ಕೊಪ್ಪಳದಲ್ಲಿ ಮೇ 13ರಂದು ಉದ್ಯೋಗ ಮೇಳ

ಕೊಪ್ಪಳ, ಮೇ 06 : ಕೊಪ್ಪಳದ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮೇ 13ರಂದು ಉದ್ಯೋಗ ಮೇಳ ಹಮ್ಮಿಕೊಳ್ಳಲಾಗಿದೆ. ಭದ್ರತಾ ಸಿಬ್ಬಂದಿ ನೇಮಕಾತಿಗೆ ನೇರ ಸಂದರ್ಶನ ನಡೆಯಲಿದೆ.

ಬೆಂಗಳೂರಿನ ಜಿ 4ಎಸ್ ಸೆಕ್ಯೂರ್ ಸಲ್ಯೂಷನ್ಸ್ (ಇಂಡಿಯಾ) ಕಂಪೆನಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ಸಹಯೋಗದಲ್ಲಿ ಉದ್ಯೋಗ ಮೇಳ ಹಮ್ಮಿಕೊಂಡಿದೆ. ಮೇ 13ರಂದು ಬೆಳಗ್ಗೆ 10 ಗಂಟೆಯಿಂದ ಮಧ್ಯಾಹ್ನ 2 ಗಂಟೆಯ ತನಕ ನೇರ ಸಂದರ್ಶನವಿರುತ್ತದೆ. [72 ವಲಯ ಅರಣ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ]

koppal

ಕೊಪ್ಪಳ ಜಿಲ್ಲಾಡಳಿತ ಭವನದಲ್ಲಿನ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ನೇರ ಸಂದರ್ಶನ ನಡೆಯಲಿದೆ. ಸಂದರ್ಶನಕ್ಕೆ ಆಗಮಿಸುವವರು ಎಸ್‍ಎಸ್‍ಎಲ್‍ಸಿ ಪಾಸಾಗಿರಬೇಕು, ವಯೋಮಿತಿ 18 ರಿಂದ 35 ವರ್ಷಗಳು. ಆಸಕ್ತ ಅಭ್ಯರ್ಥಿಗಳು ತಮ್ಮ ವಿದ್ಯಾರ್ಹತೆಯ ಎಲ್ಲಾ ದಾಖಲೆಗಳೊಂದಿಗೆ ಸಂದರ್ಶನಕ್ಕೆ ಹಾಜರಾಗಬಹುದು.

ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಉದ್ಯೋಗಾಧಿಕಾರಿ ಕಛೇರಿಯನ್ನು ಸಂಪರ್ಕಿಸಬಹುದು. ದೂರವಾಣಿ ಸಂಖ್ಯೆ 08539-220859.

ಉದ್ಯೋಗವಕಾಶಗಳು

* ಕೇಂದ್ರ ಲೋಕಸೇವಾ ಆಯೋಗ ಭಾರತ ಅರಣ್ಯ ಸೇವೆ (ಐಎಫ್‌ಎಸ್)ಯಲ್ಲಿ 110 ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ. ಆನ್‌ಲೈನ್ ಮೂಲಕ ಅರ್ಜಿಗಳನ್ನು ಸಲ್ಲಿಸಲು ಮೇ 27 ಕೊನೆಯ ದಿನವಾಗಿದೆ.
[ವಿವರಗಳಿಗೆ ಕ್ಲಿಕ್ ಮಾಡಿ]

* ಬೆಂಗಳೂರು ದೂರದರ್ಶನ ಕೇಂದ್ರದ ಪ್ರಾದೇಶಿಕ ಸುದ್ದಿ ವಿಭಾಗವು ಜಿಲ್ಲಾ ಕೇಂದ್ರಗಳಲ್ಲಿ ಸ್ಟ್ರಿಂಜರ್‌ಗಳಾಗಿ ಕಾರ್ಯನಿರ್ವಹಿಸಲು ಅರ್ಹರಿಂದ ಅರ್ಜಿ ಆಹ್ವಾನಿಸಿದೆ. ಮೇ 13, 2016 ಅರ್ಜಿ ಸಲ್ಲಿಸಲು ಕೊನೆಯ ದಿನ. [ವಿವರಗಳು ಇಲ್ಲಿವೆ]

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+