ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜಿಂದಾಲ್ ವಿವಾದ : ಅಹೋರಾತ್ರಿ ಧರಣಿ ಆರಂಭಿಸಿದ ಬಿಜೆಪಿ

|
Google Oneindia Kannada News

ಬೆಂಗಳೂರು, ಜೂನ್ 14 : ಜಿಂದಾಲ್ ಕಂಪನಿಗೆ ಕರ್ನಾಟಕ ಸರ್ಕಾರ 3,667 ಎಕರೆ ಭೂಮಿ ನೀಡಿರುವುದನ್ನು ಖಂಡಿಸಿ ಪ್ರತಿಪಕ್ಷ ಬಿಜೆಪಿ ಅಹೋರಾತ್ರಿ ಧರಣಿ ಆರಂಭಿಸಿದೆ. ಎರಡು ದಿನಗಳ ಕಾಲ ನಡೆಯುವ ಧರಣಿಯಲ್ಲಿ ಶಾಸಕರು, ಸಂಸದರು ಮತ್ತು ವಿಧಾನ ಪರಿಷತ್ ಸದಸ್ಯರು ಪಾಲ್ಗೊಳ್ಳಲಿದ್ದಾರೆ.

ಶುಕ್ರವಾರ ಬೆಳಗ್ಗೆ ಬೆಂಗಳೂರಿನ ಆನಂದರಾವ್ ವೃತದಲ್ಲಿ ಅಹೋರಾತ್ರಿ ಧರಣಿಗೆ ಬಿಜೆಪಿ ಚಾಲನೆ ನೀಡಿದೆ. ಕರ್ನಾಟಕ ಬಿಜೆಪಿ ಅಧ್ಯಕ್ಷ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ಆರಂಭವಾಗಿದ್ದು, ಹಲವು ನಾಯಕರು ಇದರಲ್ಲಿ ಪಾಲ್ಗೊಂಡಿದ್ದಾರೆ.

ಜಿಂದಾಲ್ ವಿವಾದ : ಕರ್ನಾಟಕ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆಗಳುಜಿಂದಾಲ್ ವಿವಾದ : ಕರ್ನಾಟಕ ಸರ್ಕಾರಕ್ಕೆ ಸಿ.ಟಿ.ರವಿ ಪ್ರಶ್ನೆಗಳು

ಯಡಿಯೂರಪ್ಪ ಅವರು ಮಹಾತ್ಮ ಗಾಂಧಿ ಪುತ್ಥಳಿಗೆ ಪುಷ್ಪಾರ್ಚನೆ ಮಾಡಿ ಧರಣಿ ಆರಂಭಿಸಿದರು. ಮಾಜಿ ಉಪಮುಖ್ಯಮಂತ್ರಿ ಆರ್.ಅಶೋಕ, ಕೆ.ಎಸ್.ಈಶ್ವರಪ್ಪ, ವಿಧಾನಸಭೆ ವಿಪಕ್ಷ ಉಪನಾಯಕ ಗೋವಿಂದ ಕಾರಜೋಳ, ವಿಧಾನ ಪರಿಷತ್ ವಿಪಕ್ಷ ನಾಯಕ ಕೋಟಾ ಶ್ರೀನಿವಾಸ ಪೂಜಾರಿ, ರಾಜ್ಯ ಬಿಜೆಪಿ ಪ್ರಧಾನ ಕಾರ್ಯದರ್ಶಿ ಶೋಭಾ ಕರಂದ್ಲಾಜೆ, ಸಿ.ಟಿ.ರವಿ, ಎನ್. ರವಿಕುಮಾರ್ ಸೇರಿದಂತೆ ಹಲವರು ಧರಣಿ ನಡೆಸುತ್ತಿದ್ದಾರೆ.

ಸರ್ಕಾರಿ ಜಮೀನು ಕ್ರಯ ವಿವಾದ: ಜಿಂದಾಲ್‌ ಸ್ಪಷ್ಟನೆಸರ್ಕಾರಿ ಜಮೀನು ಕ್ರಯ ವಿವಾದ: ಜಿಂದಾಲ್‌ ಸ್ಪಷ್ಟನೆ

ಜಿಂದಾಲ್‌ಗೆ 3,667 ಎಕರೆ ಜಮೀನು ನೀಡುವ ಕುರಿತು ಪುನರ್ ಪರಿಶೀಲನೆ ನಡೆಸಿ ಸಂಪುಟ ಸಭೆಯಲ್ಲಿ ಪುನಃ ಮಂಡಿಸುವಂತೆ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್, ಉಪ ಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ ಅವರಿಗೆ ಸೂಚನೆ ನೀಡಿದ್ದಾರೆ. ಆದರೆ, ಬಿಜೆಪಿ ಅಹೋರಾತ್ರಿ ಧರಣಿಯನ್ನು ಆರಂಭಿಸಿದೆ.

