ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಜೆಎಸ್‌ಡಬ್ಲ್ಯೂ ಸ್ಟೀಲ್ ಕಂಪನಿಯಿಂದ ರಾಜ್ಯದಲ್ಲಿ ದಿನಕ್ಕೆ 400 ಟನ್ ಆಮ್ಲಜನಕ ಪೂರೈಕೆ ‌

|
Google Oneindia Kannada News

ಬೆಂಗಳೂರು, ಏಪ್ರಿಲ್ 20: ಕೊವಿಡ್ -19 ರೋಗಿಗಳಿಗೆ ಚಿಕಿತ್ಸೆ ನೀಡಲು ರಾಜ್ಯಕ್ಕೆ ದಿನಕ್ಕೆ 400 ಟನ್ ಆಮ್ಲಜನಕ ಪೂರೈಕೆ ಮಾಡಲು ಜೆಎಸ್‌ಡಬ್ಲ್ಯೂ ಸ್ಟೀಲ್ ಕಂಪನಿ ಒಪ್ಪಿಕೊಂಡಿದೆ.

ಮಂಗಳವಾರ ಗಣಿ ಮತ್ತು ಭೂವಿಜ್ಞಾನ ಸಚಿವ ಮುರುಗೇಶ್ ಆರ್ ನಿರಾಣಿ ಅವರು, ಜೆಎಸ್‌ಡಬ್ಲ್ಯೂ ಸ್ಟೀಲ್ ಉಪ ವ್ಯವಸ್ಥಾಪಕ ನಿರ್ದೇಶಕ ಡಾ.ವಿನೋದ್ ನೋವಲ್ ನೇತೃತ್ವದ ಪ್ರತಿನಿಧಿಗಳ ಸಭೆ ನಡಸಿದ ಬಳಿಕ ಈ ಮಹತ್ವದ ತೀರ್ಮಾನ ಕೈಗೊಳ್ಳಲಾಗಿದೆ.

ಕೊರೊನಾ ಕರ್ಫ್ಯೂ: ಹೊಸ ಕಠಿಣ ಮಾರ್ಗಸೂಚಿ ಪ್ರಕಟ, ಏನಿರುತ್ತೆ? ಏನಿರಲ್ಲ?ಕೊರೊನಾ ಕರ್ಫ್ಯೂ: ಹೊಸ ಕಠಿಣ ಮಾರ್ಗಸೂಚಿ ಪ್ರಕಟ, ಏನಿರುತ್ತೆ? ಏನಿರಲ್ಲ?

ಕೊವಿಡ್ -19 ಪ್ರಕರಣಗಳ ಸಂಖ್ಯೆಯು ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದು, ಅಪಾರ ಸಂಖ್ಯೆಯ ರೋಗಿಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದರಿಂದಾಗಿ ತೀವ್ರ ನಿಗಾ ಘಟಕಗಳಲ್ಲಿ (ಐಸಿಯು) ದಾಖಲಾದ ರೋಗಿಗಳಿಗೆ ಆಮ್ಲಜನಕದ ಪೂರೈಕೆಯ ಕೊರತೆ ಗಂಭೀರ ಸ್ಥಿತಿಯಲ್ಲಿದೆ ಎಂದು ಕಳವಳ ವ್ಯಕ್ಯಪಡಿಸಿದರು. ಆಮ್ಲಜನಕದ ಕೊರತೆಯಿಂದ ‌ರಾಜ್ಯದ ಆರೋಗ್ಯ ವ್ಯವಸ್ಥೆಯಲ್ಲಿ ‌ಏರುಪೇರು ಉಂಟಾಗಿದೆ‌. ಆಸ್ಪತ್ರೆಗಳಿಗೆ ಆಮ್ಲಜನಕದ ಪೂರೈಕೆಯನ್ನು ಹೆಚ್ಚಿಸಬೇಕೆಂಬ ಬೇಡಿಕೆಯನ್ನು ಸಭೆಯಲ್ಲಿ ಮುಂದಿಟ್ಟರು.

