಪ್ರವೇಶಿಸುವ ಉತ್ಸಾಹದಲ್ಲಿದೆ. ಬೆಂಗಳೂರಿನಲ್ಲಿ ಜಾಗತಿಕ ಮಾರುಕಟ್ಟೆಗೆ ಬೇಕಾಗುವ ಚಿಪ್ ವಿನ್ಯಾಸ ಸ್ಥಾವರವನ್ನು ಸ್ಥಾಪಿಸುವ ಚಿಂತನೆಯಲ್ಲಿದೆ. ಜತೆಗೆ ಅದು ಎಲೆಕ್ಟ್ರಾನಿಕ್ಸ್ ವಲಯಕ್ಕೆಂದೇ ಪ್ರತ್ಯೇಕ ಸಂಶೋಧನಾ ಮತ್ತು ನಾವೀನ್ಯತಾ ಪಾರ್ಕ್ ಸ್ಥಾಪಿಸುವ ಆಲೋಚನೆ ಕಂಪನಿಯ ಪ್ರತಿನಿಧಿಗಳು ಹಂಚಿಕೊಂಡಿದ್ದಾರೆ. ಕಂಪನಿಯು ಇದರ ಬಗ್ಗೆ ತೀರ್ಮಾನಿಸಿದರೆ ಅದಕ್ಕೆ ಪೂರಕವಾಗಿ ಹೈವೋಲ್ಟೇಜ್ ಪರೀಕ್ಷಾ ಮತ್ತು ಎಲೆಕ್ಟ್ರಾನಿಕ್ ಟೆಸ್ಟಿಂಗ್ ಸೌಲಭ್ಯಕ್ಕೂ ಸರಕಾರ ನೆರವು ನೀಡಲಿದೆ ಎಂದು ತಿಳಿಸಿದ್ದಾರೆ.

ಟಾರ್ಕ್ ಸೆಮಿಕಂಡಕ್ಟರ್ಸ್ ನಿಂದ ಭಾರೀ ಹೂಡಿಕೆ ನಿರೀಕ್ಷೆ

ಟಾರ್ಕ್ ಸೆಮಿಕಂಡಕ್ಟರ್ಸ್ ಸಂಸ್ಥೆಯು ರಾಜ್ಯದಲ್ಲಿ ಸೆಮಿಕಂಡಕ್ಟರ್, ಡೇಟಾ ಸೆಂಟರ್ ಮತ್ತು ಎಐ ಕ್ಷೇತ್ರಗಳಲ್ಲಿ ಹೂಡಿಕೆ ಮಾಡುವ ಆಸಕ್ತಿ ತೋರಿಸಿದೆ. ಜತೆಗೆ ನಮ್ಮಲ್ಲಿ ಕಾಂಪೌಂಡ್ ಸೆಮಿಕಂಡಕ್ಟರ್ ಫ್ಯಾಬ್ ಸ್ಥಾವರ ಸ್ಥಾಪಿಸಲು ಕಂಪನಿಗೆ ಮನಸ್ಸಿದೆ. ಎಫ್ಎಂಸಿಜಿ ವಲಯದಲ್ಲಿ ಹೆಸರು ಮಾಡಿರುವ ಟಿಸಿಪಿಎಲ್ ಪ್ಯಾಕೇಜಿಂಗ್ ಲಿಮಿಟೆಡ್ ರಾಜ್ಯದಲ್ಲಿ ಫಿಲ್ಮ್ಸ್ ಮತ್ತು ಲ್ಯಾಮಿನೇಟ್ಸ್ ವಲಯದಲ್ಲಿ ನೆಲೆಯೂರಲು ನೋಡುತ್ತಿದೆ ಎಂದು ಅವರು ತಿಳಿಸಿದ್ದಾರೆ.

ಎಲ್ಲ ಹೂಡಿಕೆದಾರರ ಜತೆಗೂ ಹೆಚ್ಚಿನ ಹೂಡಿಕೆ, ಉತ್ಪಾದನೆ, ಉದ್ಯೋಗ ಸೃಷ್ಟಿ, ಸಂಶೋಧನೆ ಮತ್ತು ಅಭಿವೃದ್ಧಿ, ಡೇಟಾ ಸೆಂಟರುಗಳ ಸ್ಥಾಪನೆ, ನೀರು ಮತ್ತು ಭೂಮಿಯ ಲಭ್ಯತೆ ಇವುಗಳಿಗೆ ಒತ್ತು ಕೊಟ್ಟು ಸಚಿವರು ಮಾತುಕತೆ ನಡೆಸಿದರು. ಈ ಮಹತ್ವದ ಸಭೆಯಲ್ಲಿ ಟಾರ್ಕ್ ಕಂಪನಿಯ ವ್ಯವಸ್ಥಾಪಕ ನಿರ್ದೇಶಕ ಡಾ.ನಿರಂಜನ್ ಹೀರಾನಂದಾನಿ, ಟಿಸಿಪಿಎಲ್ ಅಧ್ಯಕ್ಷ ಸಾಕೇತ್ ಕನೋರಿಯಾ, ಬಿಸ್ಲೆರಿ ಸಿಇಒ ಆ್ಯಂಜೆಲೋ ಜಾರ್ಜ್, ರೇಮಂಡ್ ಪರವಾಗಿ ಸಮೂಹದ ನೂತನ ಉಪಕ್ರಮಗಳ ಮುಖ್ಯಸ್ಥ ಗಿರೀಶ್ ಅಡ್ವಾಣಿ, ಎಲ್ ಅಂಡ್ ಟಿ ಹಿರಿಯ ಉಪಾಧ್ಯಕ್ಷ ಅರುಣ್ ರಾಮಚಂದ್ರಾನಿ, ಸನೋಫಿ ಮುಖ್ಯಸ್ಥರಾದ ವಿರಳ್ ಷಾ ಮತ್ತು ರುಚಿರ್ ಷಾ ಭಾಗವಹಿಸಿದ್ದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+