ಜಿಂದಾಲ್ ವಿವಾದ : ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್ಜಿಂದಾಲ್ ವಿವಾದ : ಮುಖ್ಯಮಂತ್ರಿ ಕುಮಾರಸ್ವಾಮಿ ಟ್ವೀಟ್

ಏನಿದು ಜಿಂದಾಲ್ ವಿವಾದ?

ಏನಿದು ಜಿಂದಾಲ್ ವಿವಾದ?

ಸಚಿವ ಸಂಪುಟ ಸಭೆಯಲ್ಲಿ ಬಳ್ಳಾರಿ ಜಿಲ್ಲೆಯ ತೋರಣಗಲ್ಲು ಮತ್ತು ಕರೆಕುಪ್ಪ ಗ್ರಾಮಗಳಲ್ಲಿ 2001 ಎಕರೆ, ಸಂಡೂರು ತಾಲೂಕಿನ ಮುಸೇನಾಯಕನಹಳ್ಳಿ, ಯರಬನಹಳ್ಳಿ ಗ್ರಾಮಗಳಲ್ಲಿ 1,666 ಎಕರೆ ಸೇರಿ ಒಟ್ಟು 3,667 ಎಕರೆ ಭೂಮಿಯನ್ನು ಜಿಂದಾಲ್‌ಗೆ ಮಾರುಕಟ್ಟೆ ದರಕ್ಕಿಂತ ಕಡಿಮೆ ದರದಲ್ಲಿ ಕ್ರಯ ಪತ್ರ ಮಾಡಿಕೊಡಲು ತೀರ್ಮಾನ ಕೈಗೊಳ್ಳಲಾಗಿದೆ. ಇದನ್ನು ಖಂಡಿಸಿ ಬಿಜೆಪಿ ಧರಣಿ ನಡೆಸುತ್ತಿದೆ.

ಸರ್ಕಾರದ ವಿರುದ್ಧ ಕಿಕ್ ಬ್ಯಾಕ್ ಆರೋಪ

ಸರ್ಕಾರದ ವಿರುದ್ಧ ಕಿಕ್ ಬ್ಯಾಕ್ ಆರೋಪ

ಮಾರುಕಟ್ಟೆ ದರಕ್ಕಿಂತ ಕಡಿಮೆ ಬೆಲೆಗೆ ಜಿಂದಾಲ್‌ಗೆ ಭೂಮಿ ನೀಡಲಾಗುತ್ತಿದೆ. ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ, ಹಲವು ಸಚಿವರು ಕಂಪನಿಯಿಂದ ಕಿಕ್ ಬ್ಯಾಕ್ ಪಡೆದಿದ್ದಾರೆ ಎಂದು ಪ್ರತಿಪಕ್ಷ ಬಿಜೆಪಿ ಆರೋಪಿಸಿದೆ. ಸರ್ಕಾರ ಈ ತೀರ್ಮಾನವನ್ನು ವಾಪಸ್ ಪಡೆಯಬೇಕು ಎಂದು ಆಗ್ರಹಿಸಿ ಧರಣಿಯನ್ನು ನಡೆಸಲಾಗುತ್ತಿದೆ.

ಕಲ್ಲು ಮುಳ್ಳು ಧೂಳಿನಲ್ಲಿ ಅರಳಿನಿಂತ ಜಿಂದಾಲ್ ಸ್ಟೀಲ್!ಕಲ್ಲು ಮುಳ್ಳು ಧೂಳಿನಲ್ಲಿ ಅರಳಿನಿಂತ ಜಿಂದಾಲ್ ಸ್ಟೀಲ್!

