ಉದ್ಯೋಗ ಕ್ರಾಂತಿಗೆ ಹೊಸ ಮುನ್ನುಡಿ: ಐಟಿಐ, ಡಿಪ್ಲೊಮೊ ಕೋರ್ಸ್ ಪೂರ್ಣಗೊಳಿಸಿದವರಿಗೆ ವಿದೇಶದಲ್ಲಿ ಉದ್ಯೋಗ

ಬೆಂಗಳೂರು,ಜೂನ್22: ಕರ್ನಾಟಕ ಕೌಶಲ್ಯಾಭಿವೃದ್ದಿ ನಿಗಮವು ರಾಜ್ಯದ ಯುವಕರಿಗೆ ಹೊರದೇಶಗಳಲ್ಲಿ ಉದ್ಯೋಗ ಒದಗಿಸುವಮಹತ್ವದ ಯೋಜನೆಯನ್ನು ಅನುಷ್ಠಾನಗೊಳಿಸಿದೆ. ಇದರ ಭಾಗವಾಗಿ ಸ್ಲೋವಾಕಿಯಾ ರಾಷ್ಟ್ರದಲ್ಲಿ ಬಿಇ, ಡಿಪ್ಲೊಮೊ, ಐಟಿಐ ಮತ್ತಿತರ ವೃತ್ತಿಪರ ಕೋರ್ಸ್‍ಗಳನ್ನು ಮುಗಿಸಿದ 94 ಯುವಕರಿಗೆ ಉದ್ಯೋಗ ನೀಡುವಲ್ಲಿ ಕೌಶಲ್ಯಾಭಿವೃದ್ಧಿ ನಿಗಮವು‌ ಯಶಸ್ವಿಯಾಗಿದೆ.

ಕೌಶಲ್ಯಾಭಿವೃದ್ಧಿ, ಜೀವನೋಪಾಯ ಹಾಗೂ ವೈದ್ಯಕೀಯ ಶಿಕ್ಷಣ ಸಚಿವ ರಾದ ಡಾ.ಶರಣಪ್ರಕಾಶ್ ಪಾಟೀಲ್ ಅವರು ಉದ್ಯೋಗವಿಲ್ಲದೆ ಕೆಲಸ ಹರಸುತ್ತಿದ್ದಯುವಕರು ಇದೀಗ ವಿದೇಶದಲ್ಲಿ ಕೈತುಂಬ ಸಂಬಳ ಪಡೆಯುತ್ತಿದ್ದು, ತಮ್ಮ ಭವಿಷ್ಯವ ರೂಪಿಸಿಕೊಂಡಿದ್ದಾರೆ.

Job abroad for those who complete ITI Diploma course

ಯುವಕರ ಕೌಶಲ್ಯಾ ಅರ್ಹತೆಗೆ ತಕ್ಕಂತೆ ಉದ್ಯೋಗಗಳನ್ನುನೀಡಲಾಗುತ್ತಿದೆ. ಅವರಿಗೆ ಇಲ್ಲಿಯೇ ತರಬೇತಿ, ವೀಸಾ ವ್ಯವಸ್ಥೆ, ಗೃಹ ಇಲಾಖೆಯಲ್ಲಿ ದಾಖಲಾತಿಗಳ ಪ್ರಮಾಣಪತ್ರ ಪರಿಶೀಲನೆಮಾತ್ರವಲ್ಲದೆ ಹೊರ ರಾಷ್ಟ್ರಗಳಿಗೆ ತೆರಳುವವರಿಗೆ ಊಟ, ವಸತಿವ್ಯವಸ್ಥೆ, ಸಂಬಂಧಪಟ್ಟವರ ಭೇಟಿಗೆ ಬೇಕಾದ ಇನ್ನಿತರಸೌಲಭ್ಯಗಳನ್ನು ಸಹ ಇಲಾಖೆಯ ಅಧಿಕಾರಿಗಳೇನಿಗಾವಹಿಸುತ್ತಾರೆ.

