ಚಿಕ್ಕಬಳ್ಳಾಪುರದಲ್ಲಿ ಫೆ.27ರಂದು ಬೃಹತ್ ಉದ್ಯೋಗ ಮೇಳ

ಚಿಕ್ಕಬಳ್ಳಾಪುರ, ಫೆಬ್ರವರಿ 26 : ಚಿಕ್ಕಬಳ್ಳಾಪುರದಲ್ಲಿ ಫೆ.27ರಂದು ಬೃಹತ್ ಕೌಶಲ್ಯ ಮತ್ತು ಉದ್ಯೋಗ ಮೇಳವನ್ನು ಆಯೋಜಿಸಲಾಗಿದೆ. ರಾಜ್ಯದ ಎಲ್ಲಾ ಜಿಲ್ಲೆಗಳ ಉದ್ಯೋಗಾಕಾಂಕ್ಷಿಗಳು ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ಚಿಕ್ಕಬಳ್ಳಾಪುರದ ಎಂ. ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಮೇಳ ಆಯೋಜಿಸಲಾಗಿದೆ. ಫೆ.27ರ ಮಂಗಳವಾರ ಬೆಳಗ್ಗೆ 9.30 ರಿಂದ ಸಂಜೆ 4 ಗಂಟೆಯ ತನಕ ಉದ್ಯೋಗ ಮೇಳ ನಡೆಯಲಿದೆ.

ಕರ್ನಾಟಕ ಕೌಶಲ್ಯ ಅಭಿವೃದ್ಧಿ ನಿಗಮ ಮತ್ತು ಜಿಲ್ಲಾ ಕೌಶಲ್ಯ ಅಭಿಯಾನದ ಜಂಟಿ ಸಹಯೋಗದಲ್ಲಿ ಮೇಳ ನಡೆಯುತ್ತಿದೆ. ಆನ್‌ಲೈನ್ ಮೂಲಕ ನೋಂದಣಿ ಮಾಡದ ಅಭ್ಯರ್ಥಿಗಳು ಸ್ಥಳದಲ್ಲಿಯೇ ನೋಂದಣಿ ಮಾಡಿಸಲು ಅವಕಾಶ ನೀಡಲಾಗಿದೆ.

 Job fair in Chikballapur on February 27

100ಕ್ಕೂ ಹೆಚ್ಚು ಪ್ರತಿಷ್ಠಿತ ಕಂಪನಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಲಿವೆ. ಐಟಿಐ, ಆಟೋ ಮೊಬೈಲ್, ಮ್ಯಾಕಾನಿಕಲ್, ಮಾರ್ಕೆಟಿಂಗ್, ಸೇಲ್ಸ್, ಟೆಲಿಕಾಂ, ಬ್ಯಾಕಿಂಗ್, ಫೈನಾನ್ಸ್, ವಿಮೆ, ಹೆಲ್ತ್ ಕೇರ್, ಗಾರ್ಮೆಂಟ್ಸ್, ಸೆಕ್ಯೂರಿಟಿ ಮುಂತಾದ ವಲಯದ ನೇಮಕಾತಿ ನಡೆಯಲಿದೆ.

ಎಸ್‌.ಎಸ್‌.ಎಲ್‌.ಸಿ, (ಉತ್ತೀರ್ಣ/ಅನುತ್ತೀರ್ಣ), ಪಿಯುಸಿ, ಜೆಓಸಿ, ಐಟಿಐ, ಡಿಪ್ಲೊಮಾ, ಡಿ.ಇಡಿ, ಇಂಜಿನಿಯರಿಂಗ್, ಪ್ಯಾರಾ ಮೆಡಿಕಲ್, ಪದವೀಧರರು, ಎಂಬಿಎ, ಎಂಸಿಎ ಸೇರಿದಂತೆ ವಿವಿಧ ವಿದ್ಯಾರ್ಹತೆ ಹೊಂದಿರುವ ಅಭ್ಯರ್ಥಿಗಳು ಪಾಲ್ಗೊಳ್ಳಬಹುದಾಗಿದೆ.

ಸರ್ಕಾರದಿಂದ ಈ ಮೇಳ ಆಯೋಜನೆ ಮಾಡಲಾಗಿದೆ. ಆದ್ದರಿಂದ, ಯಾವುದೇ ಅಭ್ಯರ್ಥಿಗಳು ಯಾವುದೇ ಶುಲ್ಕವನ್ನು ಪಾವತಿ ಮಾಡಬೇಕಿಲ್ಲ ಹಾಗೂ ಮಧ್ಯವರ್ತಿಗಳನ್ನು ಸಂಪರ್ಕಿಸಬೇಕಾಗಿಲ್ಲ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+