ಅಹೋರಾತ್ರಿ ಧರಣಿ

ಅಹೋರಾತ್ರಿ ಧರಣಿ

ಬೆಂಗಳೂರಿನ ಆನಂದರಾವ್ ವೃತದಲ್ಲಿ ಅಹೋರಾತ್ರಿ ಧರಣಿಯನ್ನು ಬಿಜೆಪಿ ಆರಂಭಿಸಿದೆ. ಜೂನ್ 16ರ ತನಕ ಧರಣಿ ನಡೆಸಲಾಗುತ್ತದೆ. 150 ಜನರು ಆನಂದರಾವ್ ವೃತದಲ್ಲಿ ರಾತ್ರಿ ಉಳಿಯಲು ಹಾಸಿಗೆ, ದಿಂಬುಗಳ ವ್ಯವಸ್ಥೆ ಮಾಡಲಾಗಿದೆ. ಮಳೆ ಬಂದರೆ ಧರಣಿ ಸ್ಥಳಕ್ಕೆ ನೀರು ನುಗ್ಗದಂತೆ ವೇದಿಕೆ ನಿರ್ಮಾಣ ಮಾಡಲಾಗಿದೆ. ಯಡಿಯೂರಪ್ಪ ನೇತೃತ್ವದಲ್ಲಿ ಧರಣಿ ಆರಂಭವಾಗಿದ್ದು, ಸಂಸದರು, ಶಾಸಕರು, ವಿಧಾನ ಪರಿಷತ್ ಸದಸ್ಯರು ಪಾಲ್ಗೊಂಡಿದ್ದಾರೆ.

ಮುಖ್ಯಮಂತ್ರಿಗಳು ಹೇಳುವುದೇನು?

ಮುಖ್ಯಮಂತ್ರಿಗಳು ಹೇಳುವುದೇನು?

ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಜಿಂದಾಲ್ ವಿಚಾರದಲ್ಲಿ ಪ್ರತಿಕ್ರಿಯೆ ನೀಡಿದ್ದಾರೆ. 'ಜಿಂದಾಲ್ ಗೆ ಭೂಮಿ ಮಾರಾಟ ಮಾಡುವ ವಿಷಯದ ಕುರಿತು ಇಂದು ಉಪಮುಖ್ಯಮಂತ್ರಿ ಡಾ.ಜಿ.ಪರಮೇಶ್ವರ
ಹಾಗೂ ಕೈಗಾರಿಕಾ ಸಚಿವ ಕೆ.ಜೆ.ಜಾರ್ಜ್ ಅವರೊಂದಿಗೆ ಚರ್ಚಿಸಿದ್ದೇನೆ. ಈ ವಿಷಯವನ್ನು ಮರುಪರಿಶೀಲನೆ ಮಾಡಿ ಸಂಪುಟ ಸಭೆಯಲ್ಲಿ ಚರ್ಚೆಗಾಗಿ ಪುನಃ ಮಂಡಿಸುವಂತೆ ಸೂಚಿಸಿದ್ದೇನೆ' ಎಂದು ಟ್ವೀಟ್ ಮಾಡಿದ್ದರು.

ಪುನರ್ ಪರಿಶೀಲನೆ ಉತ್ತಮ

ಪುನರ್ ಪರಿಶೀಲನೆ ಉತ್ತಮ

ಜಿಂದಾಲ್‌ಗೆ 3,667 ಎಕರೆ ಭೂಮಿ ನೀಡುವ ವಿಚಾರವನ್ನು ಪುನರ್ ಪರಿಶೀಲನೆ ಮಾಡುವ ಕರ್ನಾಟಕ ಸರ್ಕಾರದ ಕ್ರಮವನ್ನು ಸಾಮಾಜಿಕ ಹೋರಾಟಗಾರ ಎಸ್.ಆರ್.ಹಿರೇಮಠ ಸ್ವಾಗತಿಸಿದ್ದಾರೆ. 'ಕನಿಷ್ಠ ಬೆಲೆಗೆ ಜಮೀನು ಮಾರುವ ಬದಲು ಲೀಜ್ ಕೊಡುವುದು ಲೇಸು. ಈ ಕುರಿತು ಪುನರ್ ಪರಿಶೀಲನೆ ನಡೆಸಲಿ' ಎಂದು ಹೇಳಿದ್ದಾರೆ.

English summary
Karnataka BJP began the day long protest in Bengaluru on June 14, 2019 against Karnataka government decision to handover 3,667 acres land to the JSW Steel in Ballari district.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X