ಐಟಿಬಿಟಿ, ವಿಜ್ಞಾನ, ಕೈಗಾರಿಕೆ, ಆರೋಗ್ಯ ಸೇರಿದಂತೆ ವಿವಿಧಕ್ಷೇತ್ರಗಳಲ್ಲಿ ಕರ್ನಾಟಕ ಇತರೆ ರಾಜ್ಯಗಳಿಗೆ ಹೋಲಿಸಿದರೆ ಸಾಕಷ್ಟುಮುಂಚೂಣಿಯಲ್ಲಿದೆ. ಇದನ್ನು ಮನಗಂಡ ಸ್ಲೊವೆನಿಯಾ ರಾಷ್ಟ್ರವುಎರಡೂವರೆ ಸಾವಿರ ಅಸೆಂಬ್ಲಿ ಲೈನ್ ಆಪರೇಟರ್ ಗಳನ್ನು ನೇಮಕಮಾಡಿಕೊಳ್ಳಲು ಮುಂದೆ ಬಂದಿತ್ತು. ತಕ್ಷಣವೇ ಕಾರ್ಯಪ್ರವೃತ್ತರಾದಡಾ.ಶರಣಪ್ರಕಾಶ್ ಪಾಟೀಲ್ ಅವರು ತಮ್ಮ ಅಧಿಕಾರಿಗಳತಂಡವನ್ನು ಸಿದ್ದವಿರಿಸಿ ವಿದೇಶಾಂಗ ವ್ಯವಹಾರಗಳ ಇಲಾಖೆ ಜೊತೆಒಡಂಬಡಿಕೆ ಮಾಡಿಕೊಂಡರು.

ಸ್ಲೋವಾಕಿಯಾ ರಾಷ್ಟ್ರವು 2500 ಹುದ್ದೆಗಳ ನೇಮಕಾತಿಗೆ ಪ್ರಕ್ರಿಯೆಆರಂಭಿಸುತ್ತಿದ್ದಂತೆ ಇಲಾಖೆ ವತಿಯಿಂದ ಅರ್ಹ ಅಭ್ಯರ್ಥಿಗಳನ್ನುಆಹ್ವಾನಿಸಲಾಯಿತು. ಇದರ ಮೊದಲ ಭಾಗವಾಗಿ 94 ಅಭ್ಯರ್ಥಿಗಳಿಗೆ -- 54 ಮಂದಿ ಐಟಿಐ, 31 ಮಂದಿ ಡಿಪ್ಲೊಮೊ - ಆ ದೇಶಕ್ಕೆ ಬೀಳ್ಕೊಡಲಾಗಿದೆ

ಆಯ್ಕೆಯಾದ ಅಭ್ಯರ್ಥಿಗಳಿಗೆ ಬಿಡದಿ ಸಮೀಪ ಇರುವಟೊಯೋಟಾ ಕೀರ್ಲೋಸ್ಕರ್‍ನಲ್ಲಿ ತರಬೇತಿ ನೀಡಲಾಯಿತು. ಈ ಮೊದಲು ಇಲ್ಲಿ ತರಬೇತಿ ಪಡೆಯಲು 35,000 ರೂ. ಖರ್ಚುವೆಚ್ಚವಾಗುತ್ತಿತ್ತು. ಆರ್ಥಿಕವಾಗಿ ಹಿಂದುಳಿದ ಅಭ್ಯರ್ಥಿಗಳೇ ಇಲ್ಲಿತರಬೇತಿ ಪಡೆಯುತ್ತಾರೆ ಎಂಬುದನ್ನು ಮನಗಂಡ ಸಚಿವ ಪಾಟೀಲ್ಅವರು, ಯಾವುದೇ ಒಬ್ಬ ಅಭ್ಯರ್ಥಿಯು ಒಂದೇ ಒಂದು ಪೈಸಾಕಟ್ಟುವುದು ಬೇಡ. ಎಲ್ಲ ಹಣವನ್ನು ಇಲಾಖೆ ವತಿಯಿಂದಲೇಭರಿಸಬೇಕೆಂದು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಸೂಚನೆ ನೀಡಿಮಾನವೀಯತೆ ಮೆರೆದರು.

