ಗೌರಿ ಲಂಕೇಶ್ ಹತ್ಯೆ ಪ್ರಕರಣ; 11ನೇ ಆರೋಪಿಗೆ ಜಾಮೀನು

ಬೆಂಗಳೂರು, ಡಿಸೆಂಬರ್ 09: ಹಿರಿಯ ಪತ್ರಕರ್ತೆ ದಿ. ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ 11ನೇ ಆರೋಪಿಯಾಗಿರುವ ಎನ್. ಮೋಹನ್ ನಾಯಕ್‌ಗೆ ಕರ್ನಾಟಕ ಹೈಕೋರ್ಟ್‌ ಜಾಮೀನು ಮಂಜೂರು ಮಾಡಿದೆ. ಕೊಲೆ ಸಂಚು ಆರೋಪದಲ್ಲಿ ಬಂಧನಕ್ಕೆ ಒಳಗಾಗಿ, ಹಲವು ವರ್ಷಗಳಿಂದ ಜೈಲಿನಲ್ಲೇ ಕೊಳೆಯುತ್ತಿದ್ದ ಮೋಹನ್ ಕೊನೆಗೂ ಜಾಮೀನಿನ ಮೇಲೆ ಹೊರಬರುವಂತಾಗಿದೆ.

ಪ್ರಕರಣ ಸಂಬಂಧ ನ್ಯಾಯಾಂಗ ಬಂಧನದಲ್ಲಿರುವ ಮೋಹನ್‌ ನಾಯಕ್‌ ಜಾಮೀನು ಕೋರಿ ಸಲ್ಲಿಸಿದ್ದ ಅರ್ಜಿಯನ್ನು ಪುರಸ್ಕರಿಸಿದ ನ್ಯಾಯಮೂರ್ತಿ ಎಸ್‌. ವಿಶ್ವಜಿತ್ ಶೆಟ್ಟಿ ಅವರ ಪೀಠ ಈ ಆದೇಶ ಮಾಡಿದೆ. ಇಡೀ ಪ್ರಕರಣದಲ್ಲಿ ಜಾಮೀನು ಪಡೆದ ಮೊದಲ ಆರೋಪಿ ಮೋಹನ್ ನಾಯಕ್.

Journalist Gowri Lankesh Murder Case HC Grants Bail To 11th Accused

ಆರೋಪಿಯು 1 ಲಕ್ಷ ಮೌಲ್ಯದ ವೈಯಕ್ತಿಕ ಬಾಂಡ್ ಹಾಗೂ ಅಷ್ಟೇ ಮೊತ್ತಕ್ಕೆ ಇಬ್ಬರ ಭದ್ರತಾ ಖಾತರಿ ನೀಡಬೇಕು. ವಿಚಾರಣಾಧೀನ ನ್ಯಾಯಾಲಯದ ವಿಚಾರಣೆಗೆ ತಪ್ಪದೇ ಹಾಜರಾಗಬೇಕು. ಸಾಕ್ಷಿಗಳ ಮೇಲೆ ಪ್ರಭಾವ ಬೀರಬಾರದು. ಇದೇ ಮಾದರಿಯ ಅಪರಾಧ ಪ್ರಕರಣದಲ್ಲಿ ಭಾಗಿಯಾಗಬಾರದು ಎಂದು ಜಾಮೀನು ಮಂಜೂರಾತಿಗೆ ನ್ಯಾಯಾಲಯ ಷರತ್ತು ವಿಧಿಸಿದೆ.

ಪ್ರಕರಣದ ಹಿನ್ನೆಲೆ: 2017ರ ಸೆಪ್ಟೆಂಬರ್ 5ರಂದು ಕೆಲಸ ಮುಗಿಸಿ ಮನೆಗೆ ವಾಪಸ್ಸಾಗುತ್ತಿದ್ದಾಗ ಪತ್ರಕರ್ತೆ ಗೌರಿ ಲಂಕೇಶ್‌ ಮೇಲೆ ಗುಂಡು ಹಾರಿಸಿ ಹತ್ಯೆ ಮಾಡಲಾಗಿತ್ತು. ಹತ್ಯೆಯ ಪ್ರಮುಖ ರೂವಾರಿ ಅಮೋಲ್ ಕಾಳೆ. ಪರಶುರಾಮ್ ವಾಗ್ಮೋರೆ ಗುಂಡು ಹಾರಿಸಿದ್ದರೆ, ಬೈಕ್ ಚಲಾಯಿಸಿದ ಆರೋಪ ಗಣೇಶ್ ಮಿಸ್ಕಿನ್ ಮೇಲಿದೆ.

ಆರೋಪಿ ಮೋಹನ್ ನಾಯಕ್ ದಕ್ಷಿಣ ಕನ್ನಡ ಜಿಲ್ಲೆಯ ನಿವಾಸಿ. ಗೌರಿ ಲಂಕೇಶ್ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಆತನನ್ನು 2018ರ ಜುಲೈ 18ರಂದು ಬಂಧಿಸಲಾಗಿತ್ತು. ಆರೋಪಿ ಅಂದಿನಿಂಲೂ ನ್ಯಾಯಾಂಗ ಬಂಧನದಲ್ಲಿದ್ದ. ಜಾಮೀನು ಕೋರಿ ಹೈಕೋರ್ಟ್‌ ಮೆಟ್ಟಿಲೇರಿದ್ದ.

ಪ್ರಕರಣದ ತನಿಖೆ ನಡೆಸಿದ್ದ ವಿಶೇಷ ತನಿಖಾ ತಂಡ (ಎಸ್‌ಐಟಿ) 17 ಆರೋಪಿಗಳನ್ನು ಬಂಧಿಸಿ, ಅವರ ವಿರುದ್ಧ 8,500 ಪುಟಗಳ ದೋಷಾರೋಪ ಪಟ್ಟಿ ಸಲ್ಲಿಸಿತ್ತು. ಪ್ರಕರಣದಲ್ಲಿ ಒಟ್ಟು 527 ಸಾಕ್ಷಿಗಳಿದ್ದಾರೆ. ಪ್ರಕರಣದಲ್ಲಿ ಮೋಹನ್‌ ನಾಯಕ್‌ 11ನೇ ಆರೋಪಿಯಾಗಿದ್ದು, ಕೊಲೆಗೆ ಸಂಚು ರೂಪಿಸಿದ ಆರೋಪ ಆತನ ಮೇಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+