ಸೆ.22ರಂದು ಹಾಸನದಲ್ಲಿ ಉದ್ಯೋಗ ಮೇಳ

Posted By: Gururaj
Subscribe to Oneindia Kannada

ಹಾಸನ, ಸೆಪ್ಟೆಂಬರ್ 14 : ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಸೆ.22ರಂದು ಉದ್ಯೋಗ ಮೇಳ ಆಯೋಜಿಸಲಾಗಿದೆ. ನೇರ ಸಂದರ್ಶನದ ಮೂಲಕ ವಿವಿಧ ಕಂಪನಿಗಳು ನೇಮಕಾತಿ ಮಾಡಿಕೊಳ್ಳಲಿವೆ.

ಶಿವಮೊಗ್ಗ : ಅಕ್ಟೋಬರ್‌ನಲ್ಲಿ ಬೃಹತ್ ಉದ್ಯೋಗ ಮೇಳ

ಸೆ.22ರ ಶುಕ್ರವಾರ ಬೆಳಗ್ಗೆ 10 ಗಂಟೆಗೆ ಉದ್ಯೋಗ ಮೇಳ ಆರಂಭವಾಗಲಿದೆ. ಹಾಸನ ಮತ್ತು ಬೆಂಗಳೂರಿನ ಹೆಸರಾಂತ ಕಂಪನಿಗಳು ಇದರಲ್ಲಿ ಪಾಲ್ಗೊಳ್ಳುತ್ತಿದ್ದು, ತಮ್ಮ ಸಂಸ್ಥೆಯಲ್ಲಿ ಖಾಲಿ ಇರುವ ವಿವಿಧ ಹುದ್ದೆಗಳಿಗೆ ನೇರ ಸಂದರ್ಶನದ ಮೂಲಕ ನೇಮಕಾತಿ ಮಾಡಿಕೊಳ್ಳಲಿವೆ.

JOB fair in Hassan on September 22, 2017

ಎಸ್ಎಸ್ಎಲ್‌ಸಿ, ಪಿಯುಸಿ, ಪದವಿ, ಐಟಿಐ, ಡಿಪ್ಲೋಮಾ, ಎಂಬಿಎ, ಇಂಜಿನಿಯರಿಂಗ್, ಡ್ರೈವರ್, ನರ್ಸಿಂಗ್‌ನಲ್ಲಿ ತೇರ್ಗಡೆ ಹೊಂದಿದ 18 ರಿಂದ 25 ವರ್ಷ ವಯೋಮಿತಿಯ ಪುರುಷ ಮತ್ತು ಮಹಿಳಾ ಅಭ್ಯರ್ಥಿಗಳು ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳಬಹುದಾಗಿದೆ.

ರೈಲ್ ಟೆಲ್ ನಲ್ಲಿ ವಿವಿಧ ಹುದ್ದೆಗಳಿಗೆ ಅರ್ಜಿ ಆಹ್ವಾನ

ಉದ್ಯೋಗ ಮೇಳದಲ್ಲಿ ಪಾಲ್ಗೊಳ್ಳುವ ಯುವಕ/ಯುವತಿಯರು ಅಂಕಪಟ್ಟಿಗಳ ಜೆರಾಕ್ಸ್ ಪ್ರತಿಗಳು ಮತ್ತು ಆಧಾರ್ ಕಾರ್ಡ್, ಸ್ವ ವಿವರ,ಪ್ರತಿಗಳೊಂದಿಗೆ ಹಾಸನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಗೆ ಹಾಜರಾಗಬೇಕು.

ಕೋಲಾರ-ಚಿಕ್ಕಬಳ್ಳಾಪುರ ಹಾಲು ಒಕ್ಕೂಟದಲ್ಲಿ ವಿವಿಧ ಹುದ್ದೆಗಳ ನೇಮಕಾತಿ

ಯುವಕ/ಯುವತಿಯರು ಉದ್ಯೋಗ ಮೇಳದ ಸದುಪಯೋಗ ಪಡೆದುಕೊಳ್ಳುವಂತೆ ಜಿಲ್ಲಾಡಳಿತ ಮನವಿ ಮಾಡಿದೆ. ಹೆಚ್ಚಿನ ಮಾಹಿತಿಗಾಗಿ ಕಚೇರಿಯ ಉದ್ಯೋಗಾಧಿಕಾರಿ ಜೆ.ಬಿ. ವಿಜಯಲಕ್ಷ್ಮಿ ಅವರನ್ನು ಭೇಟಿ ಮಾಡಬಹುದಾಗಿದೆ. ಕಚೇರಿ ದೂರವಾಣಿ ಸಂಖ್ಯೆ 08172-268374.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
District Employment Exchange office Hassan organized job fair on September 22, 2017 at Employment Exchange Hassan.
Please Wait while comments are loading...