ಜಿಂದಾಲ್ ವಿವಾದ : ಜೂ.14ರಿಂದ ಬಿಜೆಪಿ ಅಹೋರಾತ್ರಿ ಧರಣಿ

ಬೆಂಗಳೂರು, ಜೂನ್ 10 : ಜಿಂದಾಲ್‌ ಕಂಪನಿಗೆ 3,667 ಎಕರೆ ಭೂಮಿಯನ್ನು ನೀಡುವ ವಿಚಾರ ವಿವಾದಕ್ಕೆ ಕಾರಣವಾಗಿದೆ. ಪ್ರತಿಪಕ್ಷ ಬಿಜೆಪಿ ಈ ವಿಚಾರ ಮುಂದಿಟ್ಟುಕೊಂಡು ಕಾಂಗ್ರೆಸ್-ಜೆಡಿಎಸ್ ಸಮ್ಮಿಶ್ರ ಸರ್ಕಾರದ ವಿರುದ್ಧ ಅಹೋರಾತ್ರಿ ಧರಣಿ ಆರಂಭಿಸಲಿದೆ.

ಸೋಮವಾರ ಮಾಜಿ ಸಚಿವ ಆರ್.ಅಶೋಕ ಅವರು ಈ ಕುರಿತು ಮಾಹಿತಿ ನೀಡಿದರು. 'ಜೂನ್ 14 ರಿಂದ 16ರ ತನಕ ಬೆಂಗಳೂರಿನಲ್ಲಿ ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಅಹೋರಾತ್ರಿ ಧರಣಿ ನಡೆಯಲಿದೆ' ಎಂದರು.

Jindal row : BJP to stage day long protest from June 14 to 16

'ಶಾಸಕರು, ವಿಧಾನ ಪರಿಷತ್ ಸದಸ್ಯರು ಮತ್ತು ಸಂಸದರು ಅಹೋರಾತ್ರಿ ಧರಣಿಯಲ್ಲಿ ಪಾಲ್ಗೊಳ್ಳಲಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿಗಳು ಧರಣಿಗೆ ಸ್ಪಂದಿಸದಿದ್ದರೆ ಜೂನ್ 16ರಂದು ಮುಖ್ಯಮಂತ್ರಿಗಳ ಮನೆಗೆ ಮುತ್ತಿಗೆ ಹಾಕಲು ಬಿಜೆಪಿ ತೀರ್ಮಾನಿಸಿದೆ' ಎಂದು ಅಶೋಕ ಹೇಳಿದರು.

ಕರ್ನಾಟಕ ಸರ್ಕಾರ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಮತ್ತು ಕರೆಕುಪ್ಪ ಗ್ರಾಮಗಳಲ್ಲಿ 2001 ಎಕರೆ ಹಾಗೂ ಸಂಡೂರು ತಾಲೂಕಿನ ಮುಸೇನಾಯಕನಹಳ್ಳಿ ಮತ್ತು ಯರಬನಹಳ್ಳಿ ಗ್ರಾಮಗಳಲ್ಲಿ 1,666 ಎಕರೆ ಸೇರಿ ಒಟ್ಟು 3,667 ಎಕರೆ ಭೂಮಿಯನ್ನು ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಕ್ರಯ ಪತ್ರ ಮಾಡಿಕೊಡಲು ಮುಂದಾಗಿದೆ.

ಸರ್ಕಾರದ ಈ ತೀರ್ಮಾನವನ್ನು ಪ್ರತಿಪಕ್ಷ ಬಿಜೆಪಿ ಖಂಡಿಸಿದೆ. ಬಿಜೆಪಿ ಮಾತ್ರವಲ್ಲ ಕಾಂಗ್ರೆಸ್‌ನಲ್ಲಿ ಸಚಿವ ಕೆ.ಜೆ.ಜಾರ್ಜ್‌ ಮತ್ತು ಮಾಜಿ ಸಚಿವ ಎಚ್.ಕೆ.ಪಾಟೀಲ್ ನಡುವೆ ಈ ವಿಚಾರಣೆ ಸಂಬಂಧಿಸಿದಂತೆ ಜಟಾಪಟಿ ನಡೆಯುತ್ತಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+