
ಪಿಎಫ್ ಐ ಸೇರಿ ಎಂದು ಪೋಸ್ಟರ್ ಅಂಟಿಸಿರುವವರ ವಿರುದ್ದ ಕ್ರಮ: ಬಸವರಾಜ ಬೊಮ್ಮಾಯಿ
ಬೆಂಗಳೂರು, ಡಿಸೆಂಬರ್ 5: ಶಿವಮೊಗ್ಗದಲ್ಲಿ ಪಿಎಫ್ ಐ ಸೇರಿ ಎಂಬ ಪೋಸ್ಟರ್ ಗಳನ್ನು ಅಂಟಿಸಿರುವವರ ವಿರುದ್ಧ ಪೊಲೀಸರು ಈಗಾಗಲೇ ಕ್ರಮ ಕೈಗೊಂಡಿದ್ದಾರೆ. ತಪ್ಪಿತಸ್ಥರ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.
ಈ ಕುರಿತು ನಗರದಲ್ಲಿ ಸೋಮವಾರ ಮಾಧ್ಯಮಗಳ ಜೊತೆಗೆ ಮಾತನಾಡಿದ ಅವರು, ಪಿಎಫ್‌ಐ ರದ್ದು ಮಾಡಿದ ನಂತರ ಹತಾಶರಾಗಿ ಈ ರೀತಿ ಗೋಡೆ ಮೇಲೆ ಬರೆಯುವುದು ಮಾಡುವ ಕೆಲಸ ಮಾಡುತ್ತಿದ್ದಾರೆ. ಇದನ್ನು ನಾನು ಖಂಡಿಸುತ್ತೇನೆ. ಸಮಾಜದಲ್ಲಿ ಗೊಂದಲ ಸೃಷ್ಟಿಸುವ ಕೆಲಸ ಮಾಡುತ್ತಿರುವುದು ಸರಿಯಲ್ಲ ಎಂದರು.
Bengaluru Traffic : ಬೆಂಗಳೂರು ಟ್ರಾಫಿಕ್ ಸಮಸ್ಯೆ ಕಮ್ಮಿಯಾಗುತ್ತಿರುವುದು ಹೇಗೆ? ಇಲ್ಲಿದೆ ವಿಸ್ತೃತ ವರದಿ
ಮಹಾರಾಷ್ಟ್ರ ಮಂತ್ರಿಗಳು ಬೆಳಗಾವಿಗೆ ಬರುವುದು ಸೂಕ್ತವಲ್ಲ ಎಂದು ಲಿಖಿತವಾಗಿ ಸೂಚಿಸಿದ್ದರೂ ಬರುತ್ತಿರುವುದು ಸೂಕ್ತವಲ್ಲ. ಯಾರು ಎಲ್ಲಿ ಬೇಕಾದರೂ ಓಡಾಡುವ ಸ್ವಾತಂತ್ರ್ಯ ವಿದೆ ಎಂದು ನಮಗೂ ತಿಳಿದಿದೆ. ಕಾನೂನು ಸುವ್ಯವಸ್ಥೆ ಕಾಪಾಡುವ ದೃಷ್ಟಿಯಿಂದ ಸಂಬಂಧ ಪಟ್ಟ ಪೊಲೀಸ್ ಹಾಗೂ ಕಂದಾಯ ಇಲಾಖೆ ಅಧಿಕಾರಿಗಳಿಗೆ ಕಾನೂನು ಸುವ್ಯವಸ್ಥೆ ದೃಷ್ಟಿಯಿಂದ ನಮ್ಮ ಸರ್ಕಾರ ಕೆಲವು ಕ್ರಮಕೈಗೊಳ್ಳಲು ಸೂಚನೆ ನೀಡಲಾಗಿದೆ ಎಂದರು.
ಬೆಳಗಾವಿಗೆ ಮಹಾರಾಷ್ಟ್ರ ಸಜಚಿವರು ಬರುವುದು ಸರಿಯಾದುದಲ್ಲ. ಗಡಿ ವಿವಾದ ಬಗೆಹರಿದಿದ್ದರೂ ಸುಪ್ರೀಂ ಕೋರ್ಟಿನಲ್ಲಿ ವ್ಯಾಜ್ಯ ಹೂಡಿದ್ದಾರೆ. ಕಾನೂನಾತ್ಮಕ ವಾಗಿ ಇಬ್ಬರೂ ಹೋರಾಡುತ್ತೇವೆ. ಆದರೆ ಎರಡೂ ರಾಜ್ಯದ ಜನರು ಸಾಮರಸ್ಯದಿಂದಿದ್ದು, ಇಲ್ಲಿ ಕಾನೂನು ಸುವ್ಯವಸ್ಥೆ ಕದಡುವ ಯಾವುದೇ ಕೆಲಸ ಮಾಡಬಾರದು ಎಂದು ಮಹಾರಾಷ್ಟ್ರ ಮುಖ್ಯ ಮಂತ್ರಿಗಳಲ್ಲಿ ಮನವಿ ಮಾಡುವುದಾಗಿ ತಿಳಿಸಿದರು
ಏನಿದು ಪೋಸ್ಟರ್ ವಿವಾದ..?
ಇಡೀ ದೇಶದಾದ್ಯಂತ ಕೇಂದ್ರ ಸರ್ಕಾರ ಪಿಎಫ್ಐ ಸಂಘಟನೆ ನಿಷೇಧ ಮಾಡಿ ಆದೇಶ ಹೊರಡಿಸಿದೆ. ಹೀಗಿರುವಾಗ ಕೆಲ ಕಿಡಿಗೇಡಿಗಳು ಜಾಯಿನ್ ಸಿಎಫ್ ಐ ಎಂದು ಗೋಡೆ ಬರಹ ಬರೆದಿರುವ ಘಟನೆ ಶಿವಮೊಗ್ಗ ಜಿಲ್ಲೆಯ ಶಿರಾಳಕೊಪ್ಪದಲ್ಲಿ ನಡೆದಿದೆ. ರಾತ್ರಿ ವೇಳೆ ಕಿಡಿಗೇಡಿಗಳು ಶಿರಾಳಕೊಪ್ಪದ ಎಂಟು ಕಡೆಗಳಲ್ಲಿ ಗೋಡೆ ಬರಹ ಬರೆದಿದ್ದು, ಜಾಯಿನ್ ಸಿಎಫ್ ಐ ಎಂದು ಬರೆದಿದ್ದಾರೆ.