ಜೆಪಿ ನಡ್ಡಾಗೆ ರಾಜಕೀಯ ಜ್ಞಾನ ಇಲ್ಲ: ನೂರು ಬಾರಿ ಬಂದ್ರೂ ಪ್ರಯೋಜನವಿಲ್ಲ: ಸಿದ್ಧರಾಮಯ್ಯ
ಇನ್ನೂ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರು ಕಾಂಗ್ರೆಸ್ ಗೆ ಸಿದ್ದಾಂತ ಇಲ್ಲ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.
ಚಿತ್ರದುರ್ಗ,ಫೆಬ್ರವರಿ22: ಕರ್ನಾಟಕ ವಿಧಾನಸಭಾ ಚುನಾವಣೆ ಸಮೀಪಿಸುತ್ತಿದ್ದಂತೆ ರಾಜಕೀಯ ಪಕ್ಷಗಳ ಆರೋಪ ಪ್ರತ್ಯಾರೋಪಗಳು ಹೆಚ್ಚಾಗುತ್ತಿವೆ. ಈ ನಡುವೆ ಸಿದ್ದರಾಮಯ್ಯ ವಿರುದ್ದ ಸಚಿವ ಅಶ್ವತ್ಥ ನಾರಾಯಣ್ ಅವರು ಕೊಟ್ಟ ಹೇಳಿಕೆಯಿಂದಾಗಿ ರಾಜ್ಯ ರಾಜಕಾರಣದಲ್ಲಿ ಈ ಕುರಿತು ಸಾಕಷ್ಟು ಚರ್ಚೆಯಾಗಿತ್ತು.
ಇನ್ನೂ ರಾಜ್ಯಕ್ಕೆ ಆಗಮಿಸಿರುವ ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ ಪಿ ನಡ್ಡಾ ಅವರು ಕಾಂಗ್ರೆಸ್ ಗೆ ಸಿದ್ದಾಂತ ಇಲ್ಲ ಹೇಳಿಕೆಗೆ ವಿರೋಧ ಪಕ್ಷದ ನಾಯಕ ಸಿದ್ಧರಾಮಯ್ಯ ತಿರುಗೇಟು ನೀಡಿದ್ದಾರೆ.
ನಳೀನ್ ಕುಮಾರ್ ಕಟೀಲ್ ಗೆ ರಾಜಕೀಯ ಜ್ಞಾನ ಇಲ್ಲ ಅಂದುಕೊಂಡಿದ್ದೆ ಜೆಪಿ ನಡ್ಡಾಗೂ ರಾಜಕೀಯ ಜ್ಞಾನ ಇಲ್ಲ. ರಾಜ್ಯಕ್ಕೆ 100 ಬಾರಿ ಬಂದರೂ ಪ್ರಯೋಜನವಿಲ್ಲ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ವಾಗ್ದಾಳಿ ನಡೆಸಿದ್ದಾರೆ.

ಬಿಜೆಪಿ ಪಕ್ಷ ಜನರ ಪ್ರಚೋದನೆ ಮಾಡಿ, ದ್ವೇಷದ ರಾಜಕಾರಣ ಮಾಡುವುದೇ ಸಿದ್ದಾಂತವಾಗಿದೆ ಎಂದು ಸಿದ್ದರಾಮಯ್ಯ ಕಿಡಿಕಾರಿದ್ದಾರೆ. ಟಿಪ್ಪು ಸುಲ್ತಾನ್ ಚರ್ಚೆ ಸಿದ್ದಾಂತ ನಾ, ಸಾವರ್ಕರ್- ಗಾಂಧಿ ಚರ್ಚೆ ಸಿದ್ದಾಂತ ನಾ? ಸಿದ್ದರಾಮಯ್ಯ ಅವರನ್ನ ಮುಗಿಸಿ ಎಂಬುದು ಸಿದ್ದಾಂತ ನಾ ಎಂದು ಬಿಜೆಪಿಗೆ ಸಿದ್ದರಾಮಯ್ಯ ಅವರು ಪ್ರಶ್ನೆ ಹಾಕಿದ್ದಾರೆ.
ಜನರ ಸಮಸ್ಯೆಗಳನ್ನು ಪರಿಹಾರ ಮಾಡುವುದಕ್ಕೆ ಸಿದ್ದಾಂತ ಎನ್ನುತಾರೆ. ಇವರದು ಯಾವ ಸಿದ್ದಾಂತ ಇದೆ. ಜನ ತೀರ್ಮಾನ ಮಾಡಿದ್ದಾರೆ. ರಾಜ್ಯದಲ್ಲಿ ಬಿಜೆಪಿಯನ್ನ ಈ ಬಾರಿ ಜನ ಸೋಲಿಸುತ್ತಾರೆ. ಕಾಂಗ್ರೇಸ್ ಪಕ್ಷ ಅಧಿಕಾರಕ್ಕೆ ಬರಲಿದೆ ಎಂದು ವಿಶ್ವಾಸ ವ್ಯಕ್ತಪಡಿಸಿದರು.
ಕಾಂಗ್ರೆಸ್ ಮುಸ್ಲಿಂ ಓಲೈಕೆಗೆ ರಾಜಕೀಯ ಮಾಡುತ್ತಿದ್ದಾರೆ ಎಂಬ ಪ್ರಶ್ನೆಗೆ ಉತ್ತರಿಸಿದ ಅವರು, ನಾವು ಎಲ್ಲರನ್ನ ಮನುಷ್ಯರು ಎಂದು ತೀರ್ಮಾನ ಮಾಡಿದ್ದೇವೆ . ಹಿಂದೂ- ಮುಸ್ಲಿಂ- ಕ್ರಿಶ್ಚಿಯನ್, ದಲಿತರು ಕೂಡ ಮನುಷ್ಯರೇ ಅಲ್ಲವೇ ಎಂದು ಸಿದ್ದು ತಿಳಿಸಿದರು.