JSW Steel Company Agreed To Supply 400 Tonnes Of Oxygen To Treat Covid 19 Patients

ಕೊವಿಡ್ -19 ಸಾಂಕ್ರಾಮಿಕ ರೋಗದಿಂದ ಉಂಟಾಗುವ ಸಾರ್ವಜನಿಕ ಆರೋಗ್ಯ ಪರಿಸ್ಥಿತಿ ನಿಭಾಯಿಸಲು ಬೃಹತ್ ಪ್ರಮಾಣದಲ್ಲಿ ಆಮ್ಲಜನಕ ಉತ್ಪಾದಿಸುವ ಅಗತ್ಯವನ್ನು ಸಚಿವರು ಒತ್ತಿ ಹೇಳಿದರು. ಸಭೆಯಲ್ಲಿ ಹಾಜರಿದ್ದ ಜೆಎಸ್‌ಡಬ್ಲ್ಯು ಸ್ಟೀಲ್‌ನ ಉಪ ವ್ಯವಸ್ಥಾಪಕ ನಿರ್ದೇಶಕ ಡಾ.ವಿನೋದ್ ನೋವಲ್ ಅವರು ದಿನಕ್ಕೆ 400 ಟನ್ ಆಮ್ಲಜನಕವನ್ನು ಪೂರೈಸಲು ಸಮ್ಮತಿಸಿದರು. ಈ ಬಿಕ್ಕಟ್ಟನ್ನು ನಿಭಾಯಿಸಲು ಕರ್ನಾಟಕ ಸರ್ಕಾರಕ್ಕೆ ಎಲ್ಲ ಸಹಕಾರವನ್ನು ನೀಡುವುದಾಗಿ ಭರವಸೆ ನೀಡಿದರು.

ಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯಪಾಲರ ಸೂಚನೆಕೊರೊನಾ ನಿಯಂತ್ರಣಕ್ಕೆ ಕಠಿಣ ಕ್ರಮ ಕೈಗೊಳ್ಳಲು ರಾಜ್ಯಪಾಲರ ಸೂಚನೆ

ನಿರ್ಣಾಯಕ ಹಂತದಲ್ಲಿ ಆಸ್ಪತ್ರೆಗಳಿಗೆ ಆಮ್ಲಜನಕ ಉತ್ಪಾದಿಸಲು ಮತ್ತು ಪೂರೈಸಲು ಉಕ್ಕಿನ ಕಂಪನಿಗಳು ಮುಂದಾಗಿವೆ ಎಂದು ಸಚಿವ ನಿರಣಿ ಹೇಳಿದರು. ಸಾಂಕ್ರಾಮಿಕ ರೋಗವು ನಮ್ಮ ವ್ಯವಸ್ಥೆಗೆ ದೊಡ್ಡ ಸವಾಲುಗಳನ್ನು ಸೃಷ್ಟಿಸಿದೆ. ಇದು ಅನೇಕ ಕುಟುಂಬಗಳಲ್ಲಿ ಆರ್ಥಿಕ ಬಿಕ್ಕಟ್ಟಿಗೆ ಕಾರಣವಾಗಿದೆ. ಮಾರಣಾಂತಿಕ ವೈರಸ್ ಹಿಮ್ಮೆಟ್ಟಿಸಲು ಎಲ್ಲರೂ ಸರ್ಕಾರದೊಂದಿಗೆ ಕೈಜೋಡಿಸಬೇಕು ಎಂದು ಮನವಿ ಮಾಡಿದರು.

Recommended Video

'ಕೊರೊನಾ ಚೈನ್‌‌ ಲಿಂಕ್‌ ಕಟ್‌ ಮಾಡಲು 14 ದಿನಗಳ ಕಠಿಣ ಕ್ರಮ ಅಗತ್ಯ'- ಆರೋಗ್ಯ ಸಚಿವ ಕೆ.ಸುಧಾಕರ್‌ | Oneindia

English summary
JSW Steel Company agreed to supply 400 tonnes of oxygen per day to the state to treat covid-19 patients,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X