ತರಬೇತಿ ಪಡೆದ ನಂತರ ಸ್ಲೊವೆನಿಯಾ ದಲ್ಲಿ ಇವರಿಗೆ ತಿಂಗಳಿಗೆ970 ಯೂರೋ (86 ಸಾವಿರ ರೂ.) ವೇತನ ನೀಡಲಾಗುತ್ತಿದೆ. ಜೂನ್ 5ರಂದು ಮೊದಲ ತಂಡ ಹಾಗೂ ಜೂ.20ರಂದು 2ನೇತಂಡವನ್ನು ಬೀಳ್ಕೊಡಲಾಗಿದೆ. ಜೂ.24 ಮತ್ತು ಜು.1ರಂದುಉಳಿದ ತಂಡಗಳು ಸ್ಲೋವಾಕಿಯಾಕ್ಕೆ ತೆರಳಲಿದೆ ಎಂದುಶರಣಪ್ರಕಾಶ್ ಪಾಟೀಲ್ ತಿಳಿಸಿದ್ದಾರೆ.

ಕೆಎಸ್‍ಡಿಸಿ ಇದೀಗ 37 ಚಾಲಕರನ್ನು ಹಂಗೇರಿಗೆ ದೇಶಕ್ಕೆ ಕಳುಹಿಸಿಕೊಟ್ಟಿದೆ. ಅಲ್ಲದೆ ಮಾರಿಷಸ್‍ಗೆ ವೆಲ್ಡರ್‍ಗಳು, ಬಾಯ್ಲರ್ತಯಾರಕರು ಮತ್ತು ಇತರ ಬ್ಲೂ ಕಾಲರ್ ಕೆಲಸಗಳಿಗಾಗಿ ಪ್ರಕ್ರಿಯೆಗೆಚಾಲನೆ ನೀಡಿದ್ದಾರೆ. ಆಸ್ಟ್ರೇಲಿಯಾ, ಜಪಾನ್, ಫಿನ್ಲ್ಯಾಂಡ್, ಜರ್ಮನಿ, ನಾರ್ವೆಯಿಂದದಾದಿಯರ ಬೇಡಿಕೆಯನ್ನು ಪೂರೈಸಲು ಮುಂದಾಗಿದೆ. ಅಲ್ಲದೆಸ್ಲೊವೇನಿಯಾ ಕೂಡ ಹೆಚ್ಚುವರಿಯಾಗಿ ದೊಡ್ಡ ಸಂಖ್ಯೆಯ ಆಪರೇಟರ್‍ಗಳನ್ನು ಕೇಳಿಕೊಂಡಿದೆ. ಜೊತೆಗೆ ಗಲ್ಫ್ಮತ್ತು ಯುರೋಪ್ ರಾಷ್ಟ್ರಗಳಿಂದಲೂ ಬೇಡಿಕೆಗಳು ಬಂದಿದ್ದು, ಇದನ್ನು ಈಡೇರಿಸುವ ನಿಟ್ಟಿನಲ್ಲಿ ನಾವು ಕೆಲಸ ಮಾಡುತಿದ್ದೇವೆ ಎಂದು ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ವ್ಯವಸ್ಥಾಪಕನಿರ್ದೇಶಕಿ ಎಂ.ಕನಗವಲ್ಲಿ ಹೇಳಿದ್ದಾರೆ.

ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಇಂಗ್ಲೀಷ್ ಭಾಷೆ ಅಗತ್ಯಇರುವುದನ್ನು ಮನಗಂಡಿರುವ ಕೌಶಲ್ಯಾಭಿವೃದ್ಧಿ ನಿಗಮಆಯ್ಕೆಯಾಗುವ ಉದ್ಯೋ ಆಕಾಂಕ್ಷಿಗಳಿಗೆ ಉಚಿತವಾಗಿ ಇಂಗ್ಲೀಷ್ಭಾಷೆ ತರಬೇತಿ ನೀಡಲು ಮುಂದಾಗಿದೆ. ಇದಕ್ಕಾಗಿಯೇ ಇಂಗ್ಲೀಷ್ಭಾಷೆಯಲ್ಲಿ ಪರಿಣಿತಿ ಹೊಂದಿರುವವರನ್ನು ಆಯ್ಕೆ ಮಾಡಿಕೊಂಡುತರಬೇತಿ ನೀಡಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+