ನಗರ ಹಾಗೂ ಗ್ರಾಮೀಣ ಪ್ರದೇಶಗಳಲ್ಲಿ ನಿರ್ಮಾಣವಾಗಿರುವ ಶುದ್ಧ ಕುಡಿಯುವ ನೀರಿನ ಘಟಕದಲ್ಲಿ ಬಾರಿ ಅವ್ಯವಹಾರ ಆಗಿದೆ ಎಂದು ಸಿದ್ದರಾಮಯ್ಯ ಆರೋಪಿಸಿದರು. ಒಂದು ವೇಳೆ ನನ್ನ ಅವಧಿಯಲ್ಲಿ ಅವ್ಯವಹಾರ ಆಗಿದ್ದರೂ ಕೂಡಾ ತನಿಖೆ ಮಾಡಿ ಎಂದು ಬಿಜೆಪಿಗೆ ಹೇಳಿದರು.
ನಾವು ಏನೇ ಆರೋಪ ಮಾಡಿದರೂ ದಾಖಲೆ ಕೊಡಿ ಎಂದು ಹೇಳುತ್ತಾರೆ. ನನ್ನ ಅವಧಿಯಲ್ಲಿ 8 ಬಾರಿ ಸಿಬಿಐ ತನಿಖೆಗೆ ಕೊಟ್ಟಿದ್ದೆ. ನೀವು ತನಿಖೆ ಮಾಡಿ, ನಿಮ್ಮ ಕೈ ಯಾರು ಹಿಡಿದುಕೊಂಡಿಲ್ಲ. ನನ್ನ ಕಾಲದ ಭ್ರಷ್ಟಾಚಾರದ ದಾಖಲೆ ಇದ್ದರೇ ತನಿಖೆ ಮಾಡಿ. ಅದನ್ನು ಬಿಟ್ಟು 40% ಕಮಿಷನ್ ಕೂಡಾ ತನಿಖೆ ಮಾಡಿ ಯಾಕೆ ಹಿಂದೇಟು ಹೊಡೆಯುತ್ತೀರಿ ಎಂದರು.
ಶೋಭ ಕರಂದ್ಲಾಜೆ ಅವರು ಹೆಣ್ಣು ಮಗಳು. ಅವರಿಗೆ ಜಾತಿ, ಧರ್ಮ ಅಂದರೆ ಗೊತ್ತಿಲ್ಲ. ನಾವು ಎಲ್ಲಾ ಜಾತಿ, ಧರ್ಮಗಳ ಮೇಲೆ ಗೌರ ಇಟ್ಟುಕೊಂಡಿದ್ದೇವೆ. ನಮ್ಮ ಕಾಂಗ್ರೆಸ್ ಸರ್ಕಾರದಿಂದ ಎಲ್ಲಾ ಜಾತಿಯ ಬಡವರಿಗೆ ವಿವಿಧ ಕಾರ್ಯಕ್ರಮಗಳನ್ನು ನೀಡಲಾಗಿದೆ ಎಂದರು. ಅನ್ನ ಭಾಗ್ಯ ಒಂದು ಜಾತಿ ಧರ್ಮಕ್ಕೆ ನಾವು ಕೊಟ್ಟಿಲ್ಲ. ಇಂದಿರಾ ಕ್ಯಾಂಟಿನ್ ಹಿಂದೂಗಳಿಗೆ ಮಾತ್ರ ಕೊಟ್ಟಿಲ್ಲ ಎಲ್ಲಾ ಜಾತಿ ಜನಾಂಗ ಹಾಗೂ ಧರ್ಮದವರಿಗೆ ನೀಡಲಾಗಿದೆ ಎಂದು ಹೇಳಿದರು.












Click it and Unblock